ಶಾಶ್ವತ ಬೆಲೆ ಇಳಿಕೆ ಕಂಡ ಒಪ್ಪೋ F17 ಪ್ರೊ ಸ್ಮಾರ್ಟ್‌ಫೋನ್‌!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ ಪರಿಚಯಿಸಿರುವ ಒಪ್ಪೋ ಇತ್ತೀಚಿಗಷ್ಟೇ ಒಪ್ಪೋ F17 ಪ್ರೊ ಸ್ಮಾರ್ಟ್‌ಫೋನ್‌ ಪರಿಚಯಿಸಿತ್ತು. ಸದ್ಯ ಇದೀಗ ಭಾರತದಲ್ಲಿ ಒಪ್ಪೋ F17 ಪ್ರೊ ಬೆಲೆಯಲ್ಲಿ ಶಾಶ್ವತವಾಗಿ 1,500 ರೂ ನಷ್ಟು ಕಡಿತ ಮಾಡಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ತನ್ನ ಒಪ್ಪೋ F17 ಪ್ರೊ ಸ್ಮಾರ್ಟ್‌ಫೋನ್‌ ಬೆಲೆಯನ್ನು ಶಾಶ್ವತವಾಗಿ ಕಡಿತ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾದ ನಂತರ ಫೋನ್‌ನಲ್ಲಿ ಪರಿಚಯಿಸಲಾದ ಮೊದಲ ಬೆಲೆ ಕಡಿತ ಇದಾಗಿದೆ. ಇನ್ನು ಒಪ್ಪೋ ಎಫ್ 17 ಪ್ರೊ ಬೆಲೆ ಕಡಿತವು ಶಾಶ್ವತವಾಗಿದೆ ಎಂದು ಒಪ್ಪೊ ದೃಡಪಡಿಸಿದೆ. ಇದಲ್ಲದೆ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್, ಕೆಲವು ಆಫ್‌ಲೈನ್ ರಿಟೆಲ್‌ ವ್ಯಾಪಾರಿಗಳೊಂದಿಗೆ, ವಿನಿಮಯ, ನೊ ಕಾಸ್ಟ್‌ ಇಎಂಐ ಮತ್ತು ಬ್ಯಾಂಕ್ ಆಫರ್‌ಗಳ ಮೂಲಕ ಫೋನ್‌ನಲ್ಲಿ ಮತ್ತಷ್ಟು ರಿಯಾಯಿತಿಯನ್ನು ನೀಡುತ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಒಪ್ಪೊ F 17 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್‌ ರೆಸಲ್ಯೂಶನ್ ಜೊತೆಗೆ 6.43-ಇಂಚಿನ ಪೂರ್ಣ-ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 20: 9 ಆಕಾರ ಅನುಪಾತ ಹೊಂದಿದ್ದು, ಸ್ಕ್ರೀನ್ ನಿಂದ ಬಾಹ್ಯ ಬಾಡಿಯ ನಡುವಿನ ಅಂತರ ಶೇ.90.7 ಆಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ ಪಿ 95 SoC ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM+128GB ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಒಪ್ಪೊ F17 ಪ್ರೊ ಫೋನ್ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾವು 48 ಎಂಪಿ ಸೆನ್ಸಾರ್‌ಹೊಂದಿದ್ದು, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನು ಮೂರು ಹಾಗೂ ನಾಲ್ಕನೇ ಕ್ಯಾಮೆರಾ ಕ್ರಮವಾಗಿ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಸೆಲ್ಫಿ ಕ್ಯಾಮೆರಾವು 16ಎಂಪಿ ಸೆನ್ಸಾರ್‌ ಪಡೆದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್ 4,000mAh ಬ್ಯಾಟರಿಯನ್ನು ಪಡೆದಿದ್ದು, 30W VOOC ಚಾರ್ಜ್ 4.0 ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನವನ್ನು ಹೊಂದಿದೆ. ಇನ್ನುಳಿದಂತೆ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಪ್ರಸ್ತುತ, ಒಪ್ಪೋ ಎಫ್ 17 ಪ್ರೊ ಸ್ಮಾರ್ಟ್‌ಫೋನ್‌ 1,500 ರೂ. ಶಾಶ್ವತ ಬೆಲೆ ಕಡಿತವನ್ನು ಹೊಂದಿದ್ದು, ಮೂಲ ಬೆಲೆಗಿಂತ 22,990 ರೂ. ನಿಂದ 21,490 ರೂ.ಗೆ ಇಳಿಕೆ ಆಗಿದೆ. ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಎರಡೂ ಪಟ್ಟಿಗಳು ಈಗ ಕಡಿಮೆಯಾದ ಬೆಲೆಯನ್ನು ಪ್ರತಿಬಿಂಬಿಸುತ್ತಿವೆ. ಇನ್ನು ಒಪ್ಪೋ F17 ಪ್ರೊ ಅನ್ನು ಮ್ಯಾಜಿಕ್ ಬ್ಲ್ಯಾಕ್, ಮ್ಯಾಜಿಕ್ ಬ್ಲೂ ಮತ್ತು ಮೆಟಾಲಿಕ್ ವೈಟ್ ಬಣ್ಣ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Oppo F17 Pro price in India has been permanently cut by Rs. 1,500. And the phone is now listed on Amazon and Flipkart at its reduced price.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X