Just In
- 7 hrs ago
ಜಪಾನ್ನಲ್ಲಿ ಸಿದ್ದವಾಗ್ತಿದೆ 60 ಅಡಿ ಎತ್ತರದ ಗುಂಡಮ್ ರೋಬೋಟ್!..ಹೇಗಿದೆ ಗೊತ್ತಾ?
- 8 hrs ago
ವಾಟ್ಸಾಪ್ ಡೌನ್ಲೋಡ್ ಕಡ್ಡಾಯವಲ್ಲ!..ದೆಹಲಿ ಹೈಕೋರ್ಟ್ ಸ್ಪಷ್ಟನೆ!
- 10 hrs ago
ಭಾರತದಲ್ಲಿ ಒನ್ಪ್ಲಸ್ ಸಂಸ್ಥೆಯಿಂದ ಹೊಸ ಇಯರ್ಬಡ್ಸ್ ಲಾಂಚ್! ವಿಶೇಷತೆ ಏನು?
- 12 hrs ago
ವಾಟ್ಸಾಪ್ನಲ್ಲಿ ವಾಯ್ಸ್ ಕಾಲ್ಗಳನ್ನು ರೆಕಾರ್ಡ್ ಮಾಡುವುದು ಹೇಗೆ ಗೊತ್ತಾ?
Don't Miss
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- News
Republic Day 2021 Live Updates : ರಾಜಪಥದಲ್ಲಿ 72ನೇ ಗಣತಂತ್ರದಿನ ಸಂಭ್ರಮ
- Automobiles
ಗಣರಾಜ್ಯೋತ್ಸವದ ಸಂಭ್ರಮಕ್ಕಾಗಿ ಮ್ಯಾಗ್ನೈಟ್ ಕಾರಿನೊಂದಿಗೆ ನಿಸ್ಸಾನ್ ಹೊಸ ಅಭಿಯಾನ ಘೋಷಣೆ
- Lifestyle
ಗಣರಾಜ್ಯೋತ್ಸವ ಪರೇಡ್ನಲ್ಲಿ ಇತಿಹಾಸ ಸೃಷ್ಟಿಸಲಿದ್ದಾರೆ ಸ್ವಾತಿ ರಾಥೋಡ್
- Movies
ದಿಗ್ಗಜ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂಗೆ ಪದ್ಮವಿಭೂಷಣ ಪ್ರಶಸ್ತಿ
- Sports
ಐಎಸ್ಎಲ್: ಬಾಗನ್ ಸೋಲಿಸುವ ಆತ್ಮವಿಶ್ವಾಸದಲ್ಲಿ ನಾರ್ಥ್ ಈಸ್ಟ್
- Finance
ಎಲ್&ಟಿ ತ್ರೈಮಾಸಿಕ ಆದಾಯ 5% ಏರಿಕೆ: ದಾಖಲೆಯ 2,467 ಕೋಟಿ ರೂಪಾಯಿ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒಪ್ಪೊದಿಂದ 'ಒಪ್ಪೊ ಎ8' ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ಧತೆ!
ಜನಪ್ರಿಯ ಸ್ಮಾರ್ಟ್‌ಫೋನ್ ಕಂಪೆನಿಗಳಲ್ಲಿ ಒಂದಾದ ಒಪ್ಪೊ ಸ್ಮಾರ್ಟ್‌ಫೋನ್ ಕಂಪೆನಿಯ ಹೊಸ ಆವೃತ್ತಿಯಾದ ಒಪ್ಪೊ ಎ 8 ಸ್ಮಾರ್ಟ್‌ಫೋನ್‌ನ ಫೀಚರ್ಸ್ ಲೀಕ್ ಆಗಿದೆ. ಚೀನಾದ ಟೆನಾ ವೆಬ್‌ಸೈಟ್‌ನಲ್ಲಿ ಒಪ್ಪೊ ಎ 8 ಸ್ಮಾರ್ಟ್‌ಫೋನ್‌ಗೆ ಸಂಬಂಧಿಸಿದ ಫೋಸ್ಟರ್ ಲೀಕ್ ಆಗಿದ್ದು, ಸ್ಮಾರ್ಟ್‌ಫೊನ್ ಪ್ರಿಯರಲ್ಲಿ ಹೊಸ ನಿರೀಕ್ಷೆಯನ್ನ ಹುಟ್ಟುಹಾಕಿದೆ. 6.5-ಇಂಚಿನ ಎಚ್‌ಡಿ ಡಿಸ್‌ಪ್ಲೇ ಮಾದರಿಯನ್ನ ಹೊಂದಿದ್ದು, 2.3GHz ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿರಲಿದೆ ಎಂದು ಹೇಳಲಾಗ್ತಿದೆ.

ಹೌದು, ಒಪ್ಪೊ ಸ್ಮಾರ್ಟ್‌ಫೋನ್ ಕಂಪೆನಿ 2020ಕ್ಕೆ ತನ್ನ ಹೊಸ ಆವೃತ್ತಿ ಒಪ್ಪೊ ಎ 8 ಸ್ಮಾರ್ಟ್‌ಫೋನ್ ಬಿಡುಗಡೆಗೆ ಸಿದ್ದತೆ ನಡೆಸುತ್ತಿದೆ. ಈಗಾಗ್ಲೆ ಒಪ್ಪೊ ಎ 8 ಸ್ಮಾರ್ಟ್‌ಫೋನ್‌ನ ವಿಶೇಷತೆಗಳೇನು ಅನ್ನೊದು ಚೀನಾದ ವೆಬ್‌ಸೈಟ್‌ಗಳಲ್ಲಿ ಲೀಕ್ ಆಗಿದೆ. ಹೊಸ ಮಾದರಿಯ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್ ಇದಾಗಿರಲಿದ್ದು ಸ್ಮಾರ್ಟ್‌ಫೋನ್ ಪ್ರಿಯರಿಗೆ ಇಷ್ಟವಾಗಲಿದೆ ಎಂದು ಹೇಳಲಾಗ್ತಿದೆ. ಅಷ್ಟಕ್ಕೂ ಲೀಕ್ ಮಾಹಿತಿ ಪ್ರಕಾರ ಒಪ್ಪೊ ಎ 8 ಸ್ಮಾರ್ಟ್‌ಫೋನ್‌ನ ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ
ಒಪ್ಪೊ ಎ 8 ಸ್ಮಾರ್ಟ್‌ಫೋನ್ 720x1600 ರೆಸಲ್ಯೂಶನ್ ಹೊಂದಿರುವ 6.5-ಇಂಚಿನ ಎಚ್‌ಡಿ ಡಿಸ್‌ಪ್ಲೇಯನ್ನ ಹೊಂದಿದ್ದು, ಟಿಎಫ್‌ಟಿ ಮಾದರಿಯ ಡಿಸ್‌ಪ್ಲೇ ಇದಾಗಿರಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ವಿಡಿಯೋ ವೀಕ್ಷಣೆಗೆ ಉತ್ತಮವಾಗಿದ್ದು ವಾಟರ್ ಡ್ರಾಫ್ ನಾಚ್ ಹೊಂದಿದೆ ಎಂದು ಹೇಳಲಾಗ್ತಿದೆ. ಜೊತೆಗೆ 163.9x75.5x8.3 ಮಿಮೀ ಅಳತೆಯ ಗಾತ್ರವನ್ನ ಹೊಂದಿರಲಿದ್ದು, 180 ಗ್ರಾಂ ತೂಕವನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಪ್ರೊಸೆಸರ್
ಇನ್ನು ಒಪ್ಪೊ ಎ 8 ಸ್ಮಾರ್ಟ್‌ಫೋನ್ 2.3GHz ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ಪೈ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಲ್ಲದೆ 4GB RAM ಮತ್ತು 128GB ಸಂಗ್ರಹಣಾ ಸಾಮರ್ಥ್ಯವನ್ನ ಹೊಂದಿದ್ದು, ಮೆಮೊರಿ ಕಾರ್ಡ್ ಮೂಲಕ 256GB ಶೇಖರಣಾ ಸಾಮರ್ಥ್ಯವನ್ನ ವಿಸ್ತರಿಸಬಹುದು ಎಂದು ಹೇಳಲಾಗಿದೆ. ಅಲ್ಲದೆ ಫೋನ್‌ನ ಹಿಂಭಾಗದಲ್ಲಿ ಫಿಂಗರ್ ಪ್ರಿಂಟ್ ಸೆನ್ಸಾರ್ ಇರಲಿದ್ದು, ಪರದೆಯ ಬಲ ಅಂಚಿನಲ್ಲಿ ಪವರ್ ಬಟನ್ ಮತ್ತು ಎಡಭಾಗದಲ್ಲಿ ವಾಲ್ಯೂಮ್ ಬಟನ್ ಗಳನ್ನು ನೀಡಲಾಗಿರುತ್ತದೆ ಎಂದು ಅಂದಾಜಿಸಲಾಗಿದೆ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದ್ದು ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎಂದು ಹೇಳಲಾಗ್ತಿದೆ. ಅಲ್ಲದೆ ಸೆಲ್ಫಿ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿರಲಿದ್ದು ಉತ್ತಮ ಫೊಟೋ ಅನುಭವ ನೀಡುತ್ತದೆ ಎಂದು ಅಂದಾಜಿಸಲಾಗಿದೆ.

ಬ್ಯಾಟರಿ ಮತ್ತು ಲಭ್ಯತೆ
ಒಪ್ಪೊ ಎ 8 ಸ್ಮಾರ್ಟ್‌ಫೋನ್ 4,230 ಎಮ್ಎಹೆಚ್ ಬ್ಯಾಟರಿ ಸಾಮರ್ಥ್ಯವನ್ನ ಹೊಂದಿರಲಿದೆ ಎನ್ನಲಾಗಿದ್ದು, ಇದು ಮೈಕ್ರೋ-ಯುಎಸ್‌ಬಿ ಪೋರ್ಟ್ ಚಾರ್ಜಿಂಗ್ ಆಯ್ಕೆಯನ್ನ ಹೊಂದಿರಲಿದೆ, ಅಲ್ಲದೆ ಕಪ್ಪು, ಬಿಳಿ, ಹಸಿರು ಮತ್ತು ಕೆಂಪು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರಲಿದೆ ಎಂದು ನಿರೀಕ್ಷಿಸಲಾಗಿದೆ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190