ನಾಳೆ ಗ್ರ್ಯಾಂಡ್ ಎಂಟ್ರಿ ಕೊಡಲಿದೆ ಈ 32ಎಂಪಿ ಸೆಲ್ಫಿ ಕ್ಯಾಮೆರಾ ಫೋನ್!
ಜನಪ್ರಿಯ ಮೊಬೈಲ್ ಬ್ರ್ಯಾಂಡ್‌ಗಳ ಪೈಕಿ ಒಂದಾದ ಒಪ್ಪೋ ಸಂಸ್ಥೆಯು ಈಗಾಗಲೇ ಭಿನ್ನ ಶ್ರೇಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚತಿಸಿ ಸೈ ಎನಿಸಿಕೊಂಡಿದೆ. ಆ ಲಿಸ್ಟ್‌ಗೆ ಇದೀಗ ಒಪ್ಪೋ F25 ಪ್ರೊ 5G ಸ್ಮಾರ್ಟ್‌ಫೋನ್ ಅನ್ನು ಸೇರ್ಪಡೆ ಮಾಡಲು ಸಕಲ ರೀತಿ ಸಜ್ಜಾಗಿದೆ.
ಹೌದು, ಜನಪ್ರಿಯ ಒಪ್ಪೋ ಸಂಸ್ಥೆಯು ಇದೇ ಫೆ 29 (ನಾಳೆ) ಭಾರತೀಯ ಮಾರುಕಟ್ಟೆಗೆ ನೂತನವಾಗಿ ಒಪ್ಪೋ F25 ಪ್ರೊ 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲಿದೆ. ಈ ಬಗ್ಗೆ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣ ಮೈಕ್ರೋ ಪೇಜ್ ಸಹ ರಚಿಸಿದೆ. ಅಂದಹಾಗೆ ಈ ಫೋನಿನ ಲೀಕ್ ಫೀಚರ್ಸ್ ಮೊಬೈಲ್ ಪ್ರಿಯರ ಗಮನ ಸೆಳೆದಿವೆ.

ಬರಲಿರುವ ಒಪ್ಪೋ F25 ಪ್ರೊ 5G ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಇದಲ್ಲದೇ ಮುಂಭಾಗದಲ್ಲಿ 32 ಮೆಗಾ ಪಿಕ್ಸಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಸಹ ಪಡೆದುಕೊಂಡಿದೆ. ಇದರ ಜೊತೆಗೆ ಈ ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಹಾಗಾದರೇ ಒಪ್ಪೋ F25 ಪ್ರೊ 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಒಪ್ಪೋ F25 ಪ್ರೊ 5G - ಫೀಚರ್ಸ್
ಒಪ್ಪೋ F25 5G ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್‌ಪ್ಲೇ ಪಡೆದಿರಲಿದ್ದು, ಇದಕ್ಕೆ ಅನುಗುಣವಾಗಿ ಈ ಡಿಸ್‌ಪ್ಲೇಯು 2412 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿರಲಿದೆ. ಇದು ಫುಲ್ ಹೆಚ್‌ಡಿ+ ಅಮೋಲೆಡ್ ಕರ್ವ್ಡ್ ಡಿಸ್ಪ್ಲೇ ಆಯ್ಕೆ ಪಡೆಯಲಿದ್ದು, ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿರಲಿದ್ದು, ಪಾಂಡಾ ಗ್ಲಾಸ್ ರಕ್ಷಣೆ ಪಡೆದಿರದೆ.
ಹಾಗೆಯೇ ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ (2 x 2.6GHz ಕಾರ್ಟೆಕ್ಸ್-A78 + 6 x 2GHz ಕಾರ್ಟೆಕ್ಸ್-A55 CPUಗಳು) ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ನಲ್ಲಿ ಕೆಲಸ ನಿರ್ವಹಿಸಲಿದ್ದು, ಮಾಲಿ-G68 MC4 GPU ಗ್ರಾಪಿಕ್ಸ್ ಕಾರ್ಡ್‌ನಲ್ಲಿ ಕೆಲಸ ಮಾಡಲಿದೆ ಎಂದು ತಿಳಿದುಬಂದಿದೆ.
ಹಾಗೆಯೇ ಈ ಫೋನ್ 8GB LPDDR4x RAM, 128GB / 256GB UFS 3.1 ಆಂತರೀಕ ಸ್ಟೋರೇಜ್ ಆಯ್ಕೆಯಲ್ಲಿ ಈ ಫೋನ್ ಲಭ್ಯ ಇರಲಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಕಲರ್ ಓಎಸ್ 14 ಜೊತೆಗೆ ಆಂಡ್ರಾಯ್ಡ್ 14 ನಲ್ಲಿ ರನ್ ಆಗಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದು ಬಂದಿದೆ.
ಇನ್ನು ಈ ಫೋನ್ ಮೂರು ಕ್ಯಾಮೆರಾ ರಚನೆ ಪಡೆದಿರಲಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿರುವುದು ಖಚಿತ ಆಗಿದೆ. ಹಾಗೆಯೇ ಉಳಿದೆರಡು ಕ್ಯಾಮೆರಾಗಳು ಕ್ರಮವಾಗಿ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ ಹಾಗೂ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾ ಸೌಲಭ್ಯ ಪಡೆದಿರಲಿವೆ. ಇನ್ನು ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆಯಲಿದೆ ಎಂದು ತಿಳಿದುಬಂದಿದೆ.
ಒಪ್ಪೋ F25 ಪ್ರೊ 5G ಸ್ಮಾರ್ಟ್‌ಫೋನ್ 67W ಸೂಪರ್ ವೂಕ್ ಚಾರ್ಜಿಂಗ್ ಸಪೋರ್ಟ್ ಪಡೆದಿರಲಿದ್ದು, ಇದಕ್ಕೆ ಬೆಂಬಲವಾಗಿ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿರಲಿದೆ. ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸರ್, ಧೂಳು ಮತ್ತು ನೀರು ನಿರೋಧಕ (IP65), ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.2, ಜಿಪಿಎಸ್/ ಗ್ಲೋನಾಸ್, ಯುಎಸ್‌ಬಿ ಟೈಪ್-ಸಿ ಸೇರಿದಂತೆ ಅನೇಕ ಅಗತ್ಯ ಕನೆಕ್ಟಿವಿಟಿ ಸೌಲಭ್ಯ ಪಡೆದಿರಲಿದೆ ಎಂದು ತಿಳಿದುಬಂದಿದೆ.


Click it and Unblock the Notifications








