ಒಪ್ಪೋ ಫೈಂಡ್ X 2 ಪ್ರೊ ಮತ್ತು ಫೈಂಡ್ X 2 ಸ್ಮಾರ್ಟ್‌ಫೋನ್ ಬಿಡುಗಡೆ!
ಚೀನಾದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಒಪ್ಪೋ ಕಂಪೆನಿ ತನ್ನ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನ ಮಾರುಕಟ್ಟೆಗೆ ಪರಿಚಯಿಸುತ್ತಲೇ ಬಂದಿದೆ. ಹೊಸ ಮಾದರಿಯ ಫೀಚರ್ಸ್‌ಗಳನ್ನ ಪರಿಚಯಿಸುವ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರಾಂಡ್ ಆಗಿ ಗುರುತಿಸಿಕೊಂಡಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿದೆ.

ಹೌದು, ಒಪ್ಪೋ ಕಂಪೆನಿ ತನ್ನ ಜನಪ್ರಿಯ ಸರಣಿ ಒಪ್ಪೋ ಫೈಂಡ್ ಸರಣಿಯಲ್ಲಿ ಒಪ್ಪೋ ಫೈಂಡ್ X 2 ಪ್ರೊ ಮತ್ತು ಒಪ್ಪೋ ಫೈಂಡ್ X2 ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಒಪ್ಪೊ ಸ್ಮಾರ್ಟ್‌ಫೋನ್‌ಗಳು 120Hz ಅಲ್ಟ್ರಾ ವಿಷನ್ ಡಿಸ್‌ಪ್ಲೇಯನ್ನು ಹೊಂದಿದ್ದು, ಪಂಚ್ ಹೋಲ್ ಡಿಸ್‌ಪ್ಲೇ ವಿನ್ಯಾಸವನ್ನ ಹೊಂದಿದೆ. ಇದಲ್ಲದೆ ಒಪ್ಪೋ ಫೈಂಡ್ X2 ಪ್ರೊ ಮತ್ತು ಫೈಂಡ್ X2 ಸ್ಮಾರ್ಟ್‌ಫೋನ್ ಎರಡೂ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಹೊಂದಿವೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ಫೈಂಡ್ X 2 ಪ್ರೊ ಡಿಸ್‌ಪ್ಲೇ
ಒಪ್ಪೊ ಫೈಂಡ್ ಎಕ್ಸ್ 2 ಪ್ರೊ 1,440x3,168 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಕ್ಯೂಎಚ್‌ಡಿ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಅಲ್ಟ್ರಾ ವಿಷನ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಅಲ್ಲದೆ 240Hz ವರೆಗೆ ಟಚ್ ಸ್ಯಾಂಪ್ಲಿಂಗ್ ರೇಟ್ , ಮತ್ತು 100% P3 ಬಣ್ಣದ ಹರವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್ 513PPI ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 6 ರಕ್ಷಣೆಯನ್ನು ಹೊಂದಿದೆ.

ಒಪ್ಪೋ ಫೈಂಡ್ X 2 ಪ್ರೊ ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಅನ್ನು ಕಲರ್ಓಎಸ್ 7.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 12GB RAM ಮತ್ತು 512GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇನ್ನು ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ಇದರಲ್ಲಿ ನಿಡಲಾಗಿಲ್ಲ.

ಒಪ್ಪೋ ಫೈಂಡ್ X 2 ಪ್ರೊ ಕ್ಯಾಮೆರಾ ವಿನ್ಯಾಸ
ಒಪ್ಪೊ ಫೈಂಡ್ X 2 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX 689 ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX 586 ಸೆನ್ಸಾರ್ ಹೊಂದಿದ್ದು, ಇದು 120 ಡಿಗ್ರಿಗಳಷ್ಟು ವೀಕ್ಷಣಾ ಕ್ಷೇತ್ರವನ್ನು ಹೊಂದಿದೆ. ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಒಪ್ಪೋ ಫೈಂಡ್ X 2 ಪ್ರೊ ಬ್ಯಾಟರಿ ಮತ್ತು ಇತರೆ
ಒಪ್ಪೋ ಫೈಂಡ್ ಎಕ್ಸ್ 2 ಪ್ರೊ ಸ್ಮಾರ್ಟ್‌ಫೋನ್ 4W260mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಅಲ್ಲದೆ 65W ಸೂಪರ್ ವೂಕ್ 2.0 ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ V 5.1, GPS, ಮತ್ತು ಯುಎಸ್ಬಿ ಟೈಪ್-ಸಿ ಸೇರಿವೆ. ಇನ್ನು ಈ ಸ್ಮಾರ್ಟ್‌ಫೋನ್ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್, ಬಾರೋಮೀಟರ್, ಮ್ಯಾಗ್ನೆಟೋಮೀಟರ್, ಒಳಗೊಂಡಿದೆ.

ಒಪ್ಪೋ ಫೈಂಡ್ X2 ಸ್ಮಾರ್ಟ್‌ಫೋನ್
ಒಪ್ಪೋ ಫೈಂಡ್ X2 ಸ್ಮಾರ್ಟ್‌ಫೋನ್ 6.7-ಇಂಚಿನ ಕ್ಯೂಎಚ್‌ಡಿ + ಅಲ್ಟ್ರಾ ವಿಷನ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಹೊಂದಿದೆ. 12GB RAM ಮತ್ತು 256GB ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ, 4,200mAh ಬ್ಯಾಟರಿ ಇದೆ, ಅದು 65W SuperVOOC 2.0 ಫ್ಲ್ಯಾಶ್ ಚಾರ್ಜ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ V 5.1, GPS, ಮತ್ತು ಯುಎಸ್ಬಿ ಟೈಪ್-ಸಿ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ ಫೈಂಡ್ X2 ಸ್ಮಾರ್ಟ್‌ಫೋನ್ 12GB RAM + 256GB ಮಾದರಿಗೆ 64,990 ರೂ. ಬೆಲೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಪ್ಪು (ಸೆರಾಮಿಕ್) ಮತ್ತು ಓಷನ್ (ಗ್ಲಾಸ್) ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನು ಭಾರತದಲ್ಲಿ ಒಪ್ಪೊ ಫೈಂಡ್ ಎಕ್ಸ್ 2 ಪ್ರೊ ಸ್ಮಾರ್ಟ್‌ಫೋನ್ ಬೆಲೆಯನ್ನು ಕಂಪನಿಯು ಇನ್ನು ಬಹಿರಂಗಪಡಿಸಿಲ್ಲ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವಾಗ ಮಾರಾಟವಾಗಲಿದೆ ಅನ್ನೊದು ಇನ್ನು ಖಚಿತವಾಗಿಲ್ಲ.


Click it and Unblock the Notifications