ಭಾರತಕ್ಕೆ ಕಾಲಿಟ್ಟ ಒಪ್ಪೋ ಫೈಂಡ್ N3 ಫ್ಲಿಪ್ ಸ್ಮಾರ್ಟ್‌ಫೋನ್! ಇದರ ಶೈಲಿಯೇ ಫುಲ್ ಡಿಫ್ರೆಂಟ್!
ಒಪ್ಪೋ ಕಂಪೆನಿಯ ಜನಪ್ರಿಯ ಸ್ಮಾರ್ಟ್‌ಫೋನ್ ಒಪ್ಪೋ ಫೈಂಡ್ N3 ಫ್ಲಿಪ್ ಅಂತಿಮವಾಗಿ ಭಾರತಕ್ಕೆ ಎಂಟ್ರಿ ನೀಡಿದೆ. ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡ್ತಿದ್ದ ಹಾಗೇ ಭಾರಿ ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲ ಮೊಬೈಲ್ ಮಾರುಕಟ್ಟೆಯಲ್ಲಿ ಧೂಳೆಬ್ಬಿಸುವ ಸೂಚನೆಯನ್ನು ನೀಡಿದೆ. ಇದು ಕ್ಲಾಮ್‌ಶೆಲ್ ಶೈಲಿಯ ಫೋಲ್ಡಬಲ್ ಸ್ಮಾರ್ಟ್‌ಫೋನ್ ಆಗಿರುವುದು ವಿಶೇಷವಾಗಿದೆ.
ಹೌದು, ಒಪ್ಪೋ ಫೈಂಡ್ N3 ಫ್ಲಿಪ್ ಸ್ಮಾರ್ಟ್‌ಫೋನ್ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಆಕ್ಟಾ-ಕೋರ್ ಡೈಮೆನ್ಸಿಟಿ 9200SoC ಪ್ರೊಸೆಸರ್ ವೇಗದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್ 3.26 ಇಂಚಿನ ಕವರ್ ಡಿಸ್‌ಪ್ಲೇಯನ್ನು ಹೊಂದಿರುವುದು ಗಮನಿಸಬೇಕಾದ ವಿಚಾರವಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ಫೈಂಡ್ N3 ಫ್ಲಿಪ್ ಡಿಸ್‌ಪ್ಲೇ ರಚನೆ ಹೇಗಿದೆ?
ಒಪ್ಪೋ ಫೈಂಡ್ N3 ಫ್ಲಿಪ್ ಸ್ಮಾರ್ಟ್‌ಫೋನ್ 6.8-ಇಂಚಿನ ಫುಲ್ HD LTPO AMOLED ಇನರ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 1Hz ಮತ್ತು 120Hz ನಡುವಿನ ಡೈನಾಮಿಕ್ ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇನ್ನು ಸ್ಮಾರ್ಟ್‌ಫೋನ್ 3.26 ಇಂಚಿನ ಕವರ್ ಡಿಸ್‌ಪ್ಲೇಯನ್ನು ಸಹ ಹೊಂದಿದೆ. ಕವರ್ ಡಿಸ್‌ಪ್ಲೇಯು ಅಮೋಲೆಡ್ ಪ್ಯಾನಲ್ ಅನ್ನು ಹೊಂದಿದ್ದು, 900 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.
ಒಪ್ಪೋ ಫೈಂಡ್ N3 ಫ್ಲಿಪ್ ಪ್ರೊಸೆಸರ್ ಯಾವುದು?
ಒಪ್ಪೋ ಫೈಂಡ್ N3 ಫ್ಲಿಪ್ ಸ್ಮಾರ್ಟ್‌ಫೋನ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9200SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ನಲ್ಲಿ ಒಪ್ಪೋದ ColorOS 13.2 ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ARM ಇಮ್ಮಾರ್ಟಲಿಸ್-G715 MC11 GPU ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಒಪ್ಪೋ ಫೈಂಡ್ N3 ಫ್ಲಿಪ್ ಕ್ಯಾಮೆರಾ ಸೆಟ್‌ಅಪ್ ಹೇಗಿದೆ?
ಒಪ್ಪೋ ಫೈಂಡ್ N3 ಫ್ಲಿಪ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರುವ ಮೊದಲ ಕ್ಲಾಮ್‌ಶೆಲ್-ಶೈಲಿಯ ಫೋಲ್ಡಬಲ್ ಫೋನ್ ಆಗಿದೆ. ಇದರ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾವನ್ನು ಹೊಂದಿದೆ. ಮೂರನೇ ಕ್ಯಾಮೆರಾ 32 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಒಪ್ಪೋ ಫೈಂಡ್ N3 ಫ್ಲಿಪ್ ಬ್ಯಾಟರಿ
ಒಪ್ಪೋ ಫೈಂಡ್ N3 ಫ್ಲಿಪ್ ಸ್ಮಾರ್ಟ್‌ಫೋನ್ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W SuperVOOC ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 7, ಬ್ಲೂಟೂತ್ 5.3, NFC, GPS ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋಮೀಟರ್, ಗೈರೊಸ್ಕೋಪ್, ಗುರುತ್ವಾಕರ್ಷಣೆ ಸಂವೇದಕ, ಸುತ್ತುವರಿದ ಬೆಳಕಿನ ಸಂವೇದಕವನ್ನು ಒಳಗೊಂಡಿದೆ. ಇದಲ್ಲದೆ ಈ ಫೋನ್ ಡಾಲ್ಬಿ ಅಟ್ಮಾಸ್‌ನೊಂದಿಗೆ ಡ್ಯುಯಲ್ ಸ್ಪೀಕರ್ ಸೆಟಪ್ ಅನ್ನು ಹೊಂದಿದೆ.
ಭಾರತದಲ್ಲಿ ಒಪ್ಪೋ ಫೈಂಡ್ N3 ಫ್ಲಿಪ್ ಫ್ಲಿಪ್ ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಒಪ್ಪೋ ಫೈಂಡ್ N3 ಫ್ಲಿಪ್ ಸ್ಮಾರ್ಟ್‌ಫೋನ್ 12GB + 256GB RAM ಸ್ಟೋರೇಜ್ ಕಾನ್ಫಿಗರೇಶನ್ ಆಯ್ಕೆಗೆ 94,999ರೂ ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ರೀಮ್ ಗೋಲ್ಡ್, ಮಿಸ್ಟಿ ಪಿಂಕ್, ಸ್ಲೀಕ್ ಬ್ಲ್ಯಾಕ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಇದು ಒಪ್ಪೋದ ಅಧಿಕೃತ ಆನ್‌ಲೈನ್ ಸ್ಟೋರ್, ಫ್ಲಿಪ್‌ಕಾರ್ಟ್ ಮತ್ತು ದೇಶದಾದ್ಯಂತ ಚಿಲ್ಲರೆ ಅಂಗಡಿಗಳ ಮೂಲಕ ಅಕ್ಟೋಬರ್ 22 ರಿಂದ ಸೇಲ್ ಆಗಲಿದೆ. ಇನ್ನು ಲಾಂಚ್ ಆಫರ್ ಅಂಗವಾಗಿ ಎಕ್ಸ್‌ಚೇಂಜ್ ಆಫರ್‌ನಲ್ಲಿ 8,000ರೂ. ರಿಯಾಯಿತಿ ಪಡೆದುಕೊಳ್ಳುವ ಅವಕಾಶವಿದೆ.


Click it and Unblock the Notifications








