Home
ಸುದ್ದಿಜಾಲ

64ಎಂಪಿ ಕ್ಯಾಮೆರಾ ಇರುವ ಈ ಫೋನಿಗೆ ಬಿಗ್ ಡಿಸ್ಕೌಂಟ್‌!..ಬೆಲೆ ತಿಳಿದ್ರೆ, ವಾವ್‌ ಅಂತೀರಾ!

ಫ್ಲಿಪ್‌ಕಾರ್ಟ್‌ ಆಯೋಜಿಸಿರುವ ಗೋಟ್‌ ಸೇಲ್‌ (Flipkart GOAT Sale 2024) ಮಾರಾಟ ಮೇಳ ಲೈವ್‌ ಆಗಿದ್ದು, ಇದೇ ಜುಲೈ 25 ರಂದು ಮುಕ್ತಾಯವಾಗಲಿದೆ. ಈ ಸೇಲ್‌ನಲ್ಲಿ ಕೆಲವು ಆಯ್ದ ಫೋನ್‌ಗಳಿಗೆ ಜಬರ್ದಸ್ತ್‌ ರಿಯಾಯಿತಿ ಘೋಷಿಸಿದೆ. ಆ ಲಿಸ್ಟ್‌ನಲ್ಲಿ ಒಪ್ಪೋ F25 ಪ್ರೊ 5G (OPPO F25 Pro 5G) ಮೊಬೈಲ್‌ ಗಮನಾರ್ಹ ಡಿಸ್ಕೌಂಟ್‌ ಪಡೆದಿದ್ದು, ಗ್ರಾಹಕರು ವಾವ್‌ ಎನ್ನುವಂತೆ ಮಾಡಿದೆ. ಅಂದಹಾಗೆ ಈ ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ.

ಹೌದು, ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತನ್ನ ವೆಬ್‌ಸೈಟ್‌ನಲ್ಲಿ ಫ್ಲಿಪ್‌ಕಾರ್ಟ್‌ನ ಗೋಟ್‌ ಸೇಲ್‌ (Flipkart GOAT Sale 2024) ಮಾರಾಟ ಚಾಲ್ತಿ ಇದೆ. ಈ ಮಾರಾಟದಲ್ಲಿ ಒಪ್ಪೋ ಸಂಸ್ಥೆಯ ಒಪ್ಪೋ F25 ಪ್ರೊ 5G (OPPO F25 Pro 5G) ಮೊಬೈಲ್‌ ಶೇ. 17% ರಷ್ಟು ನೇರ ಡಿಸ್ಕೌಂಟ್‌ ಪಡೆದುಕೊಂಡಿದೆ. ಈ ಫೋನಿನ 8 GB RAM + 128 GB ವೇರಿಯಂಟ್‌ ಆಫರ್‌ನಲ್ಲಿ 23,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.

64ಎಂಪಿ ಕ್ಯಾಮೆರಾ ಇರುವ ಈ ಫೋನಿಗೆ ಬಿಗ್ ಡಿಸ್ಕೌಂಟ್‌!..ಬೆಲೆ ಎಷ್ಟು?

ಇನ್ನು ಈ ಫೋನಿನ ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದ್ದು, ಜೊತೆಗೆ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಈ ಸ್ಮಾರ್ಟ್‌ಫೋನ್‌ 8GB + 128GB ಹಾಗೂ 8GB + 256GB ವೇರಿಯಂಟ್‌ ಆಯ್ಕೆಯಲ್ಲಿ ಖರೀದಿ ಮಾಡಬಹುದು. ಇನ್ನುಳಿದಂತೆ ಒಪ್ಪೋದ ಈ ಫೋನಿನ ಇತರೆ ಫೀಚರ್ಸ್‌ ಮುಂದೆ ನೋಡೋಣ ಬನ್ನಿರಿ.

ಒಪ್ಪೋ F25 ಪ್ರೊ 5G - ಫೀಚರ್ಸ್‌

ಒಪ್ಪೋ F25 ಪ್ರೊ 5G ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಕರ್ವ್ಡ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, 2412×1080 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಇದರ ಜೊತೆಗೆ 120Hz ರಿಫ್ರೆಶ್ ರೇಟ್, ಪಾಂಡಾ ಗ್ಲಾಸ್ ರಕ್ಷಣೆ ಸೌಲಭ್ಯವನ್ನು ಈ ಫೋನ್‌ನಲ್ಲಿ ಕಾಣಬಹುದು.

ಒಪ್ಪೋ F25 ಪ್ರೊ 5G ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದರ ಜೊತೆಗೆ ಮಾಲಿ-G68 MC4 ಜಿಪಿಯು ಸಪೋರ್ಟ್‌ ಸಹ ಇದೆ. ಹಾಗೆಯೇ 8GB + 128GB ಸ್ಟೋರೇಜ್‌ ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಸಹ ಕಾಣಬಹುದು.

ಒಪ್ಪೋ F25 ಪ್ರೊ 5G ಫೋನ್‌ ಟ್ರಿಪಲ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸರ್‌ ಸೌಲಭ್ಯದಲ್ಲಿ ಇದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್ ಕ್ಯಾಮರಾ ಸೆನ್ಸರ್‌ ಪಡೆದಿದ್ದು, ಮೂರನೇ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಕ್ಯಾಮರಾ ಜೊತೆಗೆ ಮೆಗಾ ಪಿಕ್ಸೆಲ್‌ OV02B10 ಸೆನ್ಸಾರ್‌ ಹೊಂದಿದೆ. ಇದರ ಜೊತೆಗೆ ಸೋನಿ IMX615 ಸೆನ್ಸರ್‌ನೊಂದಿಗೆ 32 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.

ಒಪ್ಪೋ F25 ಪ್ರೊ 5G ಮೊಬೈಲ್‌ 67W ಸೂಪರ್‌ವೂಕ್ ಚಾರ್ಜಿಂಗ್‌ ಸಪೋರ್ಟ್‌ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಇದರ ಜೊತೆಗೆ ಧೂಳು ಮತ್ತು ನೀರು ನಿರೋಧಕ (IP65) ರೇಟಿಂಗ್‌ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, ವೈ ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.2, ಜಿಪಿಎಸ್‌/ ಗ್ಲೋನಾಸ್, ಯುಎಸ್‌ಬಿ ಟೈಪ್-ಸಿ ಸಪೋರ್ಟ್‌ ಇದೆ.

Best Mobiles in India

English summary
OPPO F25 Pro 5G available at attractive price drop on flipkart. check price, offer and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+