ಒಪ್ಪೋ F25 ಪ್ರೊ 5G ಫೋನ್ ಬೆಲೆಯಲ್ಲಿ ಸಖತ್ ಇಳಿಕೆ!..ಗ್ರಾಹಕರಿಗೆ ಫುಲ್ ಖುಷಿ!
ಒಪ್ಪೋ ಮೊಬೈಲ್ ಸಂಸ್ಥೆಯು ತನ್ನ F ಸರಣಿಯಲ್ಇ ಇತ್ತೀಚಿಗೆ ಬಿಡುಗಡೆ ಮಾಡಿರುವ ಒಪ್ಪೋ F25 ಪ್ರೊ 5G ಸ್ಮಾರ್ಟ್‌ಫೋನ್ ಡಿಸೈನ್ ಹಾಗೂ ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್ ಇದೀಗ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಸಖತ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ಖುಷಿ ಪಡುವಂತೆ ಮಾಡಿದೆ.
ಹೌದು, ಅಮೆಜಾನ್ ವೆಬ್‌ಸೈಟ್‌ನಲ್ಲಿ ಒಪ್ಪೋ F25 ಪ್ರೊ 5G ಸ್ಮಾರ್ಟ್‌ಫೋನ್ ಶೇ. 17% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ವೇರಿಯಂಟ್‌ನ ಆಫರ್ ಬೆಲೆಯು 23,999ರೂ. ಗಳು ಆಗಿದೆ. ಇದರೊಂದಿಗೆ ನೋ ಕಾಸ್ಟ್ ಇಎಮ್‌ಐ, ಇತರೆ ಬ್ಯಾಂಕ್ ಆಫರ್‌ಗಳು ಕೂಡಾ ಗ್ರಾಹಕರಿಗೆ ಲಭ್ಯ ಆಗಲಿವೆ.

ಇನ್ನು ಈ ಫೋನ್ 8GB + 128GB ಸ್ಟೋರೇಜ್ ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಅಲ್ಲದೇ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ಸೌಲಭ್ಯ ಪಡೆದುಕೊಂಡಿದೆ. ಹಾಗಾದರೇ ಒಪ್ಪೋ F25 ಪ್ರೊ 5G ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ F25 ಪ್ರೊ 5G - ಫೀಚರ್ಸ್ ಮಾಹಿತಿ
ಒಪ್ಪೋ F25 ಪ್ರೊ 5G ಮೊಬೈಲ್ 6.7 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಕರ್ವ್ಡ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, 2412×1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಇದರ ಜೊತೆಗೆ 120Hz ರಿಫ್ರೆಶ್ ರೇಟ್, ಪಾಂಡಾ ಗ್ಲಾಸ್ ರಕ್ಷಣೆ ಸೌಲಭ್ಯವನ್ನು ಈ ಫೋನ್‌ನಲ್ಲಿ ಕಾಣಬಹುದು.
ಒಪ್ಪೋ F25 ಪ್ರೊ 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದ್ದು, ಇದರ ಜೊತೆಗೆ ಮಾಲಿ-G68 MC4 ಜಿಪಿಯು ಸಪೋರ್ಟ್ ಸಹ ಇದೆ. ಹಾಗೆಯೇ 8GB + 128GB ಸ್ಟೋರೇಜ್ ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಸಹ ಕಾಣಬಹುದು.
ಒಪ್ಪೋ F25 ಪ್ರೊ 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸರ್ ಸೌಲಭ್ಯದಲ್ಲಿ ಇದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮರಾ ಸೆನ್ಸರ್ ಪಡೆದಿದ್ದು, ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಕ್ಯಾಮರಾ ಜೊತೆಗೆ ಮೆಗಾಪಿಕ್ಸೆಲ್ OV02B10 ಸೆನ್ಸರ್ ಹೊಂದಿದೆ. ಇದರ ಜೊತೆಗೆ ಸೋನಿ IMX615 ಸೆನ್ಸರ್‌ನೊಂದಿಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.
ಒಪ್ಪೋ F25 ಪ್ರೊ 5G ಮೊಬೈಲ್ 67W ಸೂಪರ್‌ವೂಕ್ ಚಾರ್ಜಿಂಗ್ ಸಪೋರ್ಟ್ ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಇದರ ಜೊತೆಗೆ ಧೂಳು ಮತ್ತು ನೀರು ನಿರೋಧಕ (IP65) ರೇಟಿಂಗ್ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G SA/NSA, ಡ್ಯುಯಲ್ 4G VoLTE, ವೈ ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.2, ಜಿಪಿಎಸ್/ ಗ್ಲೋನಾಸ್, ಯುಎಸ್‌ಬಿ ಟೈಪ್-ಸಿ ಬೆಂಬಲ ಇದೆ.
ಒಪ್ಪೋ F25 ಪ್ರೊ 5G ಮೊಬೈಲ್ ಬೆಲೆ ಹಾಗೂ ಲಭ್ಯತೆ: ಈ ಫೋನ್‌ನ 8GB + 128GB ವೇರಿಯಂಟ್ ಹಾಗೂ 8GB + 256GB ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ. ಇನ್ನು ಈ ಫೋನ್ ಅನ್ನು ಅಮೆಜಾನ್ ಇ ಕಾಮರ್ಸ್ ಮೂಲಕ ಖರೀದಿ ಮಾಡಬಹುದಾಗಿದೆ.


Click it and Unblock the Notifications








