ಒಪ್ಪೋ ಫೈಂಡ್‌ X3 ಪ್ರೊ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಫೀಚರ್ಸ್‌ ಬಹಿರಂಗ!

|

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ತನ್ನ ಹೊಸ ಒಪ್ಪೋ ಫೈಂಡ್ X3 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ರಿಯರ್‌ ಕ್ಯಾಮೆರಾ ಸೆಟಪ್ ಫೀಚರ್ಸ್‌ ವಿವರ ಆನ್‌ಲೈನ್‌ ಸೋರಿಕೆಯಾಗಿದೆ. ಇನ್ನು ಒಪ್ಪೊ ಫೈಂಡ್ X3 ಸ್ಮಾರ್ಟ್‌ಫೋನ್‌ ಐಫೋನ್ 12 ಪ್ರೊ ತರಹದ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಒಪ್ಪೋ

ಹೌದು, ಒಪ್ಪೋ ಕಂಪೆನಿ ತನ್ನ ಹೊಸ ಒಪ್ಪೋ ಫೈಂಡ್‌ X3 ಸ್ಮಾರ್ಟ್‌ಫೋನ್‌ ಪರಿಚಯಿಸಲು ವೇದಿಕೆ ಸಿದ್ದ ಪಡಿಸಿಕೊಂಡಿದೆ. ಈ ನಡುವೆ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳೇನು ಅನ್ನೊದು ಆನ್‌ಲೈನ್‌ನಲ್ಲಿ ಸೋರಿಕೆ ಆಗಿದೆ.ಅಲ್ಲದೆ ಈ ಸ್ಮಾರ್ಟ್‌ಫೋನ್‌ನಲ್ಲಿ ಫ್ಲ್ಯಾಷ್-ರಿಂಗ್ಡ್, ಮೂರು ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಇರುತ್ತದೆ ಎನ್ನಲಾಗಿದೆ. ಅಲ್ಲದೆ ಇದರ 25x ಜೂಮ್ ಸಾಮರ್ಥ್ಯವು ಡೆವಿಸ್ ಮೈಕ್ರೋಸ್ಕೋಪ್ ಮೂಲಕ ಆನ್ ಆಗಿ ಇರಿಸಿದೆ ಎಮದು ವರದಿ ಆಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಒಪ್ಪೊ ಫೈಂಡ್ X3 ಪ್ರೊ ಸ್ಮಾರ್ಟ್‌ಫೋನ್‌ 1,440x3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 525PP ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದು 10Hz ನಿಂದ 120Hz ಗೆ ಡೈನಾಮಿಕ್ ಫ್ರೇಮ್ ರಿಫ್ರೆಶ್ ರೇಟ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಒಪ್ಪೋ ಫೈಂಡ್ X3 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಆಗಿದ್ದು, 2X ಆಪ್ಟಿಕಲ್ ಜೂಮ್ ನೀಡುತ್ತದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ಸೆಲ್‌ ಒಳಗೊಂಡಿರುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W SuperVOOC 2.0 ವೈರ್ಡ್ ಚಾರ್ಜಿಂಗ್ ಮತ್ತು 30W VOOC ಏರ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಫೋನ್ ಕಪ್ಪು ಮತ್ತು ನೀಲಿ ಬಣ್ಣಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ, ನಂತರದ ಹಂತದಲ್ಲಿ ವೈಟ್ ಆಯ್ಕೆಯೊಂದಿಗೆ ಬರಲಿದೆ.

Best Mobiles in India

English summary
Oppo Find X3 Pro Camera Specs Leaked Ahead Of Official Launch.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X