ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಒಪ್ಪೋ K10 ಸ್ಮಾರ್ಟ್‌ಫೋನ್‌!

|

ಟೆಕ್‌ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೋ K10 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಮಾರ್ಚ್ 23 ರಂದು ಬಿಡುಗಡೆಯಾಗಲಿದೆ ಒಪ್ಪೋ ಕಂಪೆನಿ ಇತ್ತೀಚೆಗೆ ದೃಢಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆ ಹೊಂದಿದೆ ಅನ್ನೊದು ಆನ್‌ಲೈನ್‌ನಲ್ಲಿ ಬಹಿರಂಗವಾಗಿದೆ. ಅದರಂತೆ ಈ ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ಶೀಘ್ರದಲ್ಲೇ ಒಪ್ಪೋ K10 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪಂಚ್-ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿರಲಿದೆ. ಇದು ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರುತ್ತದೆ ಎಂದು ಹೇಳಲಾಗಿದ್ದು, ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ K10 ಸ್ಮಾರ್ಟ್‌ಫೋನ್‌ 1,080x1920 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಒಳಗೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಒಪ್ಪೋ K10 ಸ್ಮಾರ್ಟ್‌ಫೋನ್‌ 6nm ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ ColorOS 11.1 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಿದೆ. ಜೊತೆಗೆ ಬಳಕೆಯಾಗದ ಸ್ಟೋರೇಜ್‌ ಅನ್ನು ಬಳಸಿಕೊಂಡು ಅದರ ಇಂಟರ್‌ಬಿಲ್ಟ್‌ RAM ಅನ್ನು ವಿಸ್ತರಿಸುವ ಸಾಮರ್ಥ್ಯವನ್ನು ಸಹ ಹೊಂದಿರಲಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಒಪ್ಪೋ K10 ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ. ಜೊತೆಗೆ 16 ಮೆಗಾಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 33W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದಲ್ಲದೆ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಒಪ್ಪೋ K10 ಸ್ಮಾರ್ಟ್‌ಫೋನ್‌ 20,000ರೂ.ಬೆಲೆಯಲ್ಲಿ ಲಭ್ಯವಾಗುವ ಸಾದ್ಯತೆಯಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ ನಿಖರವಾದ ಮಾರಾಟದ ಬೆಲೆಯನ್ನು ಇನ್ನೂ ಬಹಿರಂಗಪಡಿಸಿಲ್ಲ. ಈ ಫೋನ್‌ ಭಾರತದಲ್ಲಿ ಮಾರ್ಚ್ 23 ರಂದು ಪ್ರಾರಂಭಗೊಳ್ಳಲಿದೆ. ಒಪ್ಪೋ ಕಂಪನಿಯ ಪ್ರಕಾರ ಮಾರ್ಚ್ 29 ರಿಂದ ಇದು ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನಿನ ಕಲರ್‌ ಆಯ್ಕೆಗಳು ಹೇಗಿರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಒಪ್ಪೋ

ಇನ್ನು ಒಪ್ಪೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಒಪ್ಪೋ ರೆನೋ 7 ಪ್ರೊ ಮತ್ತು ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್‌ ಗಳನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು 5ನೆಟ್‌ವರ್ಕ್‌ ಅನ್ನು ಬೆಂಬಲಿಸಲಿವೆ. ಇದರಲ್ಲಿ ಒಪ್ಪೋ ರೆನೋ 7ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1200 SoC ಮ್ಯಾಕ್ಸ್ ಪ್ರೊಸೆಸರ್‌ ಬಲವನ್ನು ಹೊಂದಿದೆ. ಆದರೆ ಒಪ್ಪೋ ರೆನೋ 7 ಮೀಡಿಯಾಟೆಕ್‌ ಡೈಮೆನ್ಸಿಟಿ 900SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ.

Best Mobiles in India

English summary
Oppo company confirmed Oppo K10 will launch on March 23

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X