ಭಾರತದಲ್ಲಿ ಒಪ್ಪೋ A78 5G ಬಿಡುಗಡೆಗೆ ತಯಾರಿ! ಫೀಚರ್ಸ್‌ ಹೇಗಿದೆ ಗೊತ್ತಾ?

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಮೂಲಕ ಭಾರತದ ಮಾರುಕಟ್ಟೆಯಲ್ಲಿ ತನ್ನದೇ ಆದ ಪ್ರಾಬಲ್ಯವನ್ನು ಸಾಧಿಸಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೋ A78 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುವುದಕ್ಕೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜನವರಿ 14 ರಂದು ಭಾರತದಲ್ಲಿ ಬಿಡುಗಡೆಯಾಗೋದು ಪಕ್ಕಾ ಆಗಿದೆ.

ಭಾರತದಲ್ಲಿ ಒಪ್ಪೋ A78 5G ಬಿಡುಗಡೆಗೆ ತಯಾರಿ! ಫೀಚರ್ಸ್‌ ಹೇಗಿದೆ ಗೊತ್ತಾ?

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ A78 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರ ನಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಬರುವ ಸಾಧ್ಯತೆಯಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ A78 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1200 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ. ಇನ್ನು ಡಿಸ್‌ಪ್ಲೇ 269 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿರಬಹುದು ಎನ್ನಲಾಗಿದೆ. ಜೊತೆಗೆ 90 Hz ರಿಫ್ರೆಶ್ ರೇಟ್‌ ಬೆಂಬಲಿಸುವ ಡಿಸ್‌ಪ್ಲೇ ಇದಾಗಿರಲಿದೆ ಎಂದು ಅಂದಾಜಿಸಲಾಗಿದೆ.

ಭಾರತದಲ್ಲಿ ಒಪ್ಪೋ A78 5G ಬಿಡುಗಡೆಗೆ ತಯಾರಿ! ಫೀಚರ್ಸ್‌ ಹೇಗಿದೆ ಗೊತ್ತಾ?

ಪ್ರೊಸೆಸರ್‌ ಯಾವುದು?
ಒಪ್ಪೋ A78 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ವೇಗವನ್ನು ಹೊಂದಿರುವ ನಿರೀಕ್ಷೆಯಿದೆ. ಇದು ಆಂಡ್ರಾಯ್ಡ್‌ 13-ಆಧಾರಿತ ColorOS 13.0 ನಲ್ಲಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ಸಿಗಲಿದೆ ಎಂದು ಹೇಳಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?
ಒಪ್ಪೋ A78 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ ಲೆನ್ಸ್ ಹೊಂದಿರಲಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಇತರೆ
ಒಪ್ಪೋ A78 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌, ಹಾಟ್‌ಸ್ಪಾಟ್‌, ವೈಫೈ ಅನ್ನು ಬೆಂಬಲಿಸಲಿದೆ.

ಭಾರತದಲ್ಲಿ ಒಪ್ಪೋ A78 5G ಬಿಡುಗಡೆಗೆ ತಯಾರಿ! ಫೀಚರ್ಸ್‌ ಹೇಗಿದೆ ಗೊತ್ತಾ?

ಬೆಲೆ ಮತ್ತು ಲಭ್ಯತೆ
ಒಪ್ಪೋ A78 5G ಸ್ಮಾರ್ಟ್‌ಫೋನ್‌ನ ಬೇಸ್ ಮಾಡೆಲ್‌ ಬೆಲೆ ಭಾರತದಲ್ಲಿ 18,500ರೂ. ಮತ್ತು 19,000ರೂ ನಡುವೆ ಇರಲಿದೆ ಎನ್ನಲಾಗಿದೆ. ಆದರೆ ಬೆಲೆ ವಿವರ ಇನ್ನು ಕೂಡ ಅಂತಿಮವಾಗಿ ಅಧಿಕೃತವಾಗಿಲ್ಲ. ಆದರಿಂದ ಈ ಫೋನ್‌ನ ಬಿಡುಗಡೆ ದಿನಾಂಕ ಅಧಿಕೃತವಾದ ನಂತರ ಇದರ ಅಸಲಿ ಬೆಲೆ ವಿವರ ಬಹಿರಂಗವಾಗಲಿದೆ.

ಇನ್ನು ಒಪ್ಪೋ ಕಂಪೆನಿ ಕಳೆದ ವರ್ಷ ಒಪ್ಪೋ A77 5G ಫೋನ್‌ ಲಾಂಚ್‌ ಮಾಡಿತ್ತು. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್‌ 90Hz ರಿಫ್ರೆಶ್ ರೇಟ್‌ ಬೆಂಬಲಿಸುವ 6.56 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ.

Best Mobiles in India

English summary
Oppo A78 5G Launch Date tipped in India: Report

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X