ಒಪ್ಪೋ A98 ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ! 108 MP ಕ್ಯಾಮೆರಾ ವಿಶೇಷ!

|

ಒಪ್ಪೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಎ ಸರಣಿಯಲ್ಲಿ ಹೊಸ ಒಪ್ಪೋ A98 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಟೆಕ್‌ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ವರದಿಯಾಗಿದೆ. ಇದು ಕೆಲವು ಪ್ರೀಮಿಯಂ ಹಾರ್ಡ್‌ವೇರ್‌ನೊಂದಿಗೆ ಬರುವುದು ಪಕ್ಕಾ ಆಗಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ಶೀಘ್ರದಲ್ಲೇ ಒಪ್ಪೋ A98 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಜೊತೆಗೆ 67W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಒಳಗೊಂಡಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ A98 ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ ಎಂದು ಹೇಳಲಾಗಿದೆ. ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿರಲಿದೆ. ಇದಲ್ಲದೆ ಈ ಡಿಸ್‌ಪ್ಲೇ ಹೆಚ್ಚಿನ ಸ್ಕ್ರೀನ್-ಟು-ಬಾಡಿ ಅನುಪಾತ ಮತ್ತು ಸಾಕಷ್ಟು ತೆಳುವಾದ ಚಿನ್ ಬೆಜೆಲ್ ಅನ್ನು ಹೊಂದಿರುತ್ತದೆ ಎಂದು ಹೇಳಿಕೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್‌ ವೇಗವನ್ನು ಪಡೆಯುವ ಸಾಧ್ಯತೆಯಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಒಎಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದಿರಲಿದೆ ಎನ್ನಲಾಗಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡುವ ಸಾಧ್ಯತೆ ಕೂಡ ಇದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಒಪ್ಪೋ A98 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿರಬಹುದು ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಇದಲ್ಲದೆ ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ನೈಟ್‌ ವರ್ಷನ್‌ ಅನ್ನು ಪಡೆದಿರುವ ಸಾಧ್ಯತೆ ಇರಲಿದೆ. ಇನ್ನು ಸೆಲ್ಫಿ ಕ್ಯಾಮೆರಾ 8 ಮೆಗಾಫಿಕ್ಸೆಲ್‌ ಸೆನ್ಸಾರ್‌ ಹೊಂದಿರಬಹುದು ಎನ್ನಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಏನಿರಬಹುದು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ ಏನಿರಬಹುದು?

ಒಪ್ಪೋ A98 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಬಹುದು ಎಂದು ನಿರೀಕ್ಷಿಸಲಾಗಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದು 18W ಮತ್ತು 33W ಚಾರ್ಜಿಂಗ್ ಬೆಂಬಲದೊಂದಿಗೆ ಬರುವ ಹೆಚ್ಚಿನ A-ಸರಣಿ OPPO ಫೋನ್‌ಗಳ ಮೇಲೆ ಸಾಕಷ್ಟು ಉಬ್ಬಾಗಿರುತ್ತದೆ ಎನ್ನಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ ಭಾರತವೂ ಸೇರಿದಂತೆ ಜಾಗತಿಕ ಮಾರುಕಟ್ಟೆಗಳಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಬಣ್ಣದ ಆಯ್ಕೆಗಳ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಇದರ ಬಿಡುಗಡೆ ದಿನಾಂಕ ಹತ್ತಿರ ಬಂದಾಗ ಈ ಫೋನ್‌ನ ಕುರಿತಾದ ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಬೆಲೆ ಯಾವ ಪ್ರೈಸ್‌ಟ್ಯಾಗ್‌ ಆಯ್ಕೆಯಲ್ಲಿ ಬರಲಿದೆ ಅನ್ನೊದು ಇನ್ನು ಕೂಡ ಕನ್ಫರ್ಮ್‌ ಆಗಿಲ್ಲ.

Best Mobiles in India

English summary
Oppo A98 To Features Leaked Ahead of Launch : Tipped to 108MP primary camera

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X