Home
ಸುದ್ದಿಜಾಲ

ಭಾರತದಲ್ಲಿ ಒಪ್ಪೋ F23 ಪ್ರೊ 5G ಎಂಟ್ರಿಗೆ ಡೇಟ್‌ ಫಿಕ್ಸ್‌! ಯಾಕಿಷ್ಟು ನಿರೀಕ್ಷೆ?

ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಸಿಕ್ಕಾಪಟ್ಟೆ ಕ್ರೇಜ್‌ ಇದೆ. ತನ್ನ ವಿಭಿನ್ನ ಶೈಲಿಯ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳಿಂದ ಒಪ್ಪೊ ಗಮನಸೆಳೆದಿದೆ. ಇದೀಗ ಮತ್ತೊಮ್ಮೆ ಭಾರತದ ಮಾರುಕಟ್ಟೆಯಲ್ಲಿ ಸೌಂಡ್‌ ಮಾಡೋಕೆ ಮುಂದಾಗಿದೆ. ಅದರಂತೆ ಇದೀಗ ತನ್ನ ಹೊಸ ಒಪ್ಪೋ F23 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ತಯಾರಿ ನಡೆಸಿದೆ.

ಹೌದು, ಒಪ್ಪೋ F23 ಪ್ರೊ 5G ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡುವ ಸೂಚನೆ ನೀಡಿದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಮೇ 15 ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ ನಿರೀಕ್ಷೆ ಇಡಲಾಗಿದೆ? ಇದರ ಬೆಲೆ ಎಷ್ಟಿರಬಹುದು ಇದೆಲ್ಲದರ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ಒಪ್ಪೋ F23 ಪ್ರೊ 5G ಎಂಟ್ರಿಗೆ ಡೇಟ್‌ ಫಿಕ್ಸ್‌! ಯಾಕಿಷ್ಟು ನಿರೀಕ್ಷೆ?

ಒಪ್ಪೋ F23 ಪ್ರೊ 5G ಮೇಲೆ ಏನೆಲ್ಲಾ ನಿರೀಕ್ಷೆ?

ಒಪ್ಪೋ F23 ಪ್ರೊ 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಡಿಸ್‌ಪ್ಲೇ 580 ನಿಟ್ಸ್‌ ಬ್ರೈಟ್‌ನೆಸ್‌ ನೀಡಲಿದೆ ಎನ್ನಲಾಗಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 12-ಆಧಾರಿತ ಕಲರ್‌ಒಎಸ್‌ 12 UI ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಒಪ್ಪೋ F23 ಪ್ರೊ 5G ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬಳಸಿಕೊಂಡು 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ.

ಭಾರತದಲ್ಲಿ ಒಪ್ಪೋ F23 ಪ್ರೊ 5G ಎಂಟ್ರಿಗೆ ಡೇಟ್‌ ಫಿಕ್ಸ್‌! ಯಾಕಿಷ್ಟು ನಿರೀಕ್ಷೆ?

ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದು, 67W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಮೇ 15 ರಂದು ಬಿಡುಗಡೆಯಾಗಲಿದೆ. ಇದರ ಬೆಲೆ 25,000ರೂ. ರಿಂದ 26,000ರೂ.ವರೆಗೆ ಇರಲಿದೆ ಎಂದು ಅಂದಾಜಿಸಲಾಗಿದೆ.

ಇದಲ್ಲದೆ ಇತ್ತೀಚಿಗೆ ಒಪ್ಪೋ ಕಂಪೆನಿ ಭಾರತದಲ್ಲಿ ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್‌ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಆಧಾರಿತ ColorOS 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟತ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಭಾರತದಲ್ಲಿ ಒಪ್ಪೋ F23 ಪ್ರೊ 5G ಎಂಟ್ರಿಗೆ ಡೇಟ್‌ ಫಿಕ್ಸ್‌! ಯಾಕಿಷ್ಟು ನಿರೀಕ್ಷೆ?

ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಕ್ಯಾಮೆರಾವು HDR, ಬೊಕೆ ಫ್ಲೇರ್ ಪೋರ್ಟ್ರೇಟ್ ಮತ್ತು ಡ್ಯುಯಲ್-ವ್ಯೂ ವಿಡಿಯೋದಂತಹ ಫೀಚರ್ಸ್‌ಗಳನ್ನು ಹೊಂದಿದೆ.

ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್‌ 4,800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಸೂಪರ್‌ವೂಕ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದರಿಂದ ಈ ಫೋನ್‌ ಅನ್ನು ನೀವು ಕೇವಲ 45 ನಿಮಿಷಗಳಲ್ಲಿ 0 ರಿಂದ 100% ಬ್ಯಾಟರಿ ಚಾರ್ಜ್‌ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 5 ಮತ್ತು ಬ್ಲೂಟೂತ್ 5.1 ವಾಯರ್‌ಲೆಸ್ ಸಂಪರ್ಕವನ್ನು ಬೆಂಬಲಿಸಲಿದೆ.

Best Mobiles in India

English summary
Oppo F23 Pro 5G Could Launch in India on May 15
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+