Home
ಸುದ್ದಿಜಾಲ

Oppo: ಒಪ್ಪೋದ ಈ ಸ್ಮಾರ್ಟ್‌ಫೋನ್‌ಗೆ ಸಖತ್‌ ಆಫರ್! 8GB RAM.. 50MP ಕ್ಯಾಮೆರಾ

ಒಪ್ಪೋ ಸ್ಮಾರ್ಟ್‌ಫೋನ್‌ಗಳಿಗೆ (Oppo smartphone) ಭಾರತದಲ್ಲಿ ಭರ್ಜರಿ ಬೇಡಿಕೆ ಇದೆ. ಈ ನಡುವೆ ಒಪ್ಪೋದ ಬಹುಬೇಡಿಕೆಯ ಸ್ಮಾರ್ಟ್‌ಫೋನ್‌ಗೆ ದೊಡ್ಡ ಮಟ್ಟದ ಆಫರ್‌ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 8GB RAM ಆಯ್ಕೆಯೊಂದಿಗೆ ಕಾಣಿಸಿಕೊಂಡಿದ್ದು, ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿದೆ.

ಹೌದು, ಒಪ್ಪೋದ ಒಪ್ಪೋ A96 ಸ್ಮಾರ್ಟ್‌ಫೋನ್‌ಗೆ (Oppo A96 smartphone) ಬರೋಬ್ಬರಿ 29% ರಿಯಾಯಿತಿ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಕ್ಯಾಮೆರಾ ಪ್ರಿಯರಿಗಂತೂ ಅತ್ಯುತ್ತಮ ಆಯ್ಕೆ ಆಗಿದೆ. ಜೊತೆಗೆ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ ಬಲದೊಂದಿಗೆ ಕಾಣಿಸಿಕೊಂಡಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಆಫರ್ ಬೆಲೆ ಎಷ್ಟು ಅನ್ನೋದನ್ನು ತಿಳಿಯೋಣ ಬನ್ನಿ.

ಒಪ್ಪೋದ ಈ ಸ್ಮಾರ್ಟ್‌ಫೋನ್‌ಗೆ ಸಖತ್‌ ಆಫರ್! 8GB RAM.. 50MP ಕ್ಯಾಮೆರಾ

ಒಪ್ಪೋ A96 ಸ್ಮಾರ್ಟ್‌ಫೋನ್‌ ಆಫರ್ ವಿವರ: ಈ ಸ್ಮಾರ್ಟ್‌ಫೋನ್ ಸಾಮಾನ್ಯ ದರ 23,999ರೂ.ಗಳಾಗಿದ್ದು, ನೀವು ಇದನ್ನು ಈಗ 16,990ರೂ.ಗಳಿಗೆ ಖರೀದಿ ಮಾಡಬಹುದು. ಯಾಕೆಂದರೆ ಈ ಫೋನ್‌ಗೆ ಫ್ಲಿಪ್‌ಕಾರ್ಟ್‌ನಲ್ಲಿ (Flipkart) 29% ರಿಯಾಯಿತಿ ನೀಡಲಾಗಿದೆ. ಇಷ್ಟು ಮಾತ್ರವಲ್ಲದೆ ಇನ್ನೂ ಕಡಿಮೆ ಬೆಲೆಗೆ ಈ ಫೋನ್‌ ಖರೀದಿ ಮಾಡಲು ಇಚ್ಚಿಸಿದ್ರೆ ಬ್ಯಾಂಕ್‌ ಆಫರ್ ಬಳಕೆ ಮಾಡಬಹುದು.

ಇನ್ನು ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಸಿಟಿ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ ಬ್ಯಾಂಕ್ ಆಫರ್ 10% ಹಾಗೂ ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಇಎಮ್‌ಐ ವ್ಯವಹಾರದ ಮೇಲೆ 10% ರಿಯಾಯಿತಿ, ಹೆಚ್‌ಡಿಎಫ್‌ಸಿ ಮೂಲಕ ಒಂಬತ್ತು ತಿಂಗಳ ಇಎಮ್‌ಐ ವ್ಯವಹಾರದ ಮೇಲೆ 750ರೂ. ರಿಯಾಯಿತಿ 12 ತಿಂಗಳು ಮತ್ತು ಅದಕ್ಕಿಂತ ಹೆಚ್ಚಿನ ಇಎಮ್‌ಐ ವ್ಯವಹಾರದ ಮೇಲೆ 1,250ರೂ. ರಿಯಾಯಿತಿ ಸಿಗಲಿದೆ.

ಒಪ್ಪೋದ ಈ ಸ್ಮಾರ್ಟ್‌ಫೋನ್‌ಗೆ ಸಖತ್‌ ಆಫರ್! 8GB RAM.. 50MP ಕ್ಯಾಮೆರಾ

ಒಪ್ಪೋ A96 ಡಿಸ್‌ಪ್ಲೇ ವಿವರ: ಈ ಸ್ಮಾರ್ಟ್‌ಫೋನ್ 6.59 ಇಂಚಿನ ಐಪಿಎಸ್‌ ಎಲ್‌ಸಿಡಿ ಹೆಚ್‌ಡಿ+ (IPS LCD HD+) ರೆಸಲ್ಯೂಶನ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದುಕೊಂಡಿದೆ. ಇದು PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದರೊಂದಿಗೆ ಸೆಲ್ಫಿ ಕ್ಯಾಮೆರಾಕ್ಕಾಗಿ ಪಂಚ್-ಹೋಲ್ ಕಟೌಟ್ ಆಯ್ಕೆ ಪಡೆದುಕೊಂಡಿದೆ.

ಒಪ್ಪೋ A96 ಪ್ರೊಸೆಸರ್‌ ಮಾಹಿತಿ: ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 680 CPU ಕಾರ್ಯಕ್ಷಮತೆ ಹೊಂದಿದ್ದು, 128GB ಇಂಟರ್‌ ಸ್ಟೋರೇಜ್‌ ಮತ್ತು 8GB RAM ಆಯ್ಕೆ ಪಡೆದಿದೆ. ಇದರೊಂದಿಗೆ ಈ ಡಿವೈಸ್‌ 1TB ಸ್ಟೋರೇಜ್‌ ಸಾಮರ್ಥ್ಯ ಬೆಂಬಲಿಸಲಿದೆ. ಇದಕ್ಕಾಗಿ ಮೈಕ್ರೊ ಎಸ್‌ಡಿ ಕಾರ್ಡ್ ಆಯ್ಕೆ ನೀಡಲಾಗಿದೆ. ಉಳಿದಂತೆ ಈ ಫೋನ್ ಕಲರ್‌ ಓಸ್‌12 ಯುಐ ಜೊತೆಗೆ ಅಂಡ್ರಾಯ್ಡ್‌ 12 ಆಪರೇಟಿಂಗ್ ಸಿಸ್ಟಂನಲ್ಲಿ ರನ್‌ ಆಗಲಿದೆ.

ಒಪ್ಪೋ A96 ಕ್ಯಾಮೆರಾ ರಚನೆ: ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಅದರಲ್ಲಿ ಪ್ರಮುಖವಾಗಿ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್‌ ಪೋರ್ಟ್ರೇಟ್ ಲೆನ್ಸ್ ಅನ್ನು ಹೊಂದಿದೆ. ಇನ್ನು 50 ಮೆಗಾಪಿಕ್ಸೆಲ್‌ ಮುಖ್ಯ ಸೆನ್ಸರ್‌ f/1.7 ದ್ಯುತಿರಂಧ್ರ ಹೊಂದಿದ್ದು, 16 ಮೆಗಾಪಿಕ್ಸೆಲ್‌ ಸೆನ್ಸರ್‌ನ f/2.4 ದ್ಯುತಿರಂಧ್ರವನ್ನು ಹೊಂದಿದೆ.

ಒಪ್ಪೋದ ಈ ಸ್ಮಾರ್ಟ್‌ಫೋನ್‌ಗೆ ಸಖತ್‌ ಆಫರ್! 8GB RAM.. 50MP ಕ್ಯಾಮೆರಾ

ಒಪ್ಪೋ A96 ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ: ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, 33W ವೇಗದ ಚಾರ್ಜಿಂಗ್ ಬೆಂಬಲ ಪಡೆದಿದೆ. ಇದರೊಂದಿಗೆ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ವೈ ಫೈ ಡೈರೆಕ್ಟ್, ಬ್ಲೂಟೂತ್ ಆವೃತ್ತಿ 5.0, A2DP, LE, aptX HD, ಯುಎಸ್‌ಬಿ ಟೈಪ್-ಸಿ 2.0, ಓಟಿಜಿ,
ಫಿಂಗರ್‌ಪ್ರಿಂಟ್ (ಸೈಡ್-ಮೌಂಟೆಡ್), ಅಕ್ಸೆಲೆರೊಮೀಟರ್ ಆಯ್ಕೆ ಪಡೆದಿದೆ.

Best Mobiles in India

English summary
Oppo A96 smartphone has been given a discount of 29%. This smartphone has got a 50 megapixel camera option and is the best choice for camera lovers.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+