ಮತ್ತೆ ಭಾರೀ ಬೆಲೆ ಇಳಿಕೆ ಕಂಡ ಒಪ್ಪೋ F17 ಪ್ರೊ ಸ್ಮಾರ್ಟ್‌ಫೋನ್!
ಒಪ್ಪೋ ಮೊಬೈಲ್ ಸಂಸ್ಥೆಯ ಒಪ್ಪೋ F17 ಪ್ರೊ ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿರುವ ಫೋನ್ ಆಗಿದೆ. ಈ ಫೋನ್ ಈಗಾಗಲೇ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡಿದ್ದು, ಇದೀಗ ಮತ್ತೇ ಭಾರೀ ಡಿಸ್ಕೌಂಟ್ ಪಡೆದಿದೆ. ಅಂದಹಾಗೆ ಈ ಫೋನ್ ಮೀಡಿಯಾ ಟೆಕ್ ಹಿಲಿಯೊ P95 SoC ಅನ್ನು ಪಡೆದಿದೆ.
ಹೌದು, ಒಪ್ಪೋ ಕಂಪನಿಯ ಒಪ್ಪೋ F17 ಪ್ರೊ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದು 8GB RAM + 128GB ವೇರಿಯಂಟ್ ಫೋನ್ 25,990ರೂ. ಗಳ ಬೆಲೆಯಲ್ಲಿ ಇದ್ದು, ಆದರೆ ರಿಯಾಯಿತಿಯಲ್ಲಿ 21,489 ರೂ.ಗಳಲ್ಲಿ ಕಾಣಿಸಿಕೊಂಡಿದೆ. ಇನ್ನು ಇದರೊಂದಿಗೆ ಹೆಚ್ಚುವರಿಯಾಗಿ ಬ್ಯಾಂಕ್ ಆಫರ್, ನೋ ಕಾಸ್ಟ್ ಇಎಮ್‌ಐ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಾಗಲಿದೆ.

ಇನ್ನು ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಮ್ಯಾಜಿಕ್ ಬ್ಲ್ಯಾಕ್, ಮ್ಯಾಜಿಕ್ ಬ್ಲೂ ಮತ್ತು ಮೆಟಾಲಿಕ್ ವೈಟ್ ಬಣ್ಣ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಒಪ್ಪೋ F17 ಪ್ರೊ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೊ F17 ಪ್ರೊ : ಡಿಸ್‌ಪ್ಲೇ ರಚನೆ : ಒಪ್ಪೊ F17 ಪ್ರೊ ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ರೆಸಲ್ಯೂಶನ್ ಜೊತೆಗೆ 6.43-ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 20: 9 ಆಕಾರ ಅನುಪಾತ ಹೊಂದಿದ್ದು, ಸ್ಕ್ರೀನ್ ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ.90.7 ಆಗಿದೆ.
ಒಪ್ಪೊ F17 ಪ್ರೊ : ಪ್ರೊಸೆಸರ್ : ಇನ್ನು ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ ಪಿ95 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM + 128GB ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಒಪ್ಪೊ F17 ಪ್ರೊ : ಕ್ಯಾಮೆರಾ : ಒಪ್ಪೊ F17 ಪ್ರೊ ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾವು 48 ಎಂಪಿ ಸೆನ್ಸಾರ್‌ಹೊಂದಿದ್ದು, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು ಮೂರು ಹಾಗೂ ನಾಲ್ಕನೇ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್ ಪಡೆದಿದೆ.
ಒಪ್ಪೊ F17 ಪ್ರೊ : ಬ್ಯಾಟರಿ ಮತ್ತು ಇತರೆ : ಈ ಸ್ಮಾರ್ಟ್‌ಫೋನ್ 4,000 mAh ಬ್ಯಾಟರಿಯನ್ನು ಪಡೆದಿದ್ದು, 30W VOOC ಚಾರ್ಜ್ 4.0 ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇನ್ನುಳಿದಂತೆ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್ ಅನ್ನು ಬೆಂಬಲಿಸಲಿದೆ.
ಒಪ್ಪೊ F17 ಪ್ರೊ : ಮೆಮೊರಿ ಮತ್ತು ಕಲರ್ ಆಯ್ಕೆ : ಒಪ್ಪೋ ಎಫ್ 17 ಪ್ರೊ ಸ್ಮಾರ್ಟ್‌ಫೋನ್ 8GB RAM + 128GB ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಒಪ್ಪೋ F17 ಪ್ರೊ ಅನ್ನು ಮ್ಯಾಜಿಕ್ ಬ್ಲ್ಯಾಕ್, ಮ್ಯಾಜಿಕ್ ಬ್ಲೂ ಮತ್ತು ಮೆಟಾಲಿಕ್ ವೈಟ್ ಬಣ್ಣ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








