Home
ಸುದ್ದಿಜಾಲ

ಎಂಟ್ರಿ ಕೊಟ್ಟಿದೆ 'ಒಪ್ಪೋ A78' ಫೋನ್‌; ಮಾರುಕಟ್ಟೆಯಲ್ಲಿ ಹೊಸ ಅಲೆ ಶುರು!

ಒಪ್ಪೋ ಮೊಬೈಲ್‌ ಸಂಸ್ಥೆಯು ಭಾರತದಲ್ಲಿ ಈಗ ಹೊಸ ಒಪ್ಪೋ A78 ಫೋನ್‌ ಅನ್ನು ಬಿಡುಗಡೆ ಮಾಡುವ ಮೂಲಕ ತನ್ನ A ಸರಣಿಯಗೆ ಈಗ ಹೊಸ ಸೇರ್ಪಡೆ ಮಾಡಿಕೊಂಡಿದೆ. ಇದು ಅಪ್‌ಗ್ರೇಡ್‌ ಆವೃತ್ತಿಯ ಫೋನ್‌ ಆಗಿದ್ದು, ಇದು ಅಕ್ವಾ ಗ್ರೀನ್‌ ಹಾಗೂ ಮಿಸ್ಟ್‌ ಬ್ಲ್ಯಾಕ್‌ ಕಲರ್‌ ಆಯ್ಕೆ ಅನ್ನು ಒಳಗೊಂಡಿದೆ.

ಹೌದು, ಒಪ್ಪೋ ಕಂಪೆನಿ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಒಪ್ಪೋ A78 ಮೊಬೈಲ್‌ ಅನ್ನು ಲಾಂಚ್ ಮಾಡಿದ್ದು, ಮೊಬೈಲ್‌ ಪ್ರಿಯರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಬಲದಲ್ಲಿದೆ.

ಎಂಟ್ರಿ ಕೊಟ್ಟಿದೆ 'ಒಪ್ಪೋ A78' ಫೋನ್‌; ಮಾರುಕಟ್ಟೆಯಲ್ಲಿ ಹೊಸ ಅಲೆ ಶುರು!

ಒಪ್ಪೋ A78 ಮೊಬೈಲ್‌ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 67W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಸಹ ಒಳಗೊಂಡಿದೆ. ಹಾಗೆಯೇ ಈ ಫೋನಿನ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಆಗಿದೆ. ಇನ್ನುಳಿದಂತೆ ಒಪ್ಪೋ A78 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ A78 ಡಿಸ್‌ಪ್ಲೇ ರಚನೆ ಹೇಗಿದೆ : ಒಪ್ಪೋ A78 ಸ್ಮಾರ್ಟ್‌ಫೋನ್‌ 6.56 ಇಂಚಿನ HD+ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇ 720 x 1,612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒದಗಿಸಲಿದೆ. ಗೊರಿಲ್ಲಾ ಗ್ಲಾಸ್‌ 5 ರಕ್ಷಣೆ ಸಹ ಪಡೆದಿದೆ.

ಒಪ್ಪೋ A78 ಪ್ರೊಸೆಸರ್‌ ಯಾವುದು : ಒಪ್ಪೋ A78 ಮೊಬೈಲ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ ವೇಗವನ್ನು ಪಡೆದಿದ್ದು, ಇದು ಆಂಡ್ರಾಯ್ಡ್‌ 12 ಆಧಾರಿತ ಕಲರ್‌ಒಎಸ್‌ 12.1 ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 8GB RAM ಮತ್ತು 256GB ಆಂತರೀಕ ಸ್ಟೋರೇಜ್‌ ಅನ್ನು ಸಪೋರ್ಟ್‌ ಪಡೆದಿದೆ. ಇದರಲ್ಲಿ ಆನ್‌ಬೋರ್ಡ್‌ ಸ್ಟೋರೇಜ್‌ ಬಳಸಿಕೊಂಡು 5GB ವರೆಗೆ RAM ವಿಸ್ತರಿಸಬಹುದು.

ಒಪ್ಪೋ A78 ಕ್ಯಾಮೆರಾ ಸೆಟ್‌ಅಪ್‌ ಏನಿದೆ : ಒಪ್ಪೋ A78 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಸೆಕೆಂಡರಿ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋಟ್ರೇಟ್ ಸೆನ್ಸಾರ್ ಜೊತೆಗೆ f/2.4 ಲೆನ್ಸ್‌ ಅನ್ನು ಒಳಗೊಂಡಿದೆ. ಇದರ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾಗಳು 30fps ನಲ್ಲಿ ಫುಲ್‌-HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯ ಸಹ ಹೊಂದಿವೆ.

ಒಪ್ಪೋ A78 ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ : ಒಪ್ಪೋ A78 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 67W ಫಾಸ್ಟ್‌ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ v5.3 ವಾಯರ್‌ಲೆಸ್ ಸಂಪರ್ಕವನ್ನು ಒದಗಿಸುತ್ತದೆ. ಅಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸೌಲಭ್ಯಗಳ ಸಪೋರ್ಟ್‌ ಇದೆ.

ಒಪ್ಪೋ A78 ಬೆಲೆ ಮತ್ತು ಲಭ್ಯತೆ : ಒಪ್ಪೋ A78 ಮೊಬೈಲ್‌ 8GB + 128GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 17,499ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಅಧಿಕೃತ ವಿವೋ ವೆಬ್‌ಸೈಟ್‌, ಪ್ರಮುಖ ರಿಟೇಲ್‌ ಹಾಗೂ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ. ಇನ್ನು ಈ ಫೋನ್‌ ಅಕ್ವಾ ಗ್ರೀನ್‌ ಹಾಗೂ ಮಿಸ್ಟ್‌ ಬ್ಲ್ಯಾಕ್‌ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ.

Best Mobiles in India

English summary
OPPO A78 With Snapdragon 680 SoC Launched In India. price, specifications and more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+