ಈ ಜನಪ್ರಿಯ 5G ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!..ವೇಗದ ಪ್ರೊಸೆಸರ್ ಇದೆ!
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾದ ಒಪ್ಪೋ ಕೆಲವು ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಆ ಪೈಕಿ ಒಪ್ಪೋ F23 5G ಸಹ ಪ್ರಮುಖ ಫೋನ್‌ಗಳಲ್ಲಿ ಒಂದು. ಆದರೆ ಈ ಫೋನ್ ಈಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ಬೆಲೆ ಇಳಿಕೆ ಪಡೆದಿದ್ದು, ಗ್ರಾಹಕರು ಖುಷಿ ಪಡುವಂತೆ ಆಗಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ F23 5G ಫೋನ್ 14% ರಷ್ಟು ರಿಯಾಯಿತಿ ಪಡೆದಿದೆ. ಈ ಫೋನಿನ 8GB RAM + 256GB ಸ್ಟೋರೇಜ್ ವೇರಿಯಂಟ್ 28,999ರೂ. ಬೆಲೆಯಲ್ಲಿ ಪಡೆದಿದ್ದು, ಇದೀಗ ಕೊಡುಗೆಯಲ್ಲಿ ಈ ಫೋನ್ 24,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

ಇನ್ನು ಒಪ್ಪೋ F23 5G ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್ ಪಡೆದಿದೆ. ಹಾಗೆಯೇ ಬೋಲ್ಡ್ ಗೋಲ್ಡ್ ಮತ್ತು ಕೂಲ್ ಬ್ಲ್ಯಾಕ್ ಶೇಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ. ಹಾಗಾದರೆ ಒಪ್ಪೋ F23 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ F23 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ ಹೇಗೆ : ಒಪ್ಪೋ F23 5G ಸ್ಮಾರ್ಟ್‌ಫೋನ್ 6.72 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LTPS LCD ಡಿಸ್‌ಪ್ಲೇ ಅನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 91.4% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಇದು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 391ppi ಪಿಕ್ಸೆಲ್ ಸಾಂದ್ರತೆಯನ್ನು ಪಡೆದಿದ್ದು, ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಪಡೆದಿದೆ.
ಒಪ್ಪೋ F23 5G ಪ್ರೊಸೆಸರ್ ಪವರ್ ಏನು : ಒಪ್ಪೋ F23 5G ಮೊಬೈಲ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಪವರ್ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ಸಪೋರ್ಟ್‌ನೊಂದಿಗೆ ಕೆಲಸ ಮಾಡಲಿದೆ. ಹಾಗೆಯೇ 8GB RAM ಮತ್ತು 256GB ಆಂತರೀಖ ಸ್ಟೋರೇಜ್ ಅನ್ನು ಒಳಗೊಂಡಿದ್ದು, ಇದಲ್ಲದೆ ಬಳಕೆದಾರರು ಲಭ್ಯವಿರುವ RAM ಅನ್ನು 16GB ವರೆಗೆ ವಿಸ್ತರಿಸುವ ಆಯ್ಕೆ ಇದೆ.
ಒಪ್ಪೋ F23 5G ಕ್ಯಾಮೆರಾ ಸೆನ್ಸಾರ್ ಮಾಹಿತಿ : ಒಪ್ಪೋ F23 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಆಟೋಫೋಕಸ್ ಲೆನ್ಸ್, ಸೆಕೆಂಡರಿ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೈಕ್ರೋ ಸೆನ್ಸರ್ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.
ಒಪ್ಪೋ F23 5G ಬ್ಯಾಟರಿ ಬ್ಯಾಕ್‌ಅಪ್ ಮಾಹಿತಿ : ಒಪ್ಪೋ F23 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, ಜೊತೆಗೆ ಇದು 67W ಸೂಪರ್‌ವೋಕ್ ಚಾರ್ಜಿಂಗ್ ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ. ಇದಲ್ಲದೆ ಆಕ್ಸಿಲೇರೋಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ದಿಕ್ಸೂಚಿ, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಸೌಲಭ್ಯಗಳನ್ನು ಸಹ ಹೊಂದಿದೆ.
ಒಪ್ಪೋ F23 5G ಮೆಮೊರಿ ಮತ್ತು ಕಲರ್ : ಭಾರತದಲ್ಲಿ ಒಪ್ಪೋ F23 5G ಮೊಬೈಲ್ 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಬೋಲ್ಡ್ ಗೋಲ್ಡ್ ಮತ್ತು ಕೂಲ್ ಬ್ಲ್ಯಾಕ್ ಶೇಡ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಅಮೆಜಾನ್‌ನಲ್ಲಿ ಇ ಕಾಮರ್ಸ್ ತಾಣದಲ್ಲಿ ಖರೀದಿಸಬಹುದಾಗಿದೆ.


Click it and Unblock the Notifications








