OPPO:ಭಾರತದಲ್ಲಿ ಲಾಂಚ್ ಆಯ್ತು ಒಪ್ಪೋ A79 5G ಫೋನ್! ಜಬರ್ದಸ್ತ್ ಕ್ಯಾಮೆರಾ ಫೀಚರ್ಸ್!
ಒಪ್ಪೋ ಕಂಪೆನಿಯ ಫೋನ್‌ಗಳಿಗೆ ಭಾರತದಲ್ಲಿ ಉತ್ತಮ ಬೇಡಿಕೆಯಿದೆ. ವಿಭಿನ್ನ ಶೈಲಿಯ ಸೆಲ್ಫಿ ಕ್ಯಾಮೆರಾ ಮಾಡ್ಯೂಲ್ ಹಾಗೂ ಬ್ಯಾಟರಿ ಬ್ಯಾಕ್‌ಅಪ್‌ಗಳಿಂದಾಗಿ ಒಪ್ಪೋ ಫೋನ್‌ಗಳಿಗೆ ವಿಶೇಷ ಸ್ಥಾನವಿದೆ. ಇದೀಗ ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ A79 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್ ಎನಿಸಿಕೊಂಡಿದೆ.
ಹೌದು, ಒಪ್ಪೋ A79 5G ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಮಧ್ಯಮ ಶ್ರೇಣಿ ಆಗಿದ್ದರೂ ಸಹ ಪ್ರೀಮಿಯಂ ಆಗಿ ಕಾಣುವಂತೆ ವಿನ್ಯಾಸಗೊಳಿಸಲಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ A79 5G ಡಿಸ್‌ಪ್ಲೇ ವಿನ್ಯಾಸ ಹೇಗಿದೆ?
ಒಪ್ಪೋ A79 5G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್‌ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2400x1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂಡಿದೆ. ಇದು 91.4% ಡಿಸ್‌ಪ್ಲೇ ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, "ಆಲ್-ಡೇ AI ಐ ಕಂಫರ್ಟ್" ಟೆಕ್ನಾಲಜಿಯನ್ನು ಒಳಗೊಂಡಿದೆ.
ಒಪ್ಪೋ A79 5G ಪ್ರೊಸೆಸರ್ ಯಾವುದು?
ಒಪ್ಪೋ A79 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6020 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 OS ಆಧಾರಿತ ColorOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದೊಂದಿಗೆ ಬರಲಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.

ಒಪ್ಪೋ A79 5G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ A79 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಪೋರ್ಟ್ರೇಟ್ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಸ್ಮಾರ್ಟ್‌ಫೋನ್‌ನ ಹಿಂಬದಿಯ ಕ್ಯಾಮೆರಾಗಳನ್ನು ಹೊಳೆಯುವ ರಿಂಗ್ ಹೌಸಿಂಗ್‌ನಲ್ಲಿ ಇರಿಸಿರುವುದು ಮೇನ್ ಹೈಲೈಟ್ ಆಗಿದೆ.
ಒಪ್ಪೋ A79 5G ಬ್ಯಾಟರಿ ಮತ್ತು ಇತರೆ
ಒಪ್ಪೋ A79 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5.3, ಯುಎಸ್‌ಬಿ ಟೈಪ್-ಸಿ, ಇಯರ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 3.5ಮಿ.ಮೀ ಸ್ಟೀರಿಯೋ ಬೆಂಬಲದೊಂದಿಗೆ ಡ್ಯುಯಲ್ ಸ್ಪೀಕರ್ ಸೆಟಪ್ ಅನ್ನು ಹೊಂದಿದೆ.

ಒಪ್ಪೋ A79 5G ಬೆಲೆ ಮತ್ತು ಲಭ್ಯತೆ
ಒಪ್ಪೋ A79 5G ಸ್ಮಾರ್ಟ್‌ಫೋನ್ ಭಾರತದಲ್ಲಿ 19,999ರೂ ಬೆಲೆಯನ್ನು ಹೊಂದಿದೆ. ಲಾಂಚ್ ಆಫರ್‌ನಲ್ಲಿ 4,000ರೂ ಗಳವರೆಗೆ ಕ್ಯಾಶ್‌ಬ್ಯಾಕ್ ಸಿಗಲಿದ್ದು, ನೋ ಕಾಸ್ಟ್ EMI ಆಯ್ಕೆಗಳನ್ನು ಸಹ ನೀಡಲಾಗ್ತಿದೆ. ಇದಲ್ಲದೆ ಎಕ್ಸ್‌ಚೇಂಜ್ ಆಫರ್‌ನಲ್ಲಿ 4,000ರೂ ವರೆಗೆ ಡಿಸ್ಕೌಂಟ್ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಗ್ಲೋಯಿಂಗ್ ಗ್ರೀನ್ ಮತ್ತು ಮಿಸ್ಟರಿ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








