ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ ಜಬರ್ದಸ್ತ್ ಇಳಿಕೆ!

|

ಒಪ್ಪೋ ಕಂಪೆನಿಯ ಜನಪ್ರಿಯ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾದ ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಭಾರೀ ಇಳಿಕೆ ಆಗಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್ ಹೊಂದಿದೆ.

ಸ್ಮಾರ್ಟ್‌ಫೋನ್‌

ಹೌದು, ಒಪ್ಪೋ ಕಂಪನಿಯ ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಈಗ 1,000ರೂ. ಇಳಿಕೆ ಆಗಿದೆ. ಹೀಗಾಗಿ 8GB + 128GB ಸ್ಟೋರೇಜ್ ವೇರಿಯಂಟ್‌ ಮಾಡೆಲ್‌ ಬೆಲೆಯು ಈಗ 25,999ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ ಕಾಸ್ಮಿಕ್ ಬ್ಲ್ಯಾಕ್‌ ಹಾಗೂ ರೈನ್‌ಬೋ ಸ್ಪೆಕ್ಟ್ರಮ್‌ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ. ಅಂದಹಾಗೆ ಈ ವರ್ಷದ ಏಪ್ರಿಲ್‌ನಲ್ಲಿ ಈ ಒಪ್ಪೋ F21 ಪ್ರೊ ಹಾಗೂ ಒಪ್ಪೋ F21 ಪ್ರೊ 5G ಆವೃತ್ತಿಗಳಲ್ಲಿ ಬಿಡುಗಡೆ ಆಗಿದೆ. ಹಾಗಾದರೇ ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳು ಹೇಗಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್‌

ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್‌

ಒಪ್ಪೋ F21 ಪ್ರೊ 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಲರ್‌OS 12.1 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಸ್ಮಾರ್ಟ್‌ಫೋನ್‌

ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಹಿಂಭಾಗದಲ್ಲಿ ಡ್ಯುಯಲ್ ಆರ್ಬಿಟ್ ಲೈಟ್‌ಗಳನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಜೊತೆಗೆ 4,500mAh ಬ್ಯಾಟರಿ ಹೊಂದಿದ್ದು, 33W SuperVOOC ಚಾರ್ಜಿಂಗ್ ಬೆಂಬಲಿಸಲಿದೆ.

ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌

ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌

ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಲರ್‌OS 12.1 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

SuperVOOC

ಈ ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ Sony IMX709 ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು,33W SuperVOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್, GPS- AGPS ಮತ್ತು USB ಟೈಪ್-C ಪೋರ್ಟ್ ಸೇರಿವೆ.

Best Mobiles in India

English summary
Oppo F21 Pro Receives a Price cut in India: Check New Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X