ಒಪ್ಪೋ ಫೈಂಡ್ X2 ಮತ್ತು X2 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ!
ಒಪ್ಪೋ ಸ್ಮಾರ್ಟ್‌ಫೋನ್ ಕಂಪೆನಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸುವಲ್ಲಿ ಪ್ರಸಿದ್ಧಿಯನ್ನ ಪಡೆದಿದೆ. ಈಗಾಗ್ಲೆ ಹಲವು ಜನಪ್ರಿಯ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿ ಸೈ ಎನಿಸಿಕೊಂಡಿರುವ ಒಪ್ಪೋ ಕಂಪೆನಿ ಇದೀಗ ಹೊಸ ಆವೃತ್ತಿಯ ಎರಡು ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿದ್ದು, ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸುವ ಸಾಧ್ಯತೆ ಇದೆ.

ಹೌದು, ಚೀನಾ ಮೂಲದ ಒಪ್ಪೋ ಕಂಪೆನಿ ತನ್ನ ಫೈಂಡ್ ಸರಣಿಯಲ್ಲಿ ಒಪ್ಪೋ ಫೈಂಡ್ X2 ಮತ್ತು X2 ಪ್ರೊ ಸ್ಮಾರ್ಟ್‌ಫೋನ್‌ಗಳನ್ನ ಯುರೋಪ್ ಮಾರುಕಟ್ಟೆಯಲ್ಲಿ ಲಾಂಚ್ ಮಾಡಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು 120Hz ಅಲ್ಟ್ರಾ ವಿಷನ್ ಡಿಸ್‌ಪ್ಲೇ ಮತ್ತು ಪಂಚ್‌ಹೋಲ್ ಕಟ್‌ಔಟ್ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿವೆ. ಅಲ್ಲದೆ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಒಳಗೊಂಡಿವೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದರ ಮಾಹಿತಿ ಈ ಲೇಖನದಲ್ಲಿದೆ ಓದಿ.

ಒಪ್ಪೋ ಫೈಂಡ್ X2 ಡಿಸ್‌ಪ್ಲೇ
ಇದು 1440 x 3168 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.7 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು QHD+ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಅಲ್ಲದೆ ಈ ಡಿಸ್‌ಪ್ಲೇಯು ಅಲ್ಟ್ರಾ ವಿಷನ್ ಡಿಸ್‌ಪ್ಲೇ ಆಗಿದ್ದು 120Hz ರಿಫ್ರೆಶ್ ರೇಟ್ ಹಾಗೂ 240Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್6 ಅನ್ನು ಒಳಗೊಂಡಿದೆ. ಜೊತೆಗೆ ಇದು ವಿಡಿಯೋ ವೀಕ್ಷಣೆಗೆ ಉತ್ತಮ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಒಪ್ಪೋ ಫೈಂಡ್ X2 ಪ್ರೊಸೆಸರ್
ಒಪ್ಪೋ ಫೈಂಡ್ X2 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಹೊಂದಿದ್ದು, ಕಲರ್ OS ಒಳಗೊಂಡ ಆಂಡ್ರಾಯ್ಡ್10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಅಡ್ರಿನೊ 650 GPU ಅನ್ನು ಒಳಗೊಂಡಿದೆ. ಇದಲ್ಲದೆ 12GB RAM ಮತ್ತು 256GB ಆಂತರಿಕ ಶೇಖರಣಾ ಸಾಮರ್ಥ್ಯವನ್ನು ಹೊಂದಿದೆ. ಆದರೆ ಮೆಮೊರಿ ಕಾರ್ಡ್ ಮೂಲಕ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಲು ಅವಕಾಶವನ್ನು ನೀಡಿಲ್ಲ.

ಒಪ್ಪೋ ಫೈಂಡ್ X2 ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX586 ಸೆನ್ಸಾರ್ ಮತ್ತು f/1.7ಲೆನ್ಸ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆಕೆಂಡರಿ ಸೋನಿ IMX708 ಸೆನ್ಸಾರ್ ಮತ್ತು f/2.2 ಲೆನ್ಸ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಒಪ್ಪೋ ಫೈಂಡ್ X2 ಪ್ರೊ ಡಿಸ್‌ಪ್ಲೇ
ಒಪ್ಪೋ ಫೈಂಡ್ X2 ಪ್ರೊ ಸ್ಮಾರ್ಟ್‌ಫೋನ್ 1440x3168 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.7 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು QHD+ ಅಲ್ಟ್ರಾ ವಿಷನ್ ಡಿಸ್‌ಪ್ಲೇ ಆಗಿದೆ. ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, 240Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ 100% P3 ಬಣ್ಣದ ಹರವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್ 513PPI ನಷ್ಟು ಪಿಕ್ಸೆಲ್ ಸಾದ್ರಂತೆಯನ್ನು ಹೊಂದಿದ್ದು, ಡಿಸ್‌ಪ್ಲೇ ರಕ್ಷಣೆಗಾಗಿ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ 6ಅನ್ನು ನೀಡಲಾಗಿದೆ.

ಒಪ್ಪೋ ಫೈಂಡ್ X2 ಪ್ರೊ ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ ಕ್ವಾಲ್ಕಾಮ್ 865 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಅಡ್ರಿನೊ 650 GPU ಹೊಂದಿದೆ. ಇದಲ್ಲದೆ 12GB RAM ಮತ್ತು 512GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ. ಆದರೆ ಮೆಮೊರಿ ಕಾರ್ಡ್ ಮೂಲಕ ಶೇಖರಣಾ ಸಾಮರ್ಥ್ಯವನ್ನು ವಿಸ್ತರಿಸಲು ಈ ಸ್ಮಾರ್ಟ್‌ಫೋನ್‌ನಲ್ಲಿ ಅವಕಾಶ ನೀಡಲಾಗಿಲ್ಲ.

ಒಪ್ಪೋ ಫೈಂಡ್ X2 ಪ್ರೊ ಕ್ಯಾಮೆರಾ
ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX689 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ 10x ಹೈಬ್ರಿಡ್ ಜೂಮ್ ಮತ್ತು 60 X ಡಿಜಿಟಲ್ ಜೂಮ್ ಬೆಂಬಲವನ್ನು ಹೊಂದಿದೆ. ಅಲ್ಲದೆ 32 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಫೈಂಡ್X2 ಮತ್ತು ಫೈಂಡ್ Xಪ್ರೊ ಬ್ಯಾಟರಿ
ಒಪ್ಪೋ ಪೈಂಡ್ X2 ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು 65W ಸೂಪರ್VOOC 2.0 ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನ ಹೊಂದಿದೆ. ಇನ್ನು ಒಪ್ಪೋ ಫೈಂಡ್ X2 ಪ್ರೊ ಸ್ಮಾರ್ಟ್‌ಫೋನ್ 4,260mAh ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಕೂಡ 65W ಸೂಪರ್VOOC 2.0 ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ V5.1, ಹಾಟ್‌ಸ್ಪಾಟ್, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಫೋರ್ಟ್ ಅನ್ನು ಹೊಂದಿವೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ ಫೈಂಡ್ X2ಪ್ರೊ ಸ್ಮಾರ್ಟ್‌ಫೋನ್ ಬೆಲೆ EUR 1,199 (ಸುಮಾರು 1,67,300 ರೂ) ಆಗಿದ್ದು, ಇದು ಬ್ಲ್ಯಾಕ್, ಆರೇಂಜ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನು ಒಪ್ಪೋ ಫೈಂಡ್ X2 ಸ್ಮಾರ್ಟ್‌ಫೋನ್ EUR 999 (ಅಂದಾಜು 83,400.ರೂ) ಬೆಲೆಯನ್ನ ಹೊಂದಿದ್ದು, ಬ್ಲ್ಯಾಕ್ ಹಾಗೂ ಓಶಿಯನ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಸದ್ಯ ಈ ಎರಡು ಸ್ಮಾರ್ಟ್‌ಫೋನ್‌ಗಳು ಯುರೋಪ್ ಮಾರುಕಟ್ಟೆಯಲ್ಲಿ ಲಭ್ಯವಾಗಲಿವೆ.


Click it and Unblock the Notifications








