ಒಪ್ಪೋ A97 5G ಸ್ಮಾರ್ಟ್‌ಫೋನ್‌ ಅನಾವರಣ! ಸ್ಮಾರ್ಟ್‌ ಐ ಪ್ರೊಟೆಕ್ಷನ್‌ ವಿಶೇಷ!

|

ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿವೆ. ಆಕರ್ಷಕ ಕ್ಯಾಮೆರಾ ವಿನ್ಯಾಸ ಹಾಗೂ ವಿಶೇಷ ಫೀಚರ್ಸ್‌ಗಳಿಂದಾಗಿ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ ಎನಿಸಿಕೊಂಡಿದೆ. ಒಪ್ಪೋ ಕಂಪೆನಿ ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಒಪ್ಪೋ ಕಂಪೆನಿ ತನ್ನ ಹೊಸ ಒಪ್ಪೋ A97 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡೀಪ್ ಸೀ ಬ್ಲೂ ಮತ್ತು ಕ್ವೈಟ್ ನೈಟ್ ಬ್ಲ್ಯಾಕ್ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಒಪ್ಪೋ A97 5G ಸ್ಮಾರ್ಟ್‌ಫೋನ್‌

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ A97 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ AI-ಚಾಲಿತ ಸ್ಮಾರ್ಟ್ ಐ ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ. ಒಪ್ಪೋ A97 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದ್ದು, 33W ಫ್ಲ್ಯಾಷ್ ಚಾರ್ಜಿಂಗ್‌ ಬೆಂಬಲಿಸಲಿದೆ.

ಒಪ್ಪೋ

ಇನ್ನು ಒಪ್ಪೋ A97 5G ಸ್ಮಾರ್ಟ್‌ಫೋನ್‌ ತನ್ನ ವಿಶೇಷ ಫೀಚರ್ಸ್‌ಗಳ ಮೂಲಕ ಗಮನಸೆಳೆದಿದೆ. ಈ ಫೋನ್‌ 12GB RAM ಮತ್ತು 256GB ಸ್ಟೋರೇಜ್ ಕಾನ್ಫಿಗರೇಶನ್‌ನಲ್ಲಿ ಬರಲಿದೆ. ಅಲ್ಲದೆ ಹೆಚ್ಚುವರಿ ಇಂಟರ್‌ ಸ್ಟೋರೇಜ್‌ ಬಳಸಿಕೊಂಡು RAM ಅನ್ನು 19GB ವರೆಗೆ ವಿಸ್ತರಿಸುವ ಆಯ್ಕೆಯನ್ನು ಕೂಡ ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ಇದರಿಂದ ಉತ್ತಮ ಸೌಂಡ್‌ ಸಿಸ್ಟಂ ಅನ್ನು ಪಡೆಯಬಹುದಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು? ಇದರ ಫೀಚರ್ಸ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಲಾಗಿದೆ. ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ A97 5G ಸ್ಮಾರ್ಟ್‌ಫೋನ್‌ 6.66-ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,020 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು AI-ಚಾಲಿತ ಸ್ಮಾರ್ಟ್ ಐ ಪ್ರೊಟೆಕ್ಷನ್ ಅನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ವಾಟರ್‌ ಡ್ರಾಪ್‌ ನಾಚ್‌ ಶೈಲಿಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಡಿರಾಕ್‌ ಬೆಂಬಲದೊಂದಿಗೆ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ. ಹಾಗೆಯೇ ವೀಡಿಯೋ ವೀಕ್ಷಣೆಗೆ ಹಾಗೂ ವೀಡಿಯೊ ಕರೆಗಳಿಗೆ ಯೋಗ್ಯವಾದ ಮಾದರಿಯನ್ನು ಹೊಂದಿದೆ.

ಪ್ರೊಸೆಸರ್ ಯಾವುದು?

ಪ್ರೊಸೆಸರ್ ಯಾವುದು?

ಒಪ್ಪೋ A97 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ ಕಲರ್‌ ಒಎಸ್‌ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ Mali-G57 MC2 ಗ್ರಾಫಿಕ್ಸ್ ಆಕ್ಸಿಲೇಟರ್‌ ಸಪೋರ್ಟ್‌ ಅನ್ನು ಒಳಗೊಂಡಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್ ಅನ್ನು ಹೊಂದಿದೆ. ಇದರಲ್ಲಿ ಹೆಚ್ಚುವರಿ ಇಂಟರ್‌ ಸ್ಟೋರೇಜ್‌ ಅನ್ನು ಬಳಸಿಕೊಂಡು RAM ಅನ್ನು 19GB ವರೆಗೆ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಒಪ್ಪೋ A97 5G ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ A97 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಫ್ಲ್ಯಾಷ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ಚಾರ್ಜ್‌ನಲ್ಲಿ 15 ಗಂಟೆಗಳವರೆಗೆ ವೀಡಿಯೊ ಪ್ಲೇಬ್ಯಾಕ್ ಟೈಂ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-ಸಿ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ ಫೇಸ್ ಅನ್‌ಲಾಕ್ ಫೀಚರ್ಸ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ A97 5G ಸ್ಮಾರ್ಟ್‌ಫೋನ್‌ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ ಚೀನಾದಲ್ಲಿ CNY 1,999 (ಅಂದಾಜು 23,600ರೂ) ಬೆಲೆಗೆ ನಿಗದಿಪಡಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಬಗ್ಗೆ ಚೀನಾದಲ್ಲಿ ಒಪ್ಪೋ ಅಧಿಕೃತ ವೆಬ್‌ಸೈಟ್‌ನಲ್ಲಿ ಯಾವುದೇ ವಿವರಗಳನ್ನು ಉಲ್ಲೇಖಿಸಿಲ್ಲ. ಆದರೆ ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಚೈನೀಸ್ ಇ-ಕಾಮರ್ಸ್ ವೆಬ್‌ಸೈಟ್ JD.com ನಲ್ಲಿ ಪ್ರಿ ಬುಕ್ಕಿಂಗ್‌ಗಾಗಿ ಲಿಸ್ಟ್‌ ಮಾಡಲಾಗಿದೆ. ಅಲ್ಲದೆ ಇದು ಜುಲೈ 15 ರಿಂದ ಮಾರಾಟವಾಗಲಿದೆ. ಈ ಫೋನ್‌ ಅನ್ನು ಡೀಪ್ ಸೀ ಬ್ಲೂ ಮತ್ತು ಕ್ವೈಟ್ ನೈಟ್ ಬ್ಲ್ಯಾಕ್ ಆಯ್ಕೆಗಳಲ್ಲಿ ನೀಡಲಾಗುತ್ತದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಭ್ಯವಾಗುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

 ಒಪ್ಪೋ A57

ಇನ್ನು ಒಪ್ಪೋ ಕಂಪೆನಿ ಕಳೆದ ತಿಂಗಳು(ಜೂನ್‌) ಭಾರತದಲ್ಲಿ ಹೊಸ ಒಪ್ಪೋ A57 (2022) ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 6.56-ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 60Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 84.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್‌ ಮೀಡಿಯಾಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಕಲರ್‌OS 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಸ್ಮಾರ್ಟ್‌ಫೋನ್‌

ಒಪ್ಪೋ A57 (2022) ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 33W ಸೂಪರ್‌ವೂಕ್‌ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 4GB RAM ಮತ್ತು 64GB ಇನ್‌ಬಿಲ್ಟ್ ಸ್ಟೋರೇಜ್ ರೂಪಾಂತರಕ್ಕೆ 13,999ರೂ.ಬೆಲೆಯನ್ನು ಹೊಂದಿದೆ.

Best Mobiles in India

English summary
Oppo A97 5G With Dual Rear Cameras Launched.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X