Home
ಸುದ್ದಿಜಾಲ

OPPO: ಒಪ್ಪೋ F23 5G ಸ್ಮಾರ್ಟ್‌ಫೋನ್‌ ಮೇಲೆ ಭಾರಿ ರಿಯಾಯಿತಿ: ಆಫರ್‌ ಮಿಸ್‌ ಮಾಡ್ಕೋಬೇಡಿ

ಒಪ್ಪೋ ಕಂಪೆನಿಯ ಜನಪ್ರಿಯ ಸ್ಮಾರ್ಟ್‌ಫೋನ್‌ ಒಪ್ಪೋ F23 5G (oppo f23 5G) ಇದೀಗ ಅಮೆಜಾನ್‌ ತಾಣದಲ್ಲಿ ಭರ್ಜರಿ ಡಿಸ್ಕೌಂಟ್‌ ಪಡೆದುಕೊಂಡಿದೆ. ಅಮೆಜಾನ್‌ ಗ್ರೇಟ್‌ ರಿಪಬ್ಲಿಕ್‌ ಡೇ ಸೇಲ್‌ ಪ್ರಯುಕ್ತ ವಿಶೇಷ ರಿಯಾಯಿತಿ ಪಡೆದಿದ್ದು, ಮೊಬೈಲ್‌ ಪ್ರಿಯರ ಗಮನಸೆಳೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಒಳಗೊಂಡಿದ್ದು, ಸೆಲ್ಫಿ ಪ್ರಿಯರ ಹಾಟ್‌ಫೇವರಿಟ್‌ಗಳಲ್ಲಿ ಒಂದಾಗಿದೆ.

ಹೌದು, ಒಪ್ಪೋ F23 5G ಸ್ಮಾರ್ಟ್‌ಫೋನ್‌ ಅಮೆಜಾನ್‌ ತಾಣದಲ್ಲಿ ಬರೋಬ್ಬರಿ 21% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದ್ದು, ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಹಾಗಾದ್ರೆ ಡಿಸ್ಕೌಂಟ್‌ ನಂತರದ ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿದೆ? ಇದರ ಫೀಚರ್ಸ್‌ ವಿವರಗಳೇನು? ಇದೆಲ್ಲದರ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಒಪ್ಪೋ F23 5G ಸ್ಮಾರ್ಟ್‌ಫೋನ್‌ ಮೇಲೆ ಭಾರಿ ರಿಯಾಯಿತಿ: ಆಫರ್‌ ಮಿಸ್‌ ಮಾಡ್ಕೋಬೇಡಿ

ಒಪ್ಪೋ F23 5G ಡಿಸ್ಕೌಂಟ್‌ ಏನಿದೆ?
ಒಪ್ಪೋ F23 5G ಸ್ಮಾರ್ಟ್‌ಫೋನಿನ 8GB RAM ಮತ್ತು 256GB ಸ್ಟೋರೇಜ್‌ ಆಯ್ಕೆಯನ್ನು ಅಮೆಜಾನ್‌ ತಾಣದಲ್ಲಿ 28,999ರೂ ಬೆಲೆಗೆ ಪಟ್ಟಿ ಮಾಡಲಾಗಿದೆ. ಇದರ ಮೇಲೆ 21% ಡಿಸ್ಕೌಂಟ್‌ ನೀಡುತ್ತಿರುವುದರಿಂದ ಸ್ಮಾರ್ಟ್‌ಫೋನ್‌ ಬೆಲೆ ಇದೀಗ 22,999ರೂ ಬೆಲೆಗೆ ಇಳಿಕೆಯಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಮೇಲೆ ವಿವಿಧ ಬ್ಯಾಂಕ್‌ ಕಾರ್ಡ್‌ಗಳ ಆಫರ್‌ ಕೂಡ ದೊರೆಯುತ್ತಿದ್ದು, ಇದರ ಬೆಲೆ ಇನ್ನಷ್ಟು ಇಳಿಕೆಯಾಗಲಿದೆ. ಇನ್ನು ಸ್ಮಾರ್ಟ್‌ಫೋನ್‌ ಬೊಲ್ಡ್‌ ಗೋಲ್ಡ್‌ ಕಲರ್‌ ಆಯ್ಕೆಯಲ್ಲಿ ದೊರೆಯಲಿದೆ.

ಒಪ್ಪೋ F23 5G ಸ್ಮಾರ್ಟ್‌ಫೋನ್‌ ಪೀಚರ್ಸ್‌ ಹೇಗಿದೆ?
ಒಪ್ಪೋ F23 5G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LTPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದ್ದು, 20:9 ರಚನೆಯ ಅನುಪಾತ ಮತ್ತು 91.4% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 391ppi ಪಿಕ್ಸೆಲ್ ಸಾಂದ್ರತೆ ಪಡೆದುಕೊಂಡಿದೆ.

ಒಪ್ಪೋ F23 5G ಪ್ರೊಸೆಸರ್‌ ಬಲವೇನು?
ಒಪ್ಪೋ F23 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಬಳಕೆದಾರರು ಲಭ್ಯವಿರುವ RAM ಅನ್ನು 16GB ವರೆಗೆ ವಿಸ್ತರಿಸಬಹುದು.

ಒಪ್ಪೋ F23 5G ಸ್ಮಾರ್ಟ್‌ಫೋನ್‌ ಮೇಲೆ ಭಾರಿ ರಿಯಾಯಿತಿ: ಆಫರ್‌ ಮಿಸ್‌ ಮಾಡ್ಕೋಬೇಡಿ

ಒಪ್ಪೋ F23 5G ಕ್ಯಾಮೆರಾ ಸೆಟಪ್‌ ಏನಿದೆ?
ಒಪ್ಪೋ F23 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಆಟೋಫೋಕಸ್ ಲೆನ್ಸ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೈಕ್ರೋ ಸೆನ್ಸರ್ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಗೊಂಡಿದೆ.

ಒಪ್ಪೋ F23 5G ಸ್ಮಾರ್ಟ್‌ಫೋನ್‌ ಮೇಲೆ ಭಾರಿ ರಿಯಾಯಿತಿ: ಆಫರ್‌ ಮಿಸ್‌ ಮಾಡ್ಕೋಬೇಡಿ

ಒಪ್ಪೋ F23 5G ಬ್ಯಾಟರಿ ಸಾಮರ್ಥ್ಯ ಮತ್ತು ಇತರೆ ಸೌಲಭ್ಯ
ಒಪ್ಪೋ F23 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಸೂಪರ್‌ವೋಕ್‌ ಚಾರ್ಜಿಂಗ್‌ ಬೆಂಬಲಿಸಲಿದೆ. ಇದು 44 ನಿಮಿಷಗಳಲ್ಲಿ ಫೋನ್‌ ಅನ್ನು ಸಂಪೂರ್ಣವಾಗಿ ಚಾರ್ಜ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ. ಇದಲ್ಲದೆ ಆಕ್ಸಿಲೇರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಇ-ದಿಕ್ಸೂಚಿ, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
OPPO F23 5G Samrtphone Get Massive Discount in Amazon Great Republic Day Sale
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+