Home
ಸುದ್ದಿಜಾಲ

ಇಂದು ಒಪ್ಪೋ F27 ಪ್ರೊ+ 5G ಫೋನ್‌ ಬಿಡುಗಡೆ!..3D ಕರ್ವ್ಡ್‌ ಡಿಸ್‌ಪ್ಲೇ ಸೌಲಭ್ಯ!

ಒಪ್ಪೋ ಕಂಪನಿಯು ತನ್ನ ಬಹುನಿರೀಕ್ಷಿತ ಒಪ್ಪೋ F27 ಪ್ರೊ+ 5G (Oppo F27 Pro+ 5G) ಸ್ಮಾರ್ಟ್‌ಫೋನ್‌ ಅನ್ನು ಇಂದು ಭಾರತೀಯ ಮಾರುಕಟ್ಟೆಗೆ ಅಧಿಕೃತವಾಗಿ ಲಾಂಚ್ ಮಾಡಲು ಸಜ್ಜಾಗಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಸ್ಮಾರ್ಟ್‌ಫೋನ್‌ ಇಂದು (ಜೂನ್‌ 13 ರಂದು) ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿರಲಿದ್ದು, ಇದರ ಜೊತೆಗೆ 64 ಮೆಗಾ ಪಿಕ್ಸಲ್‌ನ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಪಡೆದಿರುವುದು ಬಹುತೇಕ ಖಚಿತ ಎನ್ನಲಾಗಿದೆ.

ಹೌದು, ಒಪ್ಪೋ ಕಂಪನಿಯು ಇಂದು ತನ್ನ ಹೊಸ ಒಪ್ಪೋ F27 ಪ್ರೊ+ 5G (Oppo F27 Pro+ 5G) ಮೊಬೈಲ್‌ ಅನ್ನು ಲಾಂಚ್ ಮಾಡಲಿದೆ. ಈ ಮೊಬೈಲ್‌ ಲಾಂಚ್‌ ಸಂಬಂಧಿಸಿದಂತೆ ಫ್ಲಿಪ್‌ಕಾರ್ಟ್‌ ಮೈಕ್ರೋ ಸೈಟ್‌ ಕೂಡಾ ತೆರೆದುಕೊಂಡಿದೆ. ಅಂದಹಾಗೆ ಈ ಫೋನ್ 8GB RAM +128GB ಹಾಗೂ 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಎಂಟ್ರಿ ಕೊಡಲಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೇ ಡ್ಯಾಮೆಜ್‌ ಪ್ರೋಫ್‌ 360 ಡಿಗ್ರಿ ರಚನೆ ಅನ್ನು ಪಡೆದಿರಲಿದೆ.

ಇಂದು ಒಪ್ಪೋ F27 ಪ್ರೊ+ 5G ಫೋನ್‌ ಬಿಡುಗಡೆ!..3D ಕರ್ವ್ಡ್‌ ಡಿಸ್‌ಪ್ಲೇ ಸೌಲಭ್ಯ!

ಇನ್ನು ಈ ಮೊಬೈಲ್‌ ಡಸ್ಕ್‌ ಪಿಂಕ್‌ ಹಾಗೂ ಮೀಡ್‌ನೈಟ್‌ ನೇವಿ ಕಲರ್‌ ಆಯ್ಕೆಗಳಲ್ಲಿ ಎಂಟ್ರಿ ಕೊಡಲಿದೆ. ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿರಲಿದ್ದು, ಹಾಗೆಯೇ 67W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಪಡೆದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಒಪ್ಪೋ F27 ಪ್ರೊ+ 5G ಫೋನಿನ ಇತರೆ ನಿರೀಕ್ಷಿತ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒಪ್ಪೋ F27 ಪ್ರೊ+ 5G ನಿರೀಕ್ಷಿತ ಫೀಚರ್ಸ್‌ ಮಾಹಿತಿ

ಒಪ್ಪೋ F27 ಪ್ರೊ+ 5G ಮೊಬೈಲ್‌ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಕರ್ವ್ಡ್‌ ಡಿಸ್‌ಪ್ಲೇ ಮಾದರಿಯನ್ನು ಒಳಗೊಂಡಿದ್ದು, ಇದರ ಜೊತೆಗೆ 120Hz ರಿಫ್ರೆಶ್ ರೇಟ್‌ ಸಹ ಹೊಂದಿರಲಿದೆ .ಹಾಗೆಯೇ ಈ ಡಿಸ್‌ಪ್ಲೇಯು 950 nits ಬ್ರೈಟ್ನೆಸ್‌ ಸಪೋರ್ಟ್‌ ಹೊಂದಿರಲಿದ್ದು, ಇದರ ಜೊತೆಗೆ ಈ ಫೋನ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಅನ್ನು ಹೊಂದಿರಬಹುದು ಎಂದು ತಿಳಿದುಬಂದಿದೆ.

ಒಪ್ಪೋ F27 ಪ್ರೊ+ 5G ಮೊಬೈಲ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7050 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ ಎನ್ನಲಾಗಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಕೂಡಾ ಪಡೆದಿರಲಿದೆ. ಅಲ್ಲದೇ 8GB RAM +128GB ಹಾಗೂ 8GB RAM + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಲಗ್ಗೆ ಇಡಲಿದೆ ಎನ್ನಲಾಗಿದೆ.

ಒಪ್ಪೋ F27 ಪ್ರೊ+ 5G ಮೊಬೈಲ್‌ ಹಿಂಭಾಗದಲ್ಲಿ ಸರ್ಕಲ್ ಮಾದರಿಯ ಸೆಟ್‌ಅಪ್‌ ಇದ್ದು, ಡ್ಯುಯಲ್‌ ರಿಯರ್‌ ಕ್ಯಾಮೆರಾ ಅನ್ನು ಒಳಗೊಂಡಿದೆ ಎನ್ನಲಾಗಿದೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇರಲಿದ್ದು, ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಪಡೆದಿರುವ ಸಾಧ್ಯತೆಗಳು ಇವೆ ಎಂದು ತಿಳಿದುಬಂದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿಗಾಗಿ 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಕ್ಯಾಮೆರಾ ಒದಗಿಸುವ ನಿರೀಕ್ಷೆಗಳು ಇವೆ.

ಒಪ್ಪೋ F27 ಪ್ರೊ+ 5G ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 67W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಇರಲಿದೆ ಎಂದು ತಿಳಿದುಬಂದಿದೆ. ಅಲ್ಲದೇ ಇದು IP69 ರೇಟಿಂಗ್‌ ಸೌಲಭ್ಯ ಪಡೆದಿರಲಿದೆ ಜೊತೆಗೆ ಡ್ಯಾಮೆಜ್‌ ಪ್ರೋಫ್‌ 360 ಡಿಗ್ರಿ ರಚನೆ ಅನ್ನು ಹೊಂದಿರಲಿದೆ. ಇನ್ನು ಅಲ್ಟ್ರಾ ಟಫ್‌ 3D ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಇರಲಿದೆ ಎಂದು ನಿರೀಕ್ಷಿಸಲಾಗಿದೆ.

Best Mobiles in India

English summary
Oppo F27 Pro+ 5G launch in India Today via flipkart. Check specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+