ಶೀಘ್ರದಲ್ಲೇ ಲಾಂಚ್‌ ಆಗಲಿದೆ ಒಪ್ಪೋ ಫೈಂಡ್‌ x2 ಸ್ಮಾರ್ಟ್‌ಫೋನ್‌!

|

ಇತ್ತೀಚಿನ ದಿನಗಳಲ್ಲಿ ಹೊಸ ಬಗೆಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಬರುತ್ತಿದ್ದು, ತರಹವೇಹಾರಿ ಫೀಚರ್ಸ್‌ಗಳ ಸ್ಮಾರ್ಟ್‌ಫೋನ್‌ಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ. ಇನ್ನು ಈಗಾಗ್ಲೆ ತನ್ನ ವೈವಿಧ್ಯ ಬಗೆಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಬ್ರ್ಯಾಂಡ್‌ಗಳಲ್ಲಿ ಒಪ್ಪೋ ಕಂಪೆನಿ ಕೂಡ ಒಂದಾಗಿದೆ. ಸದ್ಯ ಒಪ್ಪೊ ಕಂಪೆನಿ ಇದೀಗ ಇದೇ ತಿಂಗಳು ಬಾರ್ಸಿಲೋನದಲ್ಲಿ ನಡೆಯಲಿರುವ ಮೊಬೈಲ್‌ ವರ್ಲ್ಡ್‌ ಕಾಂಗ್ರೆಸ್‌ ಸಮ್ಮೆಳನ ಶುರುವಾಗುವ ಮುಂಚೆಯೇ ಹೊಸ ಸ್ಮಾರ್ಟ್‌ಫೋನ್‌ ಪರಿಚಯಿಸಲು ಮುಂದಾಗಿದೆ.

ಚೀನಾ

ಹೌದು, ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ಒಪ್ಪೋ ತನ್ನ ಹೊಸ ಸ್ಮಾರ್ಟ್‌ಫೋನ್‌ ಒಪ್ಪೋ ಫೈಂಡ್ X2 ಅನ್ನು ಇದೇ ಫೆಬ್ರವರಿ 22 ರಂದು ಬಿಡುಗಡೆ ಮಾಡಲಿದೆ. ಈಗಾಗ್ಲೆ ಒಪ್ಪೋ ಫೈಂಡ್ X2 ಲಾಂಚ್‌ ಮಾಡುವ ಕಾರ್ಯಕ್ರಮಕ್ಕಾಗಿ ಕಂಪನಿಯು ಅಧಿಕೃತ ಆಹ್ವಾನಗಳನ್ನು ಕಳುಹಿಸಿದೆ. ಸದ್ಯ ಬಿಡುಗಡೆಗೆ ಸಿದ್ದವಾಗಿರುವ ಫೈಂಡ್ X2 ನ ಫೀಚರ್ಸ್‌ಗಳೇನು ಅನ್ನೊದು ಈಗಾಗ್ಲೆ ಬಹಿರಂಗವಾಗಿದ್ದು, ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಒಪ್ಪೋ ಫೈಂಡ್ X2 ಸ್ಮಾರ್ಟ್‌ಫೋನ್‌ 1440 x 3168 ಪಿಕ್ಸೆಲ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಬೆಜೆಲ್‌ ಲೆಸ್‌ ವಿನ್ಯಾಶವನ್ನ ಹೊಂದಿದೆ. ಈ ಡಿಸ್‌ಪ್ಲೇಯು ಮಲ್ಟಿ ಟಚ್ ಸ್ಕ್ರೀನ್ ಹೊಂದಿದ್ದು, ಕೆಪ್ಯಾಸಿಟಿವ್ ಟಚ್‌ಸ್ಕ್ರೀನ್ ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ QHD + ರೆಸಲ್ಯೂಶನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ ಡಿಸ್‌ಪ್ಲೇ ಪಿಕ್ಸೆಲ್‌ ರೆಸಲ್ಯೂಶನ್‌ 535 PPI ಸಾಂದ್ರತೆಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಕಲರ್‌ ಒಎಸ್‌7 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 12GB RAM ಮತ್ತು 256GB ಶೇಖರಣಾ ಸಾಮರ್ಥ್ಯವನ್ನ ಹೊಂದಿದ್ದು, ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹಣಾ ಸಾಮರ್ಥ್ಯವನ್ನ ವಿಸ್ತರಿಸಲು ಯಾವುದೇ ಸ್ಥಳವಕಾಶವನ್ನ ಈ ಸ್ಮಾರ್ಟ್‌ಫೋನ್‌ನಲ್ಲಿ ನೀಡಲಾಗಿಲ್ಲ ಎನ್ನಲಾಗಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಒಪ್ಪೋ ಫೈಂಡ್‌ X2 ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮೊದಲನೇ ಕ್ಯಾಮೆರಾ 45 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ವೈಡ್‌ ಆಂಗಲ್‌ ಲೆನ್ಸ್‌ ಹಾಗೂ ಎರಡನೇ ಕ್ಯಾಮೆರಾ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಟೆಲಿಫೋಟೊ ಲೆನ್ಸ್‌ ಅನ್ನು ಒಳಗೊಂಡಿದೆ. ಜೊತೆಗೆ 25 ಮೆಗಾಪಿಕ್ಸೆಲ್‌ ಸನ್ಸಾರ್‌ ಒಳಗೊಂಡಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಈ ಕ್ಯಾಮೆರಾಗಳಲ್ಲಿ ಆಟೋ ಫೋಕಸ್‌, ಎಲ್‌ಇಡಿ ಫ್ಲಾಶ್ ಹಾಗೂ ಪನೊರಮ ಫೀಚರ್ಸ್‌ಗಳನ್ನ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 4065 mAh ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದ್ದು, 50W ವೈರ್‌ಲೆಸ್‌ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಅಲ್ಲದೆ SuperVOOC 2 ಫ್ಲಾಶ್‌ ಚಾರ್ಜ್‌ ಅನ್ನು ಸಹ ಬೆಂಬಲಿಸಲಿದೆ. ಅಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌ v5.0, ವೈಫೈ 802.11,b/g/n, ಮೊಬೈಲ್‌ ಹಾಟ್‌ಸ್ಪಾಟ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇದೇ ತಿಂಗಳು ಬಿಡುಗಡೆಯಾಗಲಿದ್ದು, ಇದರ ಬೆಲೆ ಎಷ್ಟಿರಲಿದೆ ಎಂಬುದರ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
The company has officially sent invites for the Oppo Find X2 launch event in Barcelona.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X