Home
ಸುದ್ದಿಜಾಲ

Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್‌ಫೋನ್ ಹೊಸ ಕಲರ್‌ ವೇರಿಯಂಟ್‌ನಲ್ಲಿ! ಬೆಲೆ ಎಷ್ಟು?

ಒಪ್ಪೋ ಸ್ಮಾರ್ಟ್‌ಫೋನ್‌ಗಳು (Oppo smartphone) ಸ್ಮಾರ್ಟ್‌ಫೋನ್‌ ವಲಯದಲ್ಲಿ ಸುನಾಮಿಯನ್ನು ಉಂಟು ಮಾಡಲಿವೆ. ಈ ನಡುವೆ ಒಪ್ಪೋ F25 ಪ್ರೊ ಸ್ಮಾರ್ಟ್‌ಫೋನ್‌ (Oppo F25 Pro Smartphone) ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿದೆ. ಈ ಕಾರಣಕ್ಕೆ ಒಪ್ಪೋ ಹೊಸ ವೇರಿಯಂಟ್‌ನಲ್ಲಿ ಈ ಫೋನ್‌ ಅನ್ನು ಪರಿಚಯಿಸಿದೆ.

ಹೌದು, ಒಪ್ಪೋ ಇತ್ತೀಚೆಗೆ ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿತ್ತು. ಈ ಫೋನ್‌ಗೆ ಬೇಡಿಕೆ ಹೆಚ್ಚಾದಂತೆ ಈಗ ಮಗದೊಂದು ಹೊಸ ಕಲರ್‌ ವೇರಿಯಂಟ್‌ ಆಯ್ಕೆಯಲ್ಲಿ ಇದನ್ನು ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್ 8GB+128GB ಮತ್ತು 8GB+256GB ಯ ಎರಡು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯಲ್ಲಿ ಲಭ್ಯ ಇವೆ. ಹಾಗಿದ್ರೆ, ಬನ್ನಿ ಈ ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಬೆಲೆ ವಿವರ, ಹೊಸ ಬಣ್ಣ ಯಾವುದು ಎಂಬ ಮಾಹಿತಿಯನ್ನು ತಿಳಿಯೋಣ.

ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್‌ಫೋನ್ ಹೊಸ ಕಲರ್‌ ವೇರಿಯಂಟ್‌ನಲ್ಲಿ

ಒಪ್ಪೋ F25 ಪ್ರೊ ಸ್ಮಾರ್ಟ್‌ಫೋನ್: ಒಪ್ಪೋ ಇದೀಗ ಹೊಸ ಬಣ್ಣದ ವೇರಿಯಂಟ್‌ ಅನ್ನು ಲಾಂಚ್‌ ಮಾಡಿದೆ. ಅಂದರೆ ಒಪ್ಪೋ F25 ಪ್ರೊ ಸ್ಮಾರ್ಟ್‌ಫೋನ್ ಕೋರಲ್ ಪರ್ಪಲ್ ಬಣ್ಣದಲ್ಲಿ (Coral purple color) ಲಭ್ಯ ಇರಲಿದೆ. ಈ ಮೊದಲು ಈ ಸ್ಮಾರ್ಟ್‌ಫೋನ್‌ ಲಾವಾ ರೆಡ್, ಓಷನ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಭಾರೀ ಬೇಡಿಕೆ ಪಡೆದುಕೊಂಡಿತ್ತು. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಕೆಲವು ಫೀಚರ್ಸ್‌ ಕಡೆ ಕಣ್ಣಾಯಿಸೋಣ ಬನ್ನಿ.

ಒಪ್ಪೋ F25 ಪ್ರೊ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 1080x2412 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ + ಕರ್ವ್ಡ್ ಡಿಸ್‌ಪ್ಲೇ ಆಯ್ಕೆ ಪಡೆದಿದೆ. ಇದರ ಜೊತೆಗೆ 120Hz ರಿಫ್ರೆಶ್ ರೇಟ್‌ ಹೊಂದಿದ್ದು, ಬಳಕೆದಾರರಿಗೆ ವಿಶೇಷ ಅನುಭವ ನೀಡಲಿದೆ. ಅಲ್ಲದೆ ಪಾಂಡ ಗ್ಲಾಸ್‌ ರಕ್ಷಣೆ ಪಡೆದುಕೊಂಡಿದೆ.

ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್‌ಫೋನ್ ಹೊಸ ಕಲರ್‌ ವೇರಿಯಂಟ್‌ನಲ್ಲಿ

ಒಪ್ಪೋ F25 ಪ್ರೊ ಪ್ರೊಸೆಸರ್‌ ವಿವರ: ಈ ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಂ ಅನ್ನು ರನ್‌ ಮಾಡಲಿದೆ. ಹಾಗೆಯೇ ಎರಡು ಸ್ಟೋರೇಜ್‌ ಆಯ್ಕೆ ಪಡೆದಿದ್ದು, ಅದರಲ್ಲಿ 128GB ಮತ್ತು 256GB ಸ್ಟೋರೇಜ್‌ ಆಯ್ಕೆಯ ಫೋನ್‌ಗಳನ್ನು ಕಾಣಬಹುದು.

ಒಪ್ಪೋ F25 ಪ್ರೊ ಕ್ಯಾಮೆರಾ ರಚನೆ: ಇನ್ನು ಈ ಫೋನ್ 64 ಮೆಗಾಪಿಕ್ಸೆಲ್‌ ಮುಖ್ಯ ಸೆನ್ಸರ್‌ ನೊಂದಿಗೆ f/1.7 ಕ್ಯಾಮೆರಾ, 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಜೊತೆಗೆ f/2.2 ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸರ್‌ ಜೊತೆಗೆ f/2.4 ಕ್ಯಾಮೆರಾ ಆಯ್ಕೆ ಪಡೆದಿದ್ದು, ಸೆಲ್ಫಿ ಹಾಗೂ ವಿಡಿಯೋ ಕರೆಗಳಿಗಾಗಿ ಈ ಫೋನ್‌ನಲ್ಲಿ f/2.4 ದ್ಯುತಿರಂಧ್ರದೊಂದಿಗೆ 32 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಒಪ್ಪೋ F25 ಪ್ರೊ ಬ್ಯಾಟರಿ ಸಾಮರ್ಥ್ಯ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 67W ವೇಗದ ಚಾರ್ಜಿಂಗ್ ಬೆಂಬಲ ಪಡೆದಿದೆ. ಉಳಿದಂತೆ ಈ ಸ್ಮಾರ್ಟ್‌ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌, IP67 ರೇಟಿಂಗ್‌ ಸೇರಿದಂತೆ ಅನೇಕ ಆಕರ್ಷಕ ಫೀಚರ್ಸ್‌ ಪಡೆದುಕೊಂಡಿದೆ. ಈ ಮೂಲಕ ಬಳಕೆದಾರರಿಗೆ ಪ್ರೀಮಿಯಂ ಅನುಭವ ನೀಡಲಿದೆ.

ಒಪ್ಪೋ F25 ಪ್ರೊ ಬೆಲೆ ಹಾಗೂ ಲಭ್ಯತೆ: ಇನ್ನು ಈ ಫೋನ್‌ ಎರಡು ಸ್ಟೋರೇಜ್‌ ವೇರಿಯಂಟ್‌ನಲ್ಲಿ ಲಭ್ಯ ಇದೆ. ಅಂದರೆ 8GB+128GB ಮತ್ತು 8GB+256GB ಸ್ಟೋರೇಜ್‌ ಆಯ್ಕೆಯ ಫೋನ್ ಕ್ರಮವಾಗಿ 23,999ರೂ.ಗಳು ಮತ್ತು 25,999ರೂ.ಗಳ ಬೆಲೆ ಹೊಂದಿದೆ. ಹಾಗೆಯೇ ಈ ಫೋನ್‌ ಖರೀದಿ ಮೇಲೆ ಕೆಲವು ಬ್ಯಾಂಕ್‌ ಆಫರ್ ಅನ್ನೂ ಸಹ ನೀಡಲಾಗಿದೆ.

ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್‌ಫೋನ್ ಹೊಸ ಕಲರ್‌ ವೇರಿಯಂಟ್‌ನಲ್ಲಿ

ಈ ಸ್ಮಾರ್ಟ್‌ಫೋನ್ ಅನ್ನು ಅಮೆಜಾನ್, ಫ್ಲಿಪ್‌ಕಾರ್ಟ್‌ ಹಾಗೂ ಒಪ್ಪೋದ ಆನ್‌ಲೈನ್‌ ಸೈಟ್‌ ಮೂಲಕ ಖರೀದಿ ಮಾಡಬಹುದಾಗಿದೆ. ಹಾಗೆಯೇ ರಿಟೇಲರ್‌ ಸ್ಟೋರ್‌ಗಳಲ್ಲಿಯೂ ಈ ಫೋನ್‌ಗಳು ಲಭ್ಯ ಇವೆ. ಇನ್ನು ಕೆಲವು ಬ್ಯಾಂಕ್‌ ಕಾರ್ಡ್‌ಗಳ ಮೇಲೆ 2,000ರೂ. ವರೆಗೆ ಕ್ಯಾಶ್‌ಬ್ಯಾಕ್, ಎಲ್ಲಾ ಪ್ರಮುಖ ಬ್ಯಾಂಕ್ ಕಾರ್ಡ್‌ಗಳಲ್ಲಿ 6 ತಿಂಗಳವರೆಗೆ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯ, ಬಜಾಜ್ ಫೈನಾನ್ಸ್, ಟಿವಿಎಸ್‌ ಕ್ರೆಡಿಟ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಹೆಚ್‌ಡಿಬಿ ಫೈನಾನ್ಷಿಯಲ್, ಹೋಮ್ ಕ್ರೆಡಿಟ್ ಪಾಲುದಾರರಿಂದ ಶೂನ್ಯ ಡೌನ್ ಪಾವತಿ ಯೋಜನೆ ಸಿಗಲಿದೆ.

Best Mobiles in India

English summary
Oppo F25 Pro smartphone was unveiled in India a few days ago. But now this phone has been unveiled in yet another new color variant option.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+