Home
ಸುದ್ದಿಜಾಲ

ಒಪ್ಪೊ A94 ಸ್ಮಾರ್ಟ್‌ಫೋನ್ ಅನಾವರಣ!..ಕ್ವಾಡ್‌ ಕ್ಯಾಮೆರಾ ಹೈಲೈಟ್‌!

ಜನಪ್ರಿಯ ಮೊವೈಲ್ ಕಂಪನಿಗಳಲ್ಲಿ ಒಂದಾದ ಒಪ್ಪೊ ಮೊಬೈಲ್‌ ಸಂಸ್ಥೆಯು ಹಲವು ಶ್ರೇಣಿಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಅವುಗಳಲ್ಲಿ ಕಂಪನಿಯು ಕಳೆದ ವರ್ಷ ಅಗ್ಗದ ಬೆಲೆಯಲ್ಲಿ ಒಪ್ಪೋ A93 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿ ಸದ್ದು ಮಾಡಿತ್ತು. ಇದೀಗ ಆ ಸರಣಿಯ ಮುಂದುವರಿದ ಭಾಗವಾಗಿ ಒಪ್ಪೊ A94 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ.

ಒಪ್ಪೋ A94

ಹೌದು, ಒಪ್ಪೊ ಸಂಸ್ಥೆಯು ಹೊಸದಾಗಿ ಒಪ್ಪೋ A94 ಸ್ಮಾರ್ಟ್‌ಫೋನ್ ಅನ್ನು ಯುಎಇನಲ್ಲಿ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಹೊಂದಿದೆ. ಹಾಗೆಯೇ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ನಲ್ಲಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಒಪ್ಪೊ A94 ಸ್ಮಾರ್ಟ್‌ಫೋನ್ 2,400x1,080 ಪಿಕ್ಸಲ್ ರೆಸಲ್ಯೂಶನ್‌ ಜೊತೆಗೆ 6.43 ಇಂಚಿನ ಪೂರ್ಣ HD + AMOLED ಮಾದರಿಯ ಹೊಂದಿದೆ. 90Hz ರೀಫ್ರೇಶ್ ರೇಟ್ ಅನ್ನು ಹೊಂದಿದ್ದು, 180Hz ಗೇಮ್‌ ಮೋಡ್‌ ಆಗಿದೆ. ಡಿಸ್‌ಪ್ಲೇಯು 20:9 ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ಒಪ್ಪೊ A94 ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P95 ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 11 ಓಎಸ್‌ ಹಾಗೂ ColorOS 11.1 ಅನ್ನು ಬೆಂಬಲಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಯನ್ನು ಒಳಗೊಂಡಿದೆ. .

ಕ್ವಾಡ್‌ ಕ್ಯಾಮೆರಾ

ಕ್ವಾಡ್‌ ಕ್ಯಾಮೆರಾ

ಒಪ್ಪೊ A94 ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಕ್ಯಾಮೆರಾ 8ಎಂಪಿ, ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾಗಳು ಕ್ರಮವಾಗಿ 2ಎಂಪಿ ಸೆನ್ಸಾರ್‌ ಬಲದಲ್ಲಿವೆ. ಸೆಲ್ಫಿಗಾಗಿ 32ಎಂಪಿ ಸೆನ್ಸಾರ್‌ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಒಪ್ಪೊ A94 ಸ್ಮಾರ್ಟ್‌ಫೋನ್ 4,310mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ 30W VOOC ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ಟ್ರಿಪಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ ವಿ 5.1, ಜಿಪಿಎಸ್ / ಎ-ಜಿಪಿಎಸ್, ಯುಎಸ್ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್ಫೋನ್ ಜ್ಯಾಕ್ ಸೇರಿವೆ. ಫೋನ್ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

Best Mobiles in India

English summary
Oppo A94 price details are yet to be revealed, though the phone is already listed on the Oppo UAE site.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+