Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ದೂಳೆಬ್ಬಿಸಿದ ಒಪ್ಪೋ ಫೈಂಡ್‌ N2 ಫ್ಲಿಪ್! ಏನೆಲ್ಲಾ ಫೀಚರ್ಸ್‌?

ಒಪ್ಪೋ ಕಂಪೆನಿ ತನ್ನ ಬಹುನಿರೀಕ್ಷಿತ ಒಪ್ಪೋ ಫೈಂಡ್‌ N2 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗ್ತಿದ್ದ ಹಾಗೇ ಇಡೀ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9000+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಮಾರುಕಟ್ಟೆಯಲ್ಲಿ ದೂಳೆಬ್ಬಿಸಿದ ಒಪ್ಪೋ ಫೈಂಡ್‌ N2 ಫ್ಲಿಪ್! ಏನೆಲ್ಲಾ ಫೀಚರ್ಸ್‌?

ಹೌದು, ಒಪ್ಪೋ ಕಂಪೆನಿ ಜಾಗತಿಕ ಮಾರುಕಟ್ಟೆಯಲ್ಲಿ ಒಪ್ಪೋ ಫೈಂಡ್‌ N2 ಫ್ಲಿಪ್ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಇದು 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್‌ MariSilicon X ಇಮೇಜಿಂಗ್ NPU ಅನ್ನು ಒಳಗೊಂಡಿದೆ. ಜೊತೆಗೆ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 44W ಸೂಪರ್‌ವೂಕ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಒಪ್ಪೋ ಫೈಂಡ್‌ N2 ಫ್ಲಿಪ್ ಡಿಸ್‌ಪ್ಲೇ ವಿನ್ಯಾಸ ಹೇಗಿದೆ?

ಒಪ್ಪೋ ಫೈಂಡ್‌ N2 ಫ್ಲಿಪ್ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪ್ರೈಮೆರಿ ಡಿಸ್‌ಪ್ಲೇ ಹೊಂದಿದೆ. ಇದು 1,080x2,520 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ HDR10+ ಬೆಂಬಲಿಸಲಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಈ ಫೋನ್‌ 3.26 ಇಂಚಿನ ಕವರ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು 900 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ.

ಮಾರುಕಟ್ಟೆಯಲ್ಲಿ ದೂಳೆಬ್ಬಿಸಿದ ಒಪ್ಪೋ ಫೈಂಡ್‌ N2 ಫ್ಲಿಪ್! ಏನೆಲ್ಲಾ ಫೀಚರ್ಸ್‌?

ಒಪ್ಪೋ ಫೈಂಡ್‌ N2 ಫ್ಲಿಪ್ ಪ್ರೊಸೆಸರ್‌ ಯಾವುದು?

ಒಪ್ಪೋ ಫೈಂಡ್‌ N2 ಫ್ಲಿಪ್ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 9000+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ ಕಲರ್‌ ಒಎಸ್‌ 13.0 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಮತ್ತು 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಒಪ್ಪೋ ಫೈಂಡ್‌ N2 ಫ್ಲಿಪ್ ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒಪ್ಪೋ ಫೈಂಡ್‌ N2 ಫ್ಲಿಪ್ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಶೂಟರ್ ಅನ್ನು ಹೊಂದಿದೆ. ಇದಲ್ಲದೆ ಫೋಲ್ಡಿಂಗ್ ಡಿಸ್‌ಪ್ಲೇಯ ಮೇಲ್ಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದಲ್ಲದೆ ಈ ಫೋನ್‌ನ ಹಿಂಬದಿಯ ಕ್ಯಾಮೆರಾಗಳನ್ನು ಮಾರಿಸಿಲಿಕಾನ್ X ಇಮೇಜಿಂಗ್ NPU ಬೆಂಬಲಿಸುತ್ತದೆ.

ಮಾರುಕಟ್ಟೆಯಲ್ಲಿ ದೂಳೆಬ್ಬಿಸಿದ ಒಪ್ಪೋ ಫೈಂಡ್‌ N2 ಫ್ಲಿಪ್! ಏನೆಲ್ಲಾ ಫೀಚರ್ಸ್‌?

ಒಪ್ಪೋ ಫೈಂಡ್‌ N2 ಫ್ಲಿಪ್ ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?

ಒಪ್ಪೋ ಫೈಂಡ್‌ N2 ಫ್ಲಿಪ್ ಸ್ಮಾರ್ಟ್‌ಫೋನ್‌ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 44W ಸೂಪರ್‌ವೂಕ್‌ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS ಮತ್ತು USB ಟೈಪ್-C ಪೋರ್ಟ್‌ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್‌ ಮತ್ತು ಗೈರೋಸ್ಕೋಪ್‌ ಅನ್ನು ಒಳಗೊಂಡಿದೆ.

ಒಪ್ಪೋ ಫೈಂಡ್‌ N2 ಫ್ಲಿಪ್ ಬೆಲೆ ಮತ್ತು ಲಭ್ಯತೆ

ಒಪ್ಪೋ ಫೈಂಡ್‌ N2 ಫ್ಲಿಪ್ ಸ್ಮಾರ್ಟ್‌ಫೋನ್‌ 8GB RAM + 256GB ಸ್ಟೋರೇಜ್ ಆಯ್ಕೆಗೆ ಯುಕೆಯಲ್ಲಿ GBP 849 (ಸುಮಾರು 84,300ರೂ)ಬೆಲೆಯನ್ನು ಹೊಂದಿದೆ. ಇದನ್ನು ಆಸ್ಟ್ರಲ್ ಬ್ಲ್ಯಾಕ್ ಮತ್ತು ಮೂನ್‌ಲೈಟ್ ಪರ್ಪಲ್ ಶೇಡ್‌ಗಳಲ್ಲಿ ನೀಡಲಾಗುತ್ತದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
The foldable phone is powered by the MediaTek Dimensity 9000+ system-on-chip (SoC).
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+