5G ಬೆಂಬಲಿಸುವ ಒಪ್ಪೊ ಫೈಂಡ್ X2 ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ!
ಚೀನಾ ಮೂಲದ ಒಪ್ಪೊ ಕಂಪೆನಿ ಈಗಾಗಲೇ ತನ್ನ ಒಪ್ಪೊ ಫೈಂಡ್ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿದೆ. ಒಪ್ಪೊ ಪೈಂಡ್ ಸರಣಿಯಲ್ಲಿ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ್ದ ಒಪ್ಪೊ ಕಂಪೆನಿ ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಪರಿಚಯಿಸಿದೆ. ಸದ್ಯ ಇದೀಗ ಬಿಡುಗಡೆ ಆಗಿರುವ ಸ್ಮಾರ್ಟ್‌ಫೋನ್ ಒಪ್ಪೊ ಕಂಪನಿಯ ಫೈಂಡ್ X2 ಸರಣಿಯ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಆಗಿದೆ. ಅಲ್ಲದೆ ಈಗಾಗಲೇ ಈ ಸರಣಿಯಲ್ಲಿ ಕೆಲವೇ ದಿನಗಳ ಹಿಂದೆ ಒಪ್ಪೋ ಫೈಂಡ್ X2 ಮತ್ತು ಫೈಂಡ್ X2 ಪ್ರೊ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿತ್ತು, ಇದೀಗ ಹೊಸ ಫೈಂಡ್ X2 ಲೈಟ್ 5G ಅನ್ನು ಬಿಡುಗಡೆ ಮಾಡಿದೆ.

ಹೌದು, ಒಪ್ಪೊ ಕಂಪೆನಿ ತನ್ನ ಜನಪ್ರಿಯ ಸರಣಿ ಪೈಂಡ್X2 ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಅನ್ನು ಒಪ್ಪೊ ಫೈಂಡ್ X2 ಲೈಟ್ ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಪೊರ್ಚುಗಲ್ ದೇಶದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದ್ದು, ಭಾರತದ ಮಾರುಕಟ್ಟೆಗೆ ಎಂಟ್ರಿ ನಿಡುವುದು ಯಾವಾಗ ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಒಪ್ಪೋ ಫೈಂಡ್ X2 ಲೈಟ್ ಸ್ಮಾರ್ಟ್‌ಫೋನ್ 6.4-ಇಂಚಿನ OLED ಡಿಸ್‌ಪ್ಲೇಯನ್ನ ಹೊಂದಿದೆ. ಈ ಡಿಸ್‌ಪ್ಲೇಯು ಫುಲ್ ಹೆಚ್‌ಡಿ + ರೆಸಲ್ಯೂಶನ್ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು 60Hz ಸ್ಕ್ರೀನ್ ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ಶೈಲಿಯನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇಯು ವೀಡಿಯೋ ವೀಕ್ಷಣೆ ಹಾಗೂ ವೀಡಿಯೊ ಕರೆಗಳಿಗೆ ಯೋಗ್ಯವಾದ ಮಾದರಿಯ ಡಿಸ್‌ಪ್ಲೇಯನ್ನು ಒಳಗೊಂಡಿದೆ.

ಪ್ರೊಸೆಸರ್
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 765 ಜಿ ಪ್ರೊಸೆಸರ್ ವೇಗವನ್ನು ಪಡೆದುಕೊಮಡಿದೆ. ಜೊತೆಗೆ ಇದು ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹಣ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ಸಹ ನಿಡಲಾಗಿದೆ.

ಕ್ಯಾಮೆರಾ ಸೆಟ್‌ಅಪ್
ಒಪ್ಪೊ ಪೈಂಡ್ X2 ಲೈಟ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ ಐಎಂಎಕ್ಸ್ 586 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 4,025mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಹೊಂದಿದ್ದು, 30W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್-ಸಿ ಪೋರ್ಟ್, 3.5 ಎಂಎಂ ಆಡಿಯೊ ಜ್ಯಾಕ್ ಮತ್ತು 5G ನೆಟ್‌ವರ್ಕ್ ಅನ್ನು ಬೆಂಬಲಿಸಲಿದೆ. ಇನ್ನು 30W VOOC ಫ್ಲ್ಯಾಶ್ 4.0 ತಂತ್ರಜ್ಞಾನವನ್ನ ಒಳಗೊಂಡಿದ್ದು, ಇದು ಕೇವಲ 20 ನಿಮಿಷಗಳಲ್ಲಿ ಫೋನ್ ಅನ್ನು 3 ರಿಂದ 50% ವರೆಗೆ ಚಾರ್ಜ್ ಮಾಡುತ್ತದೆ ಎಂದು ಒಪ್ಪೊ ಹೇಳಿಕೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಒಪ್ಪೋ ಫೈಂಡ್ X2 ಲೈಟ್‌ನ ಬೆಲೆಯನ್ನು ಇನ್ನು ಬಹಿರಂಗಪಡಿಸಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಒಪ್ಪೋ ಫೈಂಡ್ X2 ಗಿಂತ ಕಡಿಮೆ ವೆಚ್ಚವಾಗಲಿದೆ ಎಂದು ನಿರೀಕ್ಷಿಸಬಹುದಾಗಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಮೂನ್ಲೈಟ್ ಬ್ಲ್ಯಾಕ್ ಮತ್ತು ಪರ್ಲ್ ವೈಟ್ ಕಲರ್ ಆಯ್ಕೆಗಳಲ್ಲಿ ಲಬ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications




