Home
ಸುದ್ದಿಜಾಲ

ಒಪ್ಪೋ ಫೈಂಡ್‌ x2 ನಿಯೋ ಸ್ಮಾರ್ಟ್‌ಫೋನ್‌ ಬಿಡುಗಡೆ!

ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸದ್ಯ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸಿ ಸ್ಮಾರ್ಟ್‌ಫೋನ್‌ ಪ್ರಿಯರಿಂದ ಸೈ ಎನಿಸಿಕೊಂಡಿದೆ. ಇದಲ್ಲದೆ ಹಲವು ಹೊಸ ಫೀಚರ್ಸ್‌ಗಳನ್ನ ಪರಿಚಯಿಸುವಲ್ಲಿ ಒಪ್ಪೋ ಕಂಪೆನಿ ಸದಾ ಮುಂದೆ ಇದೆ. ಸದ್ಯ ಇದೀಗ ಒಪ್ಪೋ ತನ್ನ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ತನ್ನ ಹೊಸ ಒಪ್ಪೋ ಫೈಂಡ್ X2 ನಿಯೋ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5G ನೆಟ್‌ವರ್ಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿರುವ ಬಾಗಿದ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಹು-ಲೇಯರ್ಡ್‌ ಕೂಲಿಂಗ್ ವ್ಯವಸ್ಥೆಯನ್ನು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ನು ಈ ಸ್ಮಾರ್ಟ್‌ಫೋನ್‌ 2,400 x 1,080 ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಆಮೋಲೆಡ್‌ ಡಿಸ್ಪ್ಲೇ ವಿನ್ಯಾಸವನ್ನ ಹೊಂದಿದ್ದು, 402PPI ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ವೀಡಿಯೋ ವೀಕ್ಷಣೆ ಹಾಗೂ ವೀಡಿಯೋ ಕರೆಗಳಿಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಒಪ್ಪೋ ಫೈಂಡ್ X2 ನಿಯೋ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 765G ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಕಲರ್ಓಎಸ್ 7 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಈ ಪ್ರೊಸೆಸರ್‌ ಅಡ್ರಿನೊ 620GPU ಹೊಂದಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ನಲ್ಲಿ 12GB RAM ಮತ್ತು 256 GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಸೆನ್ಸಾರ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಈ ಕ್ಯಾಮೆರಾವು 20X ಡಿಜಿಟಲ್ ಜೂಮ್, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಲಭ್ಯತೆ

ಬ್ಯಾಟರಿ ಮತ್ತು ಲಭ್ಯತೆ

ಈ ಸ್ಮಾರ್ಟ್‌ಫೋನ್‌ 4,025mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದೆ. ಅಲ್ಲದೆ VOOC ಫ್ಲ್ಯಾಶ್ ಚಾರ್ಜ್ 4.0 ಗೆ ಬೆಂಬಲವನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ 5.1, ವೈ-ಫೈ, NFC ಮತ್ತು GPS ಅನ್ನು ಬೆಂಬಲಿಸುತ್ತದೆ. ಆನ್‌ಬೋರ್ಡ್ ಸೆನ್ಸಾರ್‌ನಲ್ಲಿ ಆಂಬಿಯೆಂಟ್ ಲೈಟ್ ಸೆನ್ಸರ್, ಅಕ್ಸೆಲೆರೊಮೀಟರ್ ಮತ್ತು ಗೈರೊಸ್ಕೋಪ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಒಪ್ಪೋ ಫೈಂಡ್‌ x2 ನಿಯೋ ಸ್ಮಾರ್ಟ್‌ಫೋನ್‌ ಇದೀಗ ಜರ್ಮನಿಯಲ್ಲಿ ಯುರೋ 699 (ಸರಿಸುಮಾರು 58,000 ರೂ.) ನಲ್ಲಿ ಖರೀದಿಸಲು ಲಭ್ಯವಿದೆ. ಸ್ಟಾರಿ ಬ್ಲೂ ಮತ್ತು ಮೂನ್‌ಲೈಟ್ ಕಪ್ಪು ಬಣ್ಣಗಳ ಆಯ್ಕೆಯಲ್ಲಿ ಖರೀದಿಸಬಹುದಾಗಿದೆ.

Best Mobiles in India

English summary
Oppo Find X2 Neo is here after months of leaks and rumours. The phone is 5G enabled, comes with a curved display having a 90Hz refresh rate, to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+