Home
ಸುದ್ದಿಜಾಲ

ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ! ಫೀಚರ್ಸ್‌ ನಿರೀಕ್ಷೆ ಏನು?

ಟೆಕ್‌ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಒಪ್ಪೋ ಫೈಂಡ್‌ N3 ಫ್ಲಿಪ್ ಸ್ಮಾರ್ಟ್‌ಫೋನ್‌ ಇಂದು ಸಂಜೆ ಭಾರತದಲ್ಲಿ ಅನಾವರಣಗೊಳ್ಳಲಿದೆ. ಇದೇ ಸಮಯದಲ್ಲಿ ಒಪ್ಪೋ ಕಂಪೆನಿಯ ಮತ್ತೊಂದು ಅಚ್ಚರಿ ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ ಕೂಡ ಇದೇ ಅಕ್ಟೋಬರ್ 19 ರಂದು ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ದೃಢಪಡಿಸಿದೆ.

ಹೌದು, ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡಲು ದಿನಾಂಕ ಫಿಕ್ಸ್‌ ಆಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಇದೇ ತಿಂಗಳು ಅಂದರೆ ಅಕ್ಟೋಬರ್ 19ಕ್ಕೆ ಬಿಡುಗಡೆ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್‌ ಕೂಡ ಬಹಿರಂಗವಾಗಿದ್ದು, ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ಹಾಗಾದ್ರೆ ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ ಲಾಂಚ್‌ ಡೇಟ್‌ ಬಹಿರಂಗ! ನಿರೀಕ್ಷೆ ಏನು?

ಒಪ್ಪೋ ಫೈಂಡ್‌ N3 ಡಿಸ್‌ಪ್ಲೇ ರಚನೆ ಹೇಗಿರಲಿದೆ?
ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ 7.82 ಇಂಚಿನ OLED ಇನ್ನರ್ ಡಿಸ್‌ಪ್ಲೇಯನ್ನು ಹೊಂದರಿಲಿದೆ. ಇದು 120Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದ್ದು, 2268×2440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿದೆ. ಇದಲ್ಲದೆ 6.31 ಇಂಚಿನ ಔಟರ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2484×1116 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಒಪ್ಪೋ ಫೈಂಡ್‌ N3 ಪ್ರೊಸೆಸರ್‌ ಯಾವುದು?
ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ವರೆಗೆ ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿರಲಿದೆ. ಇದು 24GB RAM ಅನ್ನು ಪ್ಯಾಕ್ ಮಾಡಬಹುದು ಎನ್ನುವ ವರದಿ ಕೂಡ ಬಹಿರಂಗವಾಗಿದೆ.

ಒಪ್ಪೋ ಫೈಂಡ್‌ N3 ಕ್ಯಾಮೆರಾ ಸೆಟ್‌ಅಪ್‌
ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾದೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಟೆಲಿಫೋಟೋ ಸೆನ್ಸಾರ್‌ ಅನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಅಥವಾ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ಸಾಧ್ಯತೆಯಿದೆ.

ಒಪ್ಪೋ ಫೈಂಡ್‌ N3 ಬ್ಯಾಟರಿ ಮತ್ತು ಇತರೆ ಸಾಮರ್ಥ್ಯ
ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ 4,805mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಬೆಂಬಲಿಸಲಿದೆ.

ಒಪ್ಪೋ ಫೈಂಡ್‌ N3 ಬೆಲೆ ಮತ್ತು ಲಭ್ಯತೆ
ಒಪ್ಪೋ ಫೈಂಡ್‌ N3 ಸ್ಮಾರ್ಟ್‌ಫೋನ್‌ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಬಿಡುಗಡೆ ದಿನಾಂಕ ಹತ್ತತಿರವಾಗ್ತಿದ್ದ ಹಾಗೇ ಇದರ ಬೆಲೆ ವಿವರಗಳು ಬಹಿರಂಗವಾಗುವ ನಿರೀಕ್ಷೆಯಿದೆ. ಇನ್ನು ಸ್ಮಾರ್ಟ್‌ಫೋನ್‌ ಕಲರ್‌ ಆಯ್ಕೆಗಳ ಬಗ್ಗೆಯೂ ಸಹ ಯಾವುದೇ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ.

ಇನ್ನು ಎರಡು ದಿನಗಳ ಹಿಂದೆಯಷ್ಟೇ ಒಪ್ಪೋ A2x ಸ್ಮಾರ್ಟ್‌ಫೋನ್‌ ಕೂಡ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ 6.56-ಇಂಚಿನ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಡೈಮೆನ್ಸಿಟಿ 6020 SoC ಪ್ರೊಸೆಸರ್‌ ಹೊಂದಿದ್ದು, ಕಲರ್‌ಒಎಸ್‌ 13.1 ಆಧಾರಿತ ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128 GB ಹಾಗೂ 8GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದೊಂದಿಗೆ ಬರಲಿದೆ. ಇದಲ್ಲದೆ ಬಳಕೆಯಾಗದ ಹೆಚ್ಚವರಿ ಸ್ಟೋರೇಜ್‌ ಬಳಸಿಕೊಂಡು 8GB ವರೆಗೆ ವರ್ಚುವಲ್ RAM ಅನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.

Best Mobiles in India

English summary
Oppo Find N3 will be launched in Global market on October 19
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+