Home
ಸುದ್ದಿಜಾಲ

ಎಂಟ್ರಿ ಲೆವೆಲ್‌ನಲ್ಲಿ ಹೊಸ 5G ಸ್ಮಾರ್ಟ್‌ಫೋನ್‌ ಪರಿಚಯಿಸಿದ ಒಪ್ಪೋ! ಹೇಗಿದೆ ಫೀಚರ್ಸ್‌!

ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಒಪ್ಪೋ ಫೋನ್‌ಗಳು ತಮ್ಮ ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳಿಂದ ಗಮನಸೆಳೆದಿವೆ. ಸದ್ಯ ಇದೀಗ ಒಪ್ಪೋ ಕಂಪೆನಿ ಹೊಸ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಒಪ್ಪೋ A1x ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡೈಮೆನ್ಸಿಟಿ 700SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಒಪ್ಪೋ A1x ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇದು ಡ್ಯೂಡ್ರಾಪ್ ನಾಚ್‌ನೊಂದಿಗೆ ಬಿಲ್ಟ್ ಮಾಡಲಾಗಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಮತ್ತು 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ನೀಡಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಎಂಟ್ರಿ ಲೆವೆಲ್‌ನಲ್ಲಿ ಹೊಸ 5G ಸ್ಮಾರ್ಟ್‌ಫೋನ್‌ ಪರಿಚಯಿಸಿದ ಒಪ್ಪೋ!

ಒಪ್ಪೋ A1x ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಹೇಗಿದೆ?

ಒಪ್ಪೋ A1x ಸ್ಮಾರ್ಟ್‌ಫೋನ್‌ 6.56 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1612 x 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 90Hz ರಿಫ್ರೆಶ್ ರೇಟ್‌ ಮತ್ತು 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಲೆವೆಲ್‌ ಅನ್ನು ನೀಡಲಿದೆ. ಇದು 100% sRGB ಕಲರ್‌ ಗ್ಯಾಮಟ್‌ ಅನ್ನು ಬೆಂಬಲಿಸಲಿದೆ.

ಒಪ್ಪೋ A1x ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಯಾವುದು?

ಒಪ್ಪೋ A1x ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 700SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM + 128GB ಮತ್ತು 8GB RAM + 128GB ಇಂಟರ್‌ ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲದ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಿದೆ.

ಎಂಟ್ರಿ ಲೆವೆಲ್‌ನಲ್ಲಿ ಹೊಸ 5G ಸ್ಮಾರ್ಟ್‌ಫೋನ್‌ ಪರಿಚಯಿಸಿದ ಒಪ್ಪೋ!

ಒಪ್ಪೋ A1x ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಒಪ್ಪೋ A1x ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಒಪ್ಪೋ A1x ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌?

ಒಪ್ಪೋ A1x ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿದೆ.

ಎಂಟ್ರಿ ಲೆವೆಲ್‌ನಲ್ಲಿ ಹೊಸ 5G ಸ್ಮಾರ್ಟ್‌ಫೋನ್‌ ಪರಿಚಯಿಸಿದ ಒಪ್ಪೋ!

ಒಪ್ಪೋ A1x ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ

ಒಪ್ಪೋ A1x ಸ್ಮಾರ್ಟ್‌ಫೋನ್‌ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಇದರ 6GB + 128GB ಆಯ್ಕೆಯು ¥1,399 (ಅಂದಾಜು 16,692ರೂ.)ಬೆಲೆಯನ್ನು ಹೊಂದಿದೆ. ಇದರ 8GB + 128GB ಆಯ್ಕೆಯು ¥1,599 (ಅಂದಾಜು 19,076ರೂ) ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕಪ್ಪು ಮತ್ತು ನೀಲಿ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.

ಇದಲ್ಲದೆ ಒಪ್ಪೋ ಕಂಪೆನಿ ಇತ್ತೀಚಿಗೆ ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಒಪ್ಪೋ ರೆನೋ 8T 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಮೈಕ್ರೋ-ಕರ್ವ್ಡ್ ಅಮೋಲೆಡ್‌ ಡಿಸ್‌ಪ್ಲೇ ಆಗಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 4,800mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 67W ಸೂಪರ್‌ವೂಕ್‌ ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Best Mobiles in India

English summary
Oppo has launched a new entry-level 5G smartphone in China. The handset officially goes by Oppo A1x.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+