ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ ಅನಾವರಣ! ವಿಶೇಷತೆ ಏನು?

|

ಟೆಕ್‌ ವಲಯದಲ್ಲಿ ಒಪ್ಪೋ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರ ಮನಗೆದ್ದಿದೆ. ಸದ್ಯ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್‌ ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಆಯ್ದ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ಭಾರತದಲ್ಲಿಯೂ ಕೂಡ ಲಾಂಚ್‌ ಆಗಲಿದೆ ಎನ್ನಲಾಗಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ಹೊಸ ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಒಳಗೊಂಡ 6.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 12-ಆಧಾರಿತ ColorOS 12.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಮೈಕ್ರೊ SD ಕಾರ್ಡ್ ಸ್ಲಾಟ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ಕ್ಯಾಮೆರಾ ವಿಶೇ‍ಷ

ಕ್ಯಾಮೆರಾ ವಿಶೇ‍ಷ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ f/1.7 ಅಪರ್ಚರ್ ಲೆನ್ಸ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ 'ಮೈಕ್ರೋಸ್ಕೋಪ್' ಲೆನ್ಸ್‌, ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಒಪ್ಪೋ F21ಪ್ರೊ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W SuperVOOC ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5.1, 3.5mm ಹೆಡ್‌ಫೋನ್ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಆಪ್ಟಿಕಲ್ ಸೆನ್ಸಾರ್‌, ಗೈರೊಸ್ಕೋಪ್, ಪೆಡೋಮೀಟರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ F21 ಪ್ರೊ ಸ್ಮಾರ್ಟ್‌ಫೋನ್‌ ಭಾಂಗ್ರಾದೇಶದ ಮಾರುಕಟ್ಟೆಯಲ್ಲಿ 8GB + 128GB ಸ್ಟೋರೇಜ್ ಮಾದರಿಗೆ BDT 27,990 (ಸುಮಾರು 24,640ರೂ) ಬೆಲೆಗೆ ನಿಗದಿಪಡಿಸಲಾಗಿದೆ. ಇದು ಕಾಸ್ಮಿಕ್ ಕಪ್ಪು ಮತ್ತು ಸನ್‌ಸೆಟ್ ಆರೆಂಜ್ ಬಣ್ಣದ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇನ್ನು ಈ ಫೋನ್‌ ಭಾರತದಲ್ಲಿ ಇದೇ ಏಪ್ರಿಲ್ 12 ರಂದು ಬಿಡುಗಡೆಯಾಗಲಿದೆ.

Best Mobiles in India

Read more about:
English summary
Oppo F21 Pro With triple camera Launched, Ahead of India Debut on April 12

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X