Home
ಸುದ್ದಿಜಾಲ

ಭಾರತದಲ್ಲಿ ಒಪ್ಪೋ F23 5G ಲಾಂಚ್‌! ಟೆಕ್‌ ಮಾರುಕಟ್ಟೆಯಲ್ಲಿ ಒಪ್ಪೋ ಸುನಾಮಿ!

ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್‌ ಇದೆ. ಇದಕ್ಕೆ ಅನುಗುಣವಾಗಿ ಒಪ್ಪೋ ಕಂಪೆನಿ ಕೂಡ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಹೊಸ ಒಪ್ಪೋ F23 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಪಡೆದುಕೊಂಡಿದೆ.

ಹೌದು, ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ F23 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಒಪ್ಪೋ F23 5G ಸ್ಮಾರ್ಟ್‌ಫೋನ್‌ ಏನೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಒಪ್ಪೋ F23 5G ಲಾಂಚ್‌! ಟೆಕ್‌ ಮಾರುಕಟ್ಟೆಯಲ್ಲಿ ಒಪ್ಪೋ ಸುನಾಮಿ!

ಒಪ್ಪೋ F23 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಒಪ್ಪೋ F23 5G ಸ್ಮಾರ್ಟ್‌ಫೋನ್‌ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LTPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 91.4% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 391ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಒಪ್ಪೋ F23 5G ಪ್ರೊಸೆಸರ್‌ ಯಾವುದು?

ಒಪ್ಪೋ F23 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಬಳಕೆದಾರರು ಲಭ್ಯವಿರುವ RAM ಅನ್ನು 16GB ವರೆಗೆ ವಿಸ್ತರಿಸಬಹುದು.

ಭಾರತದಲ್ಲಿ ಒಪ್ಪೋ F23 5G ಲಾಂಚ್‌! ಟೆಕ್‌ ಮಾರುಕಟ್ಟೆಯಲ್ಲಿ ಒಪ್ಪೋ ಸುನಾಮಿ!

ಒಪ್ಪೋ F23 5G ಕ್ಯಾಮೆರಾ ಸೆಟ್‌ಅಪ್‌

ಒಪ್ಪೋ F23 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಆಟೋಫೋಕಸ್ ಲೆನ್ಸ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೈಕ್ರೋ ಸೆನ್ಸರ್ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಗೊಂಡಿದೆ.

ಒಪ್ಪೋ F23 5G ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಒಪ್ಪೋ F23 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 67W ಸೂಪರ್‌ವೋಕ್‌ ಚಾರ್ಜಿಂಗ್‌ ಬೆಂಬಲಿಸಲಿದೆ. ಇದು 44 ನಿಮಿಷಗಳಲ್ಲಿ ಫೋನ್‌ ಅನ್ನು ಸಂಪೂರ್ಣವಾಗಿ ಚಾರ್ಜ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, Wi-Fi, ಬ್ಲೂಟೂತ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ. ಇದಲ್ಲದೆ ಆಕ್ಸಿಲೇರೋಮೀಟರ್‌, ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಇ-ದಿಕ್ಸೂಚಿ, ಗೈರೊಸ್ಕೋಪ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಹೊಂದಿದೆ.

ಭಾರತದಲ್ಲಿ ಒಪ್ಪೋ F23 5G ಲಾಂಚ್‌! ಟೆಕ್‌ ಮಾರುಕಟ್ಟೆಯಲ್ಲಿ ಒಪ್ಪೋ ಸುನಾಮಿ!

ಭಾರತದಲ್ಲಿ ಒಪ್ಪೋ F23 5G ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಒಪ್ಪೋ F23 5G ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್ ಮಾದರಿಗೆ 24,999ರೂ. ಬೆಲೆಯನ್ನು ಹೊಂದಿದೆ. ಇದನ್ನು ಬೋಲ್ಡ್ ಗೋಲ್ಡ್ ಮತ್ತು ಕೂಲ್ ಬ್ಲ್ಯಾಕ್ ಶೇಡ್‌ ಕಲರ್‌ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಪ್ರಸ್ತುತ ಕಂಪನಿಯ ವೆಬ್‌ಸೈಟ್ ಮತ್ತು ಅಮೆಜಾನ್‌ನಲ್ಲಿ ಪ್ರಿ ಆರ್ಡರ್‌ಗೆ ಲಭ್ಯವಿದ್ದು, ಇದೇ 18 ರಿಂದ ಮಾರಾಟವಾಗಲಿದೆ.

ಲಾಂಚ್‌ ಆಫರ್‌ ಏನಿದೆ?

ಒಪ್ಪೋ ಕಂಪೆನಿ ಈ ಸ್ಮಾರ್ಟ್‌ಫೋನ್‌ ಅನ್ನು ICICI ಮತ್ತು HDFC ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 2,500ರೂ. ಫ್ಲ್ಯಾಟ್‌ ರಿಯಾಯಿತಿ ನೀಡಲಿದೆ. ಅಲ್ಲದೆ ಎಕ್ಸ್‌ಚೇಂಜ್‌ ಆಫರ್‌(ಡಿವೈಸ್‌ನ ಗುಣಮಟ್ಟದ ಮೇಲೆ) ಕೂಡ ಲಭ್ಯವಿದೆ.

Best Mobiles in India

English summary
Oppo F23 5G in India has been set at Rs. 24,999 for the sole 8GB RAM + 256GB storage model.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+