ಒಪ್ಪೊ ಕಂಪೆನಿಯಿಂದ 'ಒಪ್ಪೊ A92s' 5G ಸ್ಮಾರ್ಟ್‌ಫೋನ್‌ ಬಿಡುಗಡೆ!

|

ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒಪ್ಪೊ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿ. ಈಗಾಗಲೇ ಹಲವು ಹೊಸ ಫೀಚರ್ಸ್‌ಗಳನ್ನ ಗ್ರಾಹಕರಿಗೆ ಪರಿಚಯಿಸಿ ಸೈ ಎನಿಸಿಕೊಂಡಿದೆ. ಹಲವು ಆಕರ್ಷಕ ಫೀಚರ್ಸ್‌ಗಳ ಜೊತೆಗೆ ಹೊಸ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಂದಾಗಿ ಪ್ರಸಿದ್ಧಿಯನ್ನ ಪಡೆದುಕೊಂಡಿದೆ. ಪ್ರತಿ ಬಾರಿಯು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುವ ಒಪ್ಪೊ ಈ ಬಾರಿ ಕೊರೊನಾ ವೈರಸ್‌ನ ಭೀತಿಯ ನಡುವೆಯೂ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಚೀನಾದ

ಹೌದು, ಚೀನಾದ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೊ ತನ್ನ ಮೊದಲ ಮಧ್ಯ ಶ್ರೇಣಿಯ 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಅನ್ನು ಒಪ್ಪೊ A92s 5G ಎಂದು ಹೆಸರಿಸಲಾಗಿದ್ದು, ಚೀನಾ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪ್ರಮುಖ ಅಂಶ ಎಂದರೆ ಇದು 120Hz ರಿಫ್ರೆಶ್ ರೇಟ್‌ ಹೊಂದಿರುವ ಪಂಚ್-ಹೋಲ್ ಡಿಸ್‌ಪ್ಲೇ ಹೊಂದಿರುವುದು. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್‌

ಡಿಸ್‌ಪ್ಲೇ ಡಿಸೈನ್‌

ಒಪ್ಪೊ A92s 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನ ಹೊಂದಿರುವ ಡ್ಯುಯಲ್ ಪಂಚ್-ಹೋಲ್ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಇದು 6.57-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನ ಹೊಂದಿದ್ದು, 120Hz ಸ್ಕ್ರೀನ್ ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. 401 PPI ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಸ್ಕ್ರೀನ್‌ ಟು ಬಾಡಿ ರೇಶಿಯೋ 84.27% ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಮಿಡಿಯಾ ಟೆಕ್‌ ಡೈಮೆನ್ಸಿಟಿ 800 7nm ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB RAM ಮತ್ತು 128GB, 8GB RAM ಮತ್ತು 128GB ಶೇಖರಣಾ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳನ್ನ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಣೆ ಮಾಡಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಒಪ್ಪೊ A92s 5G ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 586 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಸೆಲ್ಫಿ ಕ್ಯಾಮೆರಾಗಳನ್ನ ಹೊಂದಿದ್ದು, ಸೋನಿ ಐಎಂಎಕ್ಸ್ 471 ಸೆನ್ಸಾರ್‌ಹೊಂದಿರುವ 16 ಮೆಗಾಪಿಕ್ಸೆಲ್ ಪ್ರೈಮರಿ ಲೆನ್ಸ್, ಜೊತೆಗೆ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಕ್ಯಾಮೆರಾಗಳನ್ನ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು 5G ನೆಟ್‌ವರ್ಕ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಹಾಟ್‌ಸ್ಪಾಟ್‌, ವೈಪೈ, ಹಾಗೂ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೊ A92s 5G ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಗೆ RMB 2199 ಯುವಾನ್ (ಅಂದಾಜು 22,000 ರೂ.) ಹೊಂದಿದ್ದು, 8GB RAM ಮತ್ತು 128GB ಸಂಗ್ರಹ ಸಾಮರ್ಥ್ಯದ ಆಯ್ಕೆಗೆ RMB 2499 (ಅಂದಾಜು 25 ಸಾವಿರ ರೂ.) ಬೆಲೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಖರೀದಿಸಲು ಲಬ್ಯವಾಗಲಿದೆ. (ಫೋನ್‌ಅರೆನಾ ಮೂಲಕ) ಬರುತ್ತದೆ.

Best Mobiles in India

English summary
Oppo A92s comes in Black and White color options. It will go on sale from April 29 in China.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X