Home
ಸುದ್ದಿಜಾಲ

ಶೀಘ್ರದಲ್ಲೇ ಭಾರತದಲ್ಲಿ ಒಪ್ಪೋ F19 ಸರಣಿಯ ಸ್ಮಾರ್ಟ್‌ಫೋನ್‌ ಬಿಡುಗಡೆ!

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿರುವ ಒಪ್ಪೋ ಸಂಸ್ಥೆ F19 ಸರಣಿಯ ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸರಣಿಯಲ್ಲಿ ಒಪ್ಪೋ F19 ಪ್ರೊ + ಮತ್ತು ಒಪ್ಪೊ F19 ಪ್ರೊ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಅಮೆಜಾನ್ ಮೂಲಕ ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗ್ತಿದೆ.

ಒಪ್ಪೋ

ಹೌದು, ಒಪ್ಪೋ ಸಂಸ್ಥೆ ತನ್ನ ಒಪ್ಪೋ F19 ಸರಣಿಯ ಸ್ಮಾರ್ಟ್‌ಫೋನ್‌ ಪರಿಚಯಿಸಲು ವೇದಿಕೆ ಸಿದ್ದ ಪಡಿಸಿದೆ. ಇದು ಒಪ್ಪೊ F17 ಸರಣಿಯ ಉತ್ತರಾಧಿಕಾರಿಯಾಗಿದೆ. ಹೆಚ್ಚುವರಿಯಾಗಿ, ಅಮೆಜಾನ್ ಪುಟವು ಎರಡು ಫೋನ್‌ಗಳ ವಿಶೇಷಣಗಳ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದಿದ್ದರೂ, ಒಪ್ಪೋ F19ಪ್ರೊ+ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಕೆಲವೊಂದು ಆನ್‌ಲೈನ್‌ ವೆಬ್‌ಸೈಟ್‌ಗಳಲ್ಲಿ ಸೋರಿಕೆ ಆಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಒಪ್ಪೋ ಎಫ್ 19 ಪ್ರೊ + 5G ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಸೂಪರ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಒಪ್ಪೋ ಎಫ್ 19 ಪ್ರೊ+ ಸ್ಮಾರ್ಟ್‌ಫೋನ್‌ ಮಿಡಿಯಾಟೆಕ್‌ ಡೈಮೆನ್ಸಿಟಿ 800U SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ 8GB RAM+128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, ಇದು 30W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ F19 ಪ್ರೊ + 5G ಸ್ಮಾರ್ಟ್‌ಫೋನ್‌ 8GB RAM + 128 GB ರೂಪಾಂತರಕ್ಕೆ 25,000 ರೂ. ಬೆಲೆಯನ್ನು ಹೊಂದಿರಲಿದೆ ಎಂದು ನೀರಿಕ್ಷಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವಾಗ ಲಭ್ಯವಾಗಲಿದೆ ಎಂಬುದರ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

Best Mobiles in India

English summary
Oppo F19 Pro+ and Oppo F19 Pro launch in India soon via Amazon.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+