OPPO: ಟೆಕ್ ವಲಯದಲ್ಲಿ ಧೂಳೆಬ್ಬಿಸಿದ ಒಪ್ಪೋ ಫೈಂಡ್ X7: 1TB ಸ್ಟೋರೇಜ್ ಸಾಮರ್ಥ್ಯ!
ಹೊಸ ವರ್ಷ ಶುರುವಾಗ್ತಿದ್ದ ಹಾಗೇ ಹೊಸ ಸ್ಮಾರ್ಟ್‌ಫೋನ್‌ಗಳ ಆರ್ಭಟ ಜೋರಾಗಿದೆ. ಜನಪ್ರಿಯ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್ ಎಂಟ್ರಿಯಿಂದ ಟೆಕ್ ವಲಯದಲ್ಲಿ ಹೊಸ ಸಂಚಲನ ಶುರುವಾಗಿದೆ. ಇದೇ ಹಾದಿಯಲ್ಲಿ ಇದೀಗ ಒಪ್ಪೋ ಕೂಡ ತನ್ನ ಹೊಸ ಸ್ಮಾರ್ಟ್‌ಫೋನ್ ಒಪ್ಪೋ ಫೈಂಡ್ X7 ಅನ್ನು ಬಿಡುಗಡೆ ಮಾಡಿದೆ.
ಹೌದು, ಒಪ್ಪೋ ಫೈಂಡ್ X7 ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9300 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒಪ್ಪೋ ಫೈಂಡ್ X7 ಡಿಸ್‌ಪ್ಲೇ ರಚನೆ ಹೇಗಿದೆ?
ಒಪ್ಪೋ ಫೈಂಡ್ X7 (Oppo Find X7)ಸ್ಮಾರ್ಟ್‌ಫೋನ್ 6.78 ಇಂಚಿನ OLED ಕರ್ವ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2780 × 1264 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ. ಇದು 450 PPI ನ ಪಿಕ್ಸೆಲ್ ಸಾಂದ್ರತೆಯನ್ನು ನೀಡಲಿದ್ದು, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸಲಿದೆ. ಜೊತೆಗೆ ವೈಡ್ ಕಲರ್ ಗ್ಯಾಮಟ್ (P3) ಅನ್ನು ಪಡೆದಿದ್ದು, HDR ನಲ್ಲಿ 2300 ನಿಟ್ಸ್ ಹೊಂದಿದೆ. ಇದರೊಂದಿಗೆ ಅಡಾಪ್ಟಿವ್ ರಿಫ್ರೆಶ್ ದರವು 1 ರಿಂದ 120Hz ವರೆಗೆ ಇರಲಿದೆ.
ಒಪ್ಪೋ ಫೈಂಡ್ X7 ಪ್ರೊಸೆಸರ್ ಯಾವುದು?
ಒಪ್ಪೋ ಫೈಂಡ್ X7 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 9300 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14-ಆಧಾರಿತ ColorOS 14 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿದೆ.

ಒಪ್ಪೋ ಫೈಂಡ್ X7 ಕ್ಯಾಮೆರಾ ಸೆಟಪ್ ಏನಿದೆ?
ಒಪ್ಪೋ ಫೈಂಡ್ X7 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ವೈಡ್-ಆಂಗಲ್ ಲೆನ್ಸ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 50-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ. ಒದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ಒಪ್ಪೋ ಫೈಂಡ್ X7 ಬ್ಯಾಟರಿ ಮತ್ತು ಇತರೆ ಸೌಲಭ್ಯ
ಒಪ್ಪೋ ಫೈಂಡ್ X7 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 100W ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಬ್ಲೂಟೂತ್ 5.4, ಮತ್ತು NFC ಕಾರ್ಡ್‌ಗಳನ್ನು ಓದಲು ಮತ್ತು ಬರೆಯಲು NFC ಸಾಮರ್ಥ್ಯಗಳನ್ನು ಒಳಗೊಂಡಿದೆ. ಇದಲ್ಲದೆ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಅಂಡರ್-ಸ್ಕ್ರೀನ್ ಫಿಂಗರ್‌ಪ್ರಿಂಟ್ ಗುರುತಿಸುವಿಕೆ ಮತ್ತು ಮುಖದ ಗುರುತಿಸುವಿಕೆಯನ್ನು ಸಂಯೋಜಿಸುತ್ತದೆ.

ಒಪ್ಪೋ ಫೈಂಡ್ X7 ಬೆಲೆ ಮತ್ತು ಲಭ್ಯತೆ
ಒಪ್ಪೋ ಫೈಂಡ್ X7 ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಬಿಡುಗಡೆ ಆಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್‌ನ 12GB + 256GB ಸೆಟಪ್ ಆಯ್ಕೆಯು 3,999 ಯುವಾನ್ (ಅಂದಾಜು 47,511ರೂ) ಬೆಲೆಗೆ ಹೊಂದಿದೆ. ಇದರ 16GB + 256GB ರೂಪಾಂತರದ ಆಯ್ಕೆಯು 4,299 ಯುವಾನ್ (ಅಂದಾಜು 51,076ರೂ) ಗೆ ಲಭ್ಯವಾಗಲಿದೆ. ಇದರೊಂದಿಗೆ 16GB + 512GB ಸಂರಚನೆಯ ಆಯ್ಕೆಯು 4,599 ಯುವಾನ್ (ಅಂದಾಜು 3,82,368ರೂ) ಬೆಲೆಯನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಸೀ ಮತ್ತು ಸ್ಕೈ, ಡೆಸರ್ಟ್ ಮೂನ್ ಸಿಲ್ವರ್, ಸ್ಮೋಕಿ ಪರ್ಪಲ್ ಮತ್ತು ಸ್ಟಾರಿ ಸ್ಕೈ ಬ್ಲಾಕ್ ಕಲರ್ ಆಯ್ಕೆಗಳಲ್ಲಿ ಬರಲಿದೆ.


Click it and Unblock the Notifications








