ಒಪ್ಪೋ A96 ಮತ್ತು ಒಪ್ಪೋ A76 ಸ್ಮಾರ್ಟ್‌ಫೋನ್‌ ಬಿಡುಗಡೆ!..ಬೆಲೆ ಎಷ್ಟು?

|

ಒಪ್ಪೋ ಕಂಪೆನಿಯು ಭಿನ್ನ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದಿದೆ. ಆ ಪೈಕಿ A ಸರಣಿಯ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಗಮನ ಸೆಳೆದಿವೆ. ಆ ಸರಣಿಯ ಮುಂದುವರಿದ ಭಾಗವಾಗಿ ಒಪ್ಪೋ ಇದೀಗ ಒಪ್ಪೋ A96 ಮತ್ತು ಒಪ್ಪೋ A76 ಸ್ಮಾರ್ಟ್‌ಫೋನ್‌ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 680 SoC ಪ್ರೊಸೆಸರ್ ಪಡೆದಿವೆ.

ಲಾಂಚ್

ಹೌದು, ಒಪ್ಪೋ ಕಂಪೆನಿ ಇದೀಗ ಭಾರತದಲ್ಲಿ ನೂತನವಾಗಿ ಒಪ್ಪೋ A96 ಮತ್ತು ಒಪ್ಪೋ A76 ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದೆ. ಈ ಎರಡು ಫೋನ್‌ಗಳು ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿವೆ. ಹಾಗೆಯೇ ಒಪ್ಪೋ A96 ಫೋನ್ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿದ್ದು, ಒಪ್ಪೋ A76 ಫೋನ್ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿವೆ. ಹಾಗಾದರೇ ಒಪ್ಪೋ A96 ಮತ್ತು ಒಪ್ಪೋ A76 ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಬ್ರೈಟ್ನೆಸ್ಸ್

ಒಪ್ಪೋ A96 ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 401ppi ಆಗಿದ್ದು, 600 nits ವರೆಗಿನ ಬ್ರೈಟ್ನೆಸ್ಸ್ ಹೊಂದಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್‌ ಬಲ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಪಡೆದಿದೆ. ಜೊತೆಗೆ 8GB RAM ಆಯ್ಕೆ ಅನ್ನು ಹೊಂದಿದೆ.

ಹಾಗೆಯೇ

ಇನ್ನು ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಸಹ ಇದೆ.

ಒಪ್ಪೋ A76 ಫೋನ್‌ ಫೀಚರ್ಸ್‌

ಒಪ್ಪೋ A76 ಫೋನ್‌ ಫೀಚರ್ಸ್‌

ಒಪ್ಪೋ A76 ಸ್ಮಾರ್ಟ್‌ಫೋನ್ 720x1,612 ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.5 ಇಂಚಿನ ಪೂರ್ಣ ಹೆಚ್‌ಡಿ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 269ppi ಆಗಿದ್ದು, 600 nits ವರೆಗಿನ ಬ್ರೈಟ್ನೆಸ್ಸ್ ಹೊಂದಿದೆ. ಇನ್ನು ಈ ಫೋನ್ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 680 SoC ಪ್ರೊಸೆಸರ್‌ ಬಲ ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಪಡೆದಿದೆ. ಜೊತೆಗೆ 6GB RAM ಆಯ್ಕೆ ಅನ್ನು ಹೊಂದಿದೆ.

ಸಾಮರ್ಥ್ಯದಲ್ಲಿದೆ

ಇನ್ನು ಈ ಫೋನ್ ಹಿಂಬದಿಯಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಸಹ ಇದೆ.

ಬೆಲೆ ಎಷ್ಟು?

ಬೆಲೆ ಎಷ್ಟು?

ಭಾರತದಲ್ಲಿ ಒಪ್ಪೋ A96 ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 19,999 ರೂ. ಆಗಿದೆ. ಒಪ್ಪೋ A96 ಸ್ಟಾರ್ರಿ ಬ್ಲಾಕ್ ಮತ್ತು ಸನ್‌ಸೆಟ್ ಬ್ಲೂ ಬಣ್ಣಗಳನ್ನು ಪಡೆದಿದೆ. ಅದೇ ರೀತಿ ಒಪ್ಪೋ A76 ಫೋನಿನ 6GB + 128GB ಸ್ಟೋರೇಜ್ ವೇರಿಯಂಟ್‌ ಬೆಲೆಯು 17,499ರೂ. ಆಗಿದೆ. ಒಪ್ಪೋ A76 ಫೋನ್ ಗ್ಲೋಯಿಂಗ್ ಬ್ಲ್ಯಾಕ್ ಮತ್ತು ಗ್ಲೋಯಿಂಗ್ ಬ್ಲೂ ಬಣ್ಣಗಳ ಆಯ್ಕೆ ಒಳಗೊಂಡಿದೆ. ಇನ್ನು ಈ ಎರಡೂ ಫೋನ್‌ಗಳು ಒಪ್ಪೋ ಇಂಡಿಯಾ ಆನ್‌ಲೈನ್ ಸ್ಟೋರ್ ಮತ್ತು ದೇಶದ ಆಫ್‌ಲೈನ್ ಚಿಲ್ಲರೆ ವ್ಯಾಪಾರಿಗಳ ಮೂಲಕ ಲಭ್ಯವಿದೆ.

Best Mobiles in India

English summary
Oppo A96, Oppo A76 With Dual Rear Cameras Launched in India: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X