Home
ಸುದ್ದಿಜಾಲ

ಭಾರತದಲ್ಲಿ ಒಪ್ಪೋ ಫೈಂಡ್‌ N2 ಫ್ಲಿಪ್ ಖರೀದಿಗೆ ಲಭ್ಯ!..ಬೆಲೆ ಎಷ್ಟು ಗೊತ್ತಾ?

ಜನಪ್ರಿಯ ಒಪ್ಪೋ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ 'ಒಪ್ಪೋ ಫೈಂಡ್‌ N2 ಫ್ಲಿಪ್' ಸ್ಮಾರ್ಟ್‌ಫೋನ್ ಡಿಸೈನ್‌ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಮಾರುಕಟ್ಟೆಯ ಗಮನ ಸೆಳೆದಿದೆ. ಅಂದಹಾಗೆ ಭಾರತೀಯ ಮಾರುಕಟ್ಟೆಯಲ್ಲಿ ಇಂದಿನಿಂದ (ಮಾ. 17 ರಿಂದ) ಈ ಸ್ಮಾರ್ಟ್‌ಫೋನ್‌ ಖರೀದಿಗೆ ಲಭ್ಯ. ಈ ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9000+ SoC ಪ್ರೊಸೆಸರ್‌ ಹೊಂದಿದೆ.

ಹೌದು, ಒಪ್ಪೋ ಫೈಂಡ್‌ N2 ಫ್ಲಿಪ್ ಫೋನಿನ ಸೇಲ್‌ ಪ್ರಾರಂಭಿಸಿದ್ದು, ಆಸಕ್ತ ಗ್ರಾಹಕರು ಖರೀದಿಸಬಹುದಾಗಿದೆ. ಈ ಫೋನ್‌ ಪ್ಲಿಪ್‌ ಮಾದರಿಯ ರಚನೆಯ ಹೊಂದಿದ್ದು, ಎರಡು ಡಿಸ್‌ಪ್ಲೇ ಆಯ್ಕೆಗಳನ್ನು ಒಳಗೊಂಡಿದೆ. ಜೊತೆಗೆ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ರಚನೆಯಲ್ಲಿದೆ. 32 ಮೆಗಾಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಇದೆ.

ಭಾರತದಲ್ಲಿ ಒಪ್ಪೋ ಫೈಂಡ್‌ N2 ಫ್ಲಿಪ್ ಖರೀದಿಗೆ ಲಭ್ಯ!..ಬೆಲೆ ಎಷ್ಟು ಗೊತ್ತಾ?

ಒಪ್ಪೋ ಫೈಂಡ್‌ N2 ಫ್ಲಿಪ್ ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಪರ್ಪಲ್‌ ಹಾಗೂ ಬ್ಲ್ಯಾಕ್‌ ಕಲರ್‌ ಆಯ್ಕೆ ಪಡೆದಿದೆ. ಇನ್ನು 8GB + 256GB ಸ್ಟೋರೇಜ್‌ ವೇರಿಯಂಟ್‌ ಬೆಲೆಯು 89,999ರೂ. ಆಗಿದೆ. ಹಾಗಾದರೇ ಒಪ್ಪೋ ಫೈಂಡ್‌ N2 ಫ್ಲಿಪ್ ಫೋನಿನ ಇತರ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಭಾರತದಲ್ಲಿ ಒಪ್ಪೋ ಫೈಂಡ್‌ N2 ಫ್ಲಿಪ್ ಖರೀದಿಗೆ ಲಭ್ಯ!..ಬೆಲೆ ಎಷ್ಟು ಗೊತ್ತಾ?

ಒಪ್ಪೋ ಫೈಂಡ್‌ N2 ಫ್ಲಿಪ್ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪ್ರೈಮೆರಿ ಡಿಸ್‌ಪ್ಲೇ ಹೊಂದಿದೆ. ಇದು 1,080 x 2,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ HDR10+ ಬೆಂಬಲಿಸಲಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಈ ಫೋನ್‌ 3.26 ಇಂಚಿನ ಕವರ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 900 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

ಭಾರತದಲ್ಲಿ ಒಪ್ಪೋ ಫೈಂಡ್‌ N2 ಫ್ಲಿಪ್ ಖರೀದಿಗೆ ಲಭ್ಯ!..ಬೆಲೆ ಎಷ್ಟು ಗೊತ್ತಾ?

ಒಪ್ಪೋ ಫೈಂಡ್‌ N2 ಫ್ಲಿಪ್ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 9000+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ಕಲರ್‌ ಒಎಸ್‌ 13.0 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಮತ್ತು 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಒಪ್ಪೋ ಫೈಂಡ್‌ N2 ಫ್ಲಿಪ್ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX890 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಶೂಟರ್ ಅನ್ನು ಹೊಂದಿದೆ. ಇದಲ್ಲದೆ ಫೋಲ್ಡಿಂಗ್ ಡಿಸ್‌ಪ್ಲೇಯ ಮೇಲ್ಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದಲ್ಲದೆ ಈ ಫೋನ್‌ನ ಹಿಂಬದಿಯ ಕ್ಯಾಮೆರಾಗಳನ್ನು ಮಾರಿಸಿಲಿಕಾನ್ X ಇಮೇಜಿಂಗ್ NPU ಬೆಂಬಲಿಸುತ್ತದೆ.

ಭಾರತದಲ್ಲಿ ಒಪ್ಪೋ ಫೈಂಡ್‌ N2 ಫ್ಲಿಪ್ ಖರೀದಿಗೆ ಲಭ್ಯ!..ಬೆಲೆ ಎಷ್ಟು ಗೊತ್ತಾ?

ಒಪ್ಪೋ ಫೈಂಡ್‌ N2 ಫ್ಲಿಪ್ ಸ್ಮಾರ್ಟ್‌ಫೋನ್‌ 4,300 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 44W ಸೂಪರ್‌ವೂಕ್‌ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS ಮತ್ತು USB ಟೈಪ್-C ಪೋರ್ಟ್‌ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಗೈರೋಸ್ಕೋಪ್‌ ಅನ್ನು ಒಳಗೊಂಡಿದೆ.

Best Mobiles in India

English summary
OPPO Find N2 Flip available for purchase start today (March 17) in the Indian market. more details in kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+