ಒಪ್ಪೋದ ಈ ಸ್ಟೈಲಿಶ್ 5G ಫೋನ್ ಬೆಲೆಯಲ್ಲಿ ಆಕರ್ಷಕ ಇಳಿಕೆ!..ಖರೀದಿ ಮಾಡ್ತೀರಾ?
ಜನಪ್ರಿಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ಮೊಬೈಲ್‌ಗಳಿಗೆ ಒಮದಿಲ್ಲೊಂದು ಕೊಡುಗೆ ಲಭ್ಯ ಇರುತ್ತದೆ. ಈ ತಾಣದಲ್ಲಿ ಒಪ್ಪೋ ಸಂಸ್ಥೆಯ ಒಪ್ಪೋ A79 5G ಮೊಬೈಲ್ ಸಹ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಖರೀದಿದಾರರ ಗಮನ ಸೆಳೆದಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ A79 5G ಮೊಬೈಲ್ ಶೇ. 23% ರಷ್ಟು ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8GB RAM + 128GB ಸ್ಟೋರೇಜ್ ವೇರಿಯಂಟ್‌ನ ಆಫರ್ ದರವು 17,499ರೂ. ಗಳು ಆಗಿದೆ. ಇದಲ್ಲದೇ ಖರೀದಿದಾರರು ಲಭ್ಯ ಇರುವ ಎಕ್ಸ್‌ಚೆಂಜ್ ಆಫರ್ ಹಾಗೂ ಇತರೆ ರಿಯಾಯಿತಿ ಪಡೆದುಕೊಂಡರೆ, ಈ ಫೋನ್ ಮತ್ತಷ್ಟು ಡಿಸ್ಕೌಂಟ್‌ನಲ್ಲಿ ಖರೀದಿಸಬಹುದಾಗಿದೆ.

ಇನ್ನು ಒಪ್ಪೋದ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ಪವರ್ ಅನ್ನು ಪಡೆದುಕೊಂಡಿದ್ದು, 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಸೌಲಭ್ಯ ಒಳಗೊಂಡಿದೆ. ಇನ್ನುಳಿದಂತೆ ಒಪ್ಪೋ A79 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ ಸಂಸ್ಥೆಯ ಈ ಫೋನ್ 6.72 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 2400 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಅಲ್ಲದೇ 91.4% ಡಿಸ್‌ಪ್ಲೇ ರಚನೆಯ ಅನುಪಾತವನ್ನು ಹೊಂದಿದ್ದು, ಇದರ ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಪಡೆದಿದೆ.
ಪ್ರೊಸೆಸರ್ ಪವರ್
ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ಪವರ್ ಸಾಮರ್ಥ್ಯ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ ಆಂಡ್ರಾಯ್ಡ್ 13 OS ಆಧಾರಿತ ಕಲರ್ಓಎಸ್ 13 ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಅದೇ ರೀತಿ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆ ಅನ್ನು ಕೂಡಾ ಪಡೆದಿದೆ. ಅಲ್ಲದೇ ಎಸ್‌ಡಿ ಮೆಮೊರಿ ಕಾರ್ಡ್ ಸಪೋರ್ಟ್ ಜೊತೆಗೆ 1TB ವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ಪಡೆದಿದೆ.
ಕ್ಯಾಮೆರಾ ಸೆನ್ಸಾರ್
ಒಪ್ಪೋ A79 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ಇನ್ನು ದ್ವಿತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪೋರ್ಟ್ರೇಟ್ ಲೆನ್ಸ್ ಅನ್ನು ಪಡೆದಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಈ ಮೊಬೈಲ್‌ನ ಹಿಂಬದಿಯ ಕ್ಯಾಮೆರಾಗಳಿಗೆ ರಿಂಗ್ ಹೌಸಿಂಗ್ ಟಚ್ ಒದಗಿಸಲಾಗಿದೆ.
ಬ್ಯಾಟರಿ ಹಾಗೂ ಇತರೆ ಆಯ್ಕೆ
ಒಪ್ಪೋ A79 5G ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಜೊತೆಗೆ 33W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.3, ಯುಎಸ್‌ಬಿ ಟೈಪ್-ಸಿ, ಇಯರ್‌ಫೋನ್ ಜ್ಯಾಕ್ ಅನ್ನು ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್ 3.5ಮಿ.ಮೀ ಸ್ಟೀರಿಯೋ ಸಪೋರ್ಟ್ ನೊಂದಿಗೆ ಡ್ಯುಯಲ್ ಸ್ಪೀಕರ್ ರಚನೆ ಅನ್ನು ಹೊಂದಿದೆ.
ಸ್ಟೋರೇಜ್ ಹಾಗೂ ಕಲರ್ ಆಯ್ಕೆ
ಒಪ್ಪೋ A79 5G ಮೊಬೈಲ್ 8GB RAM ಮತ್ತು 128GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ ಗ್ಲೋಯಿಂಗ್ ಗ್ರೀನ್ ಮತ್ತು ಮಿಸ್ಟರಿ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ದೊರೆಯುತ್ತದೆ.


Click it and Unblock the Notifications








