Home
ಸುದ್ದಿಜಾಲ

ಒಪ್ಪೋ A94 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಏನು?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ಮನಗೆದ್ದಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೋ A94 5G ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಇದು ಆಕ್ಟಾ-ಕೋರ್‌ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ ಕ್ವಾಡ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ.

ಒಪ್ಪೋ A94 5G ಸ್ಮಾರ್ಟ್‌ಫೋನ್

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ A94 5G ಸ್ಮಾರ್ಟ್‌ಫೋನ್‌ ಅನ್ನು ಯುರೋಪಿಯನ್‌ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದು 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎರಡು ಬಣ್ಣಗಳ ಆಯ್ಕೆಗಳಲ್ಲಿ ಮತ್ತು ಸಿಂಗಲ್‌ RAM ಮತ್ತು ಸಂಗ್ರಹ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ A94 5G ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 90.8% ಸ್ಕ್ರೀನ್-ಟು-ಬಾಡಿ ಅನುಪಾತ, 409 ಪಿಪಿಐ ಪಿಕ್ಸೆಲ್ ಸಾಂದ್ರತೆ ಮತ್ತು 800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಒಪ್ಪೋ A94 5G ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಇದು 8GB RAM ಮತ್ತು 128GB RAM ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಒಪ್ಪೋ A94 5G ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಶೂಟರ್, ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದರಲ್ಲಿ ಕಪ್ಪು ಮತ್ತು ಬಿಳಿ ಸೆನ್ಸಾರ್‌ ಕೂಡ ಸೇರಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದು 4310mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W VoC ಫ್ಲ್ಯಾಶ್ ಚಾರ್ಜ್ 4.0 ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ 802.11 AC, ಬ್ಲೂಟೂತ್ ವಿ 5.1, GPS, USB ಟೈಪ್-ಸಿ ಪೋರ್ಟ್, ಮತ್ತು 5G ಹೊರತುಪಡಿಸಿ 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A94 5G ಸ್ಮಾರ್ಟ್‌ಫೋನ್‌ ಏಕೈಕ 8GB RAM + 128GB ಶೇಖರಣಾ ರೂಪಾಂತರಕ್ಕೆ ಯುರೋ 359 (ಸುಮಾರು ರೂ. 32,000) ಬೆಲೆಯನ್ನು ಹೊಂದಿದೆ. ಇದನ್ನು ಕಾಸ್ಮೊ ಬ್ಲೂ ಮತ್ತು ಫ್ಲೂಯಿಡ್ ಬ್ಲ್ಯಾಕ್ ಬಣ್ಣಗಳಲ್ಲಿ ನೀಡಲಾಗುತ್ತದೆ. ಈ ಸ್ಮಾರ್ಟ್‌ಫೋನ್ ಅನ್ನು ಸದ್ಯ ಅನೇಕ ಯುರೋಪಿಯನ್ ವೆಬ್‌ಸೈಟ್‌ಗಳಲ್ಲಿ ಪಟ್ಟಿಮಾಡಲ್ಪಟ್ಟಿದೆ. ಅಲ್ಲದೆ ಇದೇ ಮೇ 3 ರಿಂದ ಮಾರಾಟವಾಗಲಿದೆ. ಆದರೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಯಾವಾಗ ಲಭ್ಯವಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

Best Mobiles in India

English summary
Oppo A94 5G With Quad-Rear Cameras Launched.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+