ದೇಶಿಯ ಮಾರುಕಟ್ಟೆಗೆ 'ಒಪ್ಪೋ A78 5G' ಲಾಂಚ್‌;..ಇದ್ರಲ್ಲಿ ಜಬರ್ದಸ್ತ್‌ ಫೀಚರ್ಸ್‌!

|

ಒಪ್ಪೋ ಕಂಪೆನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ಒಪ್ಪೋ A78 5G ಇದೀಗ ಭಾರತದಲ್ಲಿ ಲಾಂಚ್ ಆಗಿದೆ. ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದ್ದು, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5G ಸ್ಮಾರ್ಟ್‌ಫೋನ್ ಆಗಿದ್ದು ಡ್ಯುಯಲ್ ಮೋಡ್ 5G ಗೆ ಬೆಂಬಲವನ್ನು ನೀಡಲಿದೆ.

ಮಾರುಕಟ್ಟೆಯಲ್ಲಿ

ಹೌದು, ಒಪ್ಪೋ ಕಂಪೆನಿ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಒಪ್ಪೋ A78 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ಆಯ್ಕೆ ಪಡೆದಿದ್ದು, ಇದು 6.56 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಜೊತೆಗೆ 33W ಸೂಪರ್‌ವೋಕ್‌ ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಒಪ್ಪೋ A78 5G ಸ್ಮಾರ್ಟ್‌ಫೋನ್‌ 6.56 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದು 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಒಪ್ಪೋ A78 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ಕಲರ್‌ಒಎಸ್‌ 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಬೆಂಬಲಿಸಲಿದೆ. ಇದರಲ್ಲಿ ಆನ್‌ಬೋರ್ಡ್‌ ಸ್ಟೋರೇಜ್‌ ಬಳಸಿಕೊಂಡು 5GB ವರೆಗೆ RAM ವಿಸ್ತರಿಸಬಹುದು.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒಪ್ಪೋ A78 5G ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾಗಳು 30fps ನಲ್ಲಿ ಫುಲ್‌-HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿವೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಒಪ್ಪೋ A78 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ಸೂಪರ್‌ ವೂಕ್‌ ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಈ ಫೋನ್‌ 8.5 ಗಂಟೆಗಳ ಗೇಮಿಂಗ್ ಸಮಯವನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A78 5G ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 18,999ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಮೆಜಾನ್ ಹಾಗೂ ಅಧಿಕೃತ ಒಪ್ಪೋ ಸ್ಟೋರ್‌ಗಳಲ್ಲಿ ಮುಂಗಡ ಬುಕಿಂಗ್‌ಗೆ ಲಭ್ಯ ಇದೆ. ಇದೇ ಜ.18 ರಿಂದ ಮಾರಾಟ ಪ್ರಾರಂಭಿಸಲಿದೆ. ಈ ಫೋನ್‌ ಬ್ಲ್ಯಾಕ್ ಮತ್ತು ಬ್ಲೂ ಬಣ್ಣದ ಆಯ್ಕೆಗಳಲ್ಲಿ ದೊರೆಯಲಿದೆ.

Best Mobiles in India

English summary
Oppo A78 5G with MediaTek Dimensity 700 Launched in India: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X