Home
ಸುದ್ದಿಜಾಲ

ಒಪ್ಪೋ ಸಂಸ್ಥೆಯಿಂದ ಒಪ್ಪೋ F17 ಪ್ರೊ ದೀಪಾವಳಿ ಆವೃತ್ತಿ ಬಿಡುಗಡೆ!

ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌‌ಗಳಿಗೆ ಒಪ್ಪೋ ಸಂಸ್ಥೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಒಪ್ಪೋ ಸಂಸ್ಥೆ ಸೈ ಎನಿಸಿಕೊಂಡಿದೆ. ಇದೀಗ ತನ್ನ ಒಪ್ಪೋ F17 ಪ್ರೊ ಸ್ಮಾರ್ಟ್‌ಫೋನ್‌ನ ದೀಪಾವಳಿ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಒಪ್ಪೋ ಎಫ್ 17 ಪ್ರೊ ದೀಪಾವಳಿ ಆವೃತ್ತಿಯು ಗ್ರೇಡಿಯಂಟ್ ಫಿನಿಶ್‌ನೊಂದಿಗೆ ಹೊಸ ಮ್ಯಾಟ್ ಗೋಲ್ಡ್‌ ಕಲರ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಒಪ್ಪೋ ಈ ಸ್ಮಾರ್ಟ್‌ಫೋನ್ ಜೊತೆಗೆ ವಿಶೇಷ ಉಡುಗೊರೆಯನ್ನು ಸಹ ನೀಡುತ್ತಿದೆ.

ಒಪ್ಪೋ F17 ಪ್ರೊ ದೀಪಾವಳಿ ಆವೃತ್ತಿ

ಹೌದು, ಒಪ್ಪೋ ಕಂಪೆನಿ ತನ್ನ ಒಪ್ಪೋ F17 ಪ್ರೊ ದೀಪಾವಳಿ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಆನ್‌ಲೈನ್ ಮತ್ತು ಆಫ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಲಭ್ಯವಿರುತ್ತದೆ. ನೀವು ಇದನ್ನು ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಮೂಲಕ ಮೊದಲೇ ಆರ್ಡರ್ ಸಹ ಮಾಡಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಜೊತೆಗೆ 10,000mAh ಒಪ್ಪೊ ಪವರ್ ಬ್ಯಾಂಕ್ ಅನ್ನು ಸಹ ಉಡುಗೊರೆಯಾಗಿ ದೊರೆಯಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಒಪ್ಪೋ F17 ಪ್ರೊ ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.43 ಇಂಚಿನ ಫುಲ್‌ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90.7% ಸ್ಕ್ರೀನ್‌ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಮೀಡಿಯಾ ಟೆಕ್‌ ಹಿಲಿಯೊ P95 ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಇದು 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಒಪ್ಪೊ F17 ಪ್ರೊ ದೀಪಾವಳಿ ಆವೃತ್ತಿ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮೊನೊ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಸಾಮರ್ಥ್ಯದ ಡ್ಯುಯೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,015mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 30W VOC ಫ್ಲ್ಯಾಶ್ ಚಾರ್ಜ್ 4.0 ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLTE, ಬ್ಲೂಟೂತ್ 5.1, ಯುಎಸ್‌ಬಿ, ಟೈಪ್-ಸಿ ಪೋರ್ಟ್ ಮತ್ತು 3.5mm ಹೆಡ್‌ಫೋನ್‌ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ F17 ಪ್ರೊ ದೀಪಾವಳಿ ಆವೃತ್ತಿಯ ಬೆಲೆ, 23,990 ರೂ ಆಗಿದ್ದು, ಇದು ಆನ್‌ಲೈನ್ ಮತ್ತು ಆಫ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಲಭ್ಯವಿರುತ್ತದೆ. ನೀವು ಇದನ್ನು ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಮೂಲಕ ಫ್ರೀ ಆರ್ಡರ್ ಮಾಡಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮ್ಯಾಟ್ ಬ್ಲಾಕ್, ಮ್ಯಾಜಿಕ್ ಬ್ಲೂ ಅಂಡ್ ಮೆಟಾಲಿಕ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಬರುತ್ತದೆ.

Best Mobiles in India

English summary
Oppo F17 Pro Diwali edition will come with a special gift box that has a 10,000mAh power bank and a phone case.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+