ಭಾರತದಲ್ಲಿ ಒಪ್ಪೋ ಫೈಂಡ್ N2 ಫ್ಲಿಪ್ ಬೆಲೆ ಎಷ್ಟು ಗೊತ್ತಾ?..ಆಕರ್ಷಕ ಡಿಸೈನ್!
ಪ್ರಮುಖ ಮೊಬೈಲ್ ಬ್ರ್ಯಾಂಡ್‌ಗಳಲ್ಲಿ ಒಂದಾದ ಒಪ್ಪೋ ಸಂಸ್ಥೆಯು ಕಳೆದ ತಿಂಗಳು ಬಿಡುಗಡೆ ಮಾಡಿರುವ ಒಪ್ಪೋ ಫೈಂಡ್ N2 ಫ್ಲಿಪ್ (Oppo Find N2 Flip) ಆಕರ್ಷಕ ಡಿಸೈನ್ ಹಾಗೂ ಅತ್ಯುತ್ತಮ ಫೀಚರ್ಸ್‌ಗಳಿಂದ ಗ್ರಾಹಕರ ಗಮನ ಸೆಳೆದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಈ ಫೋನ್ ಬೆಲೆ ಇದೇ ಮಾರ್ಚ್ 13 ರಂದು ತಿಳಿಯಲಿದೆ.
ಹೌದು, ಒಪ್ಪೋ ಕಂಪೆನಿ ಜಾಗತಿಕ ಮಾರುಕಟ್ಟೆಯಲ್ಲಿ ಒಪ್ಪೋ ಫೈಂಡ್ N2 ಫ್ಲಿಪ್ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದೇ ಮಾರ್ಚ್ 13 ರಂದು ದೇಶಿಯ ಮಾರುಕಟ್ಟೆಯಲ್ಲಿ ಈ ಫೋನಿನ ಬೆಲೆ ಎಷ್ಟು ಎಂಬುದು ಅಧಿಕೃತವಾಗಿ ಘೋಷಣ ಆಗಲಿದೆ. ಅಂದಹಾಗೆ ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9000+ SoC ಪ್ರೊಸೆಸರ್ ಪಡೆದಿದೆ.

ಒಪ್ಪೋ ಫೈಂಡ್ N2 ಫ್ಲಿಪ್ ಬೆಲೆ ಯುರೋಪ್‌ನಲ್ಲಿ EUR 849 ಆಗಿದೆ. ಇನ್ನು ಭಾರತದಲ್ಲಿ ಈ ಫೋನಿನ ಆರಂಭಿಕ ವೇರಿಯಂಟ್ ಬೆಲೆ 80,000ರೂ. ಗಳ ಆಸುಪಾಸಿನಲ್ಲಿ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗಾದರೆ ಒಪ್ಪೋ ಫೈಂಡ್ N2 ಫ್ಲಿಪ್ ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ ಫೈಂಡ್ N2 ಫ್ಲಿಪ್ : ಡಿಸ್‌ಪ್ಲೇ ವಿನ್ಯಾಸ ಹೇಗಿದೆ?
ಒಪ್ಪೋ ಫೈಂಡ್ N2 ಫ್ಲಿಪ್ ಸ್ಮಾರ್ಟ್‌ಫೋನ್ 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪ್ರೈಮೆರಿ ಡಿಸ್‌ಪ್ಲೇ ಹೊಂದಿದೆ. ಇದು 1,080 x 2,520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ HDR10+ ಬೆಂಬಲಿಸಲಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದಲ್ಲದೆ ಈ ಫೋನ್ 3.26 ಇಂಚಿನ ಕವರ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ.

ಒಪ್ಪೋ ಫೈಂಡ್ N2 ಫ್ಲಿಪ್ : ಪ್ರೊಸೆಸರ್ ಯಾವುದು?
ಒಪ್ಪೋ ಫೈಂಡ್ N2 ಫ್ಲಿಪ್ ಫೋಲ್ಡಬಲ್ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9000+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಆಧಾರಿತ ಕಲರ್ ಒಎಸ್ 13.0 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಮತ್ತು 16GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಎರಡು ವೇರಿಯೆಂಟ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

ಒಪ್ಪೋ ಫೈಂಡ್ N2 ಫ್ಲಿಪ್ : ಕ್ಯಾಮೆರಾ ರಚನೆ
ಒಪ್ಪೋ ಫೈಂಡ್ N2 ಫ್ಲಿಪ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಶೂಟರ್ ಅನ್ನು ಹೊಂದಿದೆ. ಇದಲ್ಲದೆ ಫೋಲ್ಡಿಂಗ್ ಡಿಸ್‌ಪ್ಲೇಯ ಮೇಲ್ಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದಲ್ಲದೆ ಈ ಫೋನ್‌ನ ಹಿಂಬದಿಯ ಕ್ಯಾಮೆರಾಗಳನ್ನು ಮಾರಿಸಿಲಿಕಾನ್ X ಇಮೇಜಿಂಗ್ NPU ಬೆಂಬಲಿಸುತ್ತದೆ.

ಒಪ್ಪೋ ಫೈಂಡ್ N2 ಫ್ಲಿಪ್ : ಬ್ಯಾಟರಿ ಬ್ಯಾಕ್‌ಅಪ್?
ಒಪ್ಪೋ ಫೈಂಡ್ N2 ಫ್ಲಿಪ್ ಸ್ಮಾರ್ಟ್‌ಫೋನ್ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 44W ಸೂಪರ್‌ವೂಕ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.3, GPS/ A-GPS ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಗೈರೋಸ್ಕೋಪ್ ಅನ್ನು ಒಳಗೊಂಡಿದೆ.


Click it and Unblock the Notifications








