ಒಪ್ಪೋ A98 5G ಲಾಂಚ್!.5 ನಿಮಿಷಗಳ ಚಾರ್ಜಿಂಗ್‌ನಲ್ಲಿ ಆರು ಗಂಟೆಗಳ ಕಾಲಿಂಗ್ ಟೈಂ!
ಜಾಗತಿಕ ಸ್ಮಾರ್ಟ್‌ಫೋನ್ ವಲಯದಲ್ಲಿ ಒಪ್ಪೋ ಕಂಪೆನಿ ತನ್ನದೇ ಆದ ಪ್ರಾಬಲ್ಯವನ್ನು ಸಾಧಿಸಿದೆ. ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳ ಮೂಲಕ ಹಲವು ರಾಷ್ಟ್ರಗಳಲ್ಲಿ ಜನಪ್ರಿಯ ಬ್ರ್ಯಾಂಡ್ ಎನಿಸಿಕೊಂಡಿದೆ. ಅದರ ಮುಂದುವರೆದ ಭಾಗವಾಗಿ ಇದೀಗ ಹೊಸ ಒಪ್ಪೋ A98 5G ಸ್ಮಾರ್ಟ್‌ಫೋನ್ ಅನ್ನು ಅನಾವರಣಗೊಳಿಸಿದೆ.
ಹೌದು, ಒಪ್ಪೋ ಕಂಪೆನಿ ಕೆಲವು ಆಯ್ದ ಮಾರುಕಟ್ಟೆಗಳಲ್ಲಿ ಹೊಸ ಒಪ್ಪೋ A98 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಿಂದ ಗಮನಸೆಳೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ A98 5G ಡಿಸ್‌ಪ್ಲೇ ರಚನೆ
ಒಪ್ಪೋ A98 5G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 89.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ಗೆ ಬೆಂಬಲವನ್ನು ಹೊಂದಿದೆ.
ಒಪ್ಪೋ A98 5G ಪ್ರೊಸೆಸರ್ ಯಾವುದು?
ಒಪ್ಪೋ A98 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ ColorOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ 8GB ವರ್ಚುವಲ್ RAM ತಂತ್ರಜ್ಞಾನಕ್ಕೆ ಬೆಂಬಲವನ್ನು ನೀಡುತ್ತದೆ.

ಒಪ್ಪೋ A98 5G ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ A98 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್, ಎರಡನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್ ಮತ್ತು 2MP ಮೈಕ್ರೋಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಒಪ್ಪೋ A98 5G ಬ್ಯಾಟರಿ ಮತ್ತು ಇತರೆ
ಒಪ್ಪೋ A98 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ಈ ಸ್ಮಾರ್ಟ್‌ಫೋನ್ ಅನ್ನು ನೀವು ಕೇವಲ 5 ನಿಮಿಷಗಳ ಚಾರ್ಜ್‌ನಲ್ಲಿ ಆರು ಗಂಟೆಗಳ ಕಾಲಿಂಗ್ ಟೈಂ ಅನ್ನು ನೀಡಲಿದೆ. ಜೊತೆಗೆ ಇದು ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಪಡೆದುಕೊಂಡಿದೆ.

ಒಪ್ಪೋ A98 5G ಬೆಲೆ ಮತ್ತು ಲಭ್ಯತೆ
ಒಪ್ಪೋ A98 5G ಸ್ಮಾರ್ಟ್‌ಫೋನ್ ಮಲೇಷ್ಯಾದಲ್ಲಿ ಬಿಡುಗಡೆಯಾಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್ ಮೆಲೆಷ್ಯಾದ ಒಪ್ಪೋ ಅಧಿಕೃತ ವೆಬ್‌ಸೈಟ್‌ನಲ್ಲಿ ಇದರ ಬೆಲೆ RM1399 (ಅಂದಾಜು 25,851ರೂ)ಆಗಿದೆ ಎಂದು ಪಟ್ಟಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ಡ್ರೀಮಿ ಬ್ಲೂ ಮತ್ತು ಕೂಲ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ ಎಂದು ಹೇಳಲಾಗಿದೆ.
ಇನ್ನು ಇತ್ತೀಚಿಗೆ , ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್ ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಸಾಕಷ್ಟು ಸದ್ದು ಮಾಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 4,800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, 67W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








