Home
ಸುದ್ದಿಜಾಲ

ಒಪ್ಪೊ A92 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

ಚೀನಾ ಮೂಲದ ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿ ಸೈ ಎನಿಸಿಕೊಂಡಿರುವ ಒಪ್ಪೊ ಹೊಸತನಕ್ಕೆ ಮಾದರಿಯಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಒಪ್ಪೋ ಪ್ರತಿ ಭಾರಿಯು ಹೊಸ ಫೀಚರ್ಸ್‌ಗಳನ್ನ ಪರಿಚಯಿಸುವಲ್ಲಿ ಪ್ರಸಿದ್ಧಿಯನ್ನ ಪಡೆದುಕೊಂಡಿದೆ. ಸದ್ಯ ಇದೀಗ ಒಪ್ಪೋ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ.

ಜನಪ್ರಿಯ

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ತನ್ನ ಹೊಸ ಒಪ್ಪೋ A92 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ವೇದಿಕೆ ಸಿದ್ದಪಡಿಸಿಕೊಳ್ತಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಅಧಿಕೃತ ಲಾಂಚ್‌ ಆಗುವುದಕ್ಕೂ ಮುನ್ನ ಇಂಡೋನೇಷ್ಯಾದ ಶಾಪಿಂಗ್ ಸೈಟ್ ಲಾಜಾಡಾದಲ್ಲಿ ಪಟ್ಟಿ ಮಾಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಖರೀದಿಯೊಂದಿಗೆ ವಾಯರ್‌ಲೆಸ್ ಇಯರ್‌ಫೋನ್‌ಗಳನ್ನು ನೀಡುತ್ತದೆ. ಇದಲ್ಲದೆ ಒಪ್ಪೊ A92 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 665 SoC ಪ್ರೊಸೆಸರ್‌ ಹೊಂದಿದೆ. ಸದ್ಯ ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿರುತ್ತದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ನು ಒಪ್ಪೋ A92 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದೆ. ಇದಲ್ಲದೆ ಈ ಡಿಸ್‌ಪ್ಲೇಯು 405PP ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿದ್ದು, ಇದು ಪಂಚ್-ಹೋಲ್‌ ಎಲ್‌ಸಿಡಿ ಡಿಸ್‌ಪ್ಲೇ ವಿನ್ಯಾಸವನ್ನ ಒಳಗೊಂಡಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 665 ಆಕ್ಟಾ-ಕೋರ್ SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಜೊತೆಗೆ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ಸಹ ನೀಡಲಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಒಪ್ಪೋ A92 ಸ್ಮಾರ್ಟ್‌ಫೋನ್‌ ಆಯತಾಕಾರದ ಕ್ಯಾಮೆರಾ ಮಾಡ್ಯೂಲ್ ಹೊಂದಿದ್ದು, ಇದು ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಲಾಜಾಡಾ ಪ್ರಕಾರ, ಈ ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ವಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸುತ್ತದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ ಪ್ರಿಂಟ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ IDR 3,999,000 (ಸುಮಾರು ರೂ. 20,100) ಬೆಲೆಯನ್ನ ಹೊಂದಿರಲಿದ್ದು, ಟ್ವಿಲೈಟ್ ಬ್ಲ್ಯಾಕ್, ಅರೋರಾ ಪರ್ಪಲ್ ಮತ್ತು ಶೈನಿಂಗ್ ವೈಟ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Oppo A92 is tipped to be powered by the Snapdragon 665 SoC, and come with a quad camera setup.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+