Just In
Don't Miss
- News
ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಜೀವಕ್ಕೆ ಬೆದರಿಕೆ ಇದೆ ಎಂದು ಬಿಜೆಪಿ ಯುವ ನಾಯಕಿ ಪಮೇಲಾ ಆರೋಪ
- Movies
ಶಮಂತ್ಗೆ ಸಿಕ್ತು ಬಂಪರ್: ಎರಡನೇ ವಾರವೂ ಬ್ರೋ ಗೌಡ ಸೇಫ್
- Automobiles
ರ್ಯಾಪಿಡ್ ಬದಲಾಗಿ ಹೊಸ ಸಿ ಸೆಗ್ಮೆಂಟ್ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಒಪ್ಪೋ A93 5G ಸ್ಮಾರ್ಟ್‌ಫೋನ್ ಬಿಡುಗಡೆ!..ವಿಶೇಷತೆ ಏನು?
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒಪ್ಪೋ ಸಂಸ್ಥೆ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಒಪ್ಪೋ A93 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಹೊಸ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 480 SoC ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಹೌದು, ಒಪ್ಪೋ ಸಂಸ್ಥೆ ತನ್ನ ಹೊಸ ಒಪ್ಪೋ A93 5G ಸ್ಮಾರ್ಟ್‌ಫೋನ್ ಅನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಒಳಗೊಂಡಿರುವ ವಿಶೇಷತೆ ಏನು? ಫೀಚರ್ಸ್‌ಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ
ಒಪ್ಪೋ A93 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹಾಗೂ 405pp ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 480 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿದೆ.

ಪ್ರೊಸೆಸರ್
ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 480 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಹಾಗೂ 8GB RAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ
ಒಪ್ಪೊ A93 5G ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್, ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸ್ಕ್ಯಾನರ್, ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5mm ಆಡಿಯೊ ಜ್ಯಾಕ್, ಬ್ಲೂಟೂತ್ 5.1, ಮತ್ತು ವೈ-ಫೈ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ A93 5G ಸ್ಮಾರ್ಟ್‌ಫೋನ್ 8GB RAM + 256GB ಇಂಟರ್ ಸ್ಟೋರೇಜ್ ಮಾದರಿಗೆ ಚೀನಾದಲ್ಲಿ CNY 1,999 (ಅಂದಾಜು 22,500ರೂ.) ಜೊತೆಗೆ 8GB RAM + 128GB ಶೇಖರಣಾ ಮಾದರಿಯನ್ನು ಸಹ ಬಿಡುಗಡೆ ಮಾಡಲಾಗಿದೆ, ಆದರೆ ಅದರ ಬೆಲೆಯನ್ನು ಘೋಷಿಸಲಾಗಿಲ್ಲ. 256GB ಶೇಖರಣಾ ಮಾದರಿಯು ಜೆಡಿ.ಕಾಮ್ ಮೂಲಕ ಪೂರ್ವ-ಆದೇಶಕ್ಕಾಗಿ ಸಿದ್ಧವಾಗಿದೆ. ಇನ್ನು ಒಪ್ಪೋ A93 5G ಸಿಲ್ವರ್, ಬ್ಲ್ಯಾಕ್ ಮತ್ತು ಅರೋರಾ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಸದ್ಯ ಭಾರತದಲ್ಲಿ ಈ ಸ್ಮಾರ್ಟ್‌ಫೋನ್ ಲಭ್ಯತೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
-
92,999
-
17,999
-
39,999
-
29,400
-
38,990
-
29,999
-
16,999
-
23,999
-
18,170
-
21,900
-
14,999
-
17,999
-
42,099
-
16,999
-
23,999
-
29,495
-
18,580
-
64,900
-
34,980
-
45,900
-
17,999
-
54,153
-
7,000
-
13,999
-
38,999
-
29,999
-
20,599
-
43,250
-
32,440
-
16,190