ಒಪ್ಪೋ ಫೈಂಡ್ X2 ಲೈಟ್ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಬಹಿರಂಗ!

|

ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿ ಒಪ್ಪೋ ತನ್ನ ವಿಶೇಷತೆಗಳಿಂದಲೇ ಗುರುತಿಸಿಕೊಂಡಿದೆ. ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಪ್ರತಿ ಭಾರಿಯು ಹೊಸ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಒಪ್ಪೋ ಇದೀಗ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದತೆ ನಡೆಸಿದೆ. ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಒಪ್ಪೋ ತನ್ನ ಹೊಸ ಸ್ಮಾರ್ಟ್‌ಫೋನ್‌ ಮೂಲಕ ಮತ್ತೊಮ್ಮೆ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುವ ಭರವಸೆಯನ್ನ ಮೂಡಿಸಿದೆ.

ಚೀನಾದ

ಹೌದು, ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ಕಂಪೆನಿ ಒಪ್ಪೋ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಪ್ರಸಿದ್ಧಿಯನ್ನ ಪಡೆದುಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೋ ಫೈಂಡ್ X2 ಲೈಟ್ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ವೇದಿಕೆ ಸಿದ್ದಪಡಿಸಿಕೊಳ್ತಿದೆ. ಈ ಸ್ಮಾರ್ಟ್‌ಫೋನ್‌ ಒಪ್ಪೊ ಫೈಂಡ್ X2 ಸರಣಿಗೆ ಸೇರಿದ್ದು, ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ಭಾರಿ ನಿರೀಕ್ಷೆಯನ್ನ ಹುಟ್ಟುಹಾಕಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 765 SoC ಪ್ರೊಸೆಸರ್‌ ಹೊಂದಿರುವ ಸಾದ್ಯತೆ ಇದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಈ ಸ್ಮಾರ್ಟ್‌ಫೋನ್‌ 1,080x2,340 ಫೀಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.4-ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಅಮೋಲೆಡ್‌ ಡಿಸ್‌ಪ್ಲೆ ಆಗಿದೆ. ಇನ್ನು ಈ ಡಿಸ್‌ಪ್ಲೇಯು ಉತ್ತಮ ಪಿಕ್ಸೆಲ್‌ ಸಾಂದ್ರತೆಯನ್ನ ಹೊಂದಿದ್ದು, ಉತ್ತಮ ನೀಟ್‌ ರೇಟ್‌ಗಳನ್ನ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ವಿಡಿಯೋ ಕರೆಗಳು ಹಾಗೂ ವೀಡಿಯೊ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡುವ ಡಿಸ್‌ಪ್ಲೇ ಮಾದರಿಯನ್ನ ಒಳಗೊಂಡಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಒಪ್ಪೋ ಫೈಂಡ್‌ X2 ಲೈಟ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765 SoC ಪ್ರೊಸೆಸರ್‌ ವೇಗವನ್ನ ಹೊಂದಿದ್ದು, ಅಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 8GB RAM ಮತ್ತು 128GB ಇಂಟರ್ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದು ಎಂದು ಹೇಳಲಾಗ್ತಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಒಪ್ಪೋ ಫೈಂಡ್ X2 ಲೈಟ್ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್‌ ಆಂಗಲ್‌ ಲೆನ್ಸ್‌ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಅನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಇಮೇಜ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುವ ಸಾಧ್ಯತೆಯಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಒಪ್ಪೊ ಫೈಂಡ್ X2 ಲೈಟ್ ಸ್ಮಾರ್ಟ್‌ಫೋನ್‌ 4,025mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 30W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, 3.5mm ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇನ್ನು ಒಪ್ಪೋ ಫೈಂಡ್ X2 ಲೈಟ್ ಯುರೋ 499.99 (ಅಂದಾಜು 41,000.ರೂ,) ಬೆಲೆಯನ್ನ ಹೊಂದಿರುವ ಸಾಧ್ಯತೆ ಇದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಯುರೋಪಿನಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದ್ದು, ಕಪ್ಪು ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Best Mobiles in India

English summary
Oppo Find X2 Lite Price, Specifications Tipped: What We Seem to Know So Far.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X