Just In
- 23 min ago
ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್ಸಂಗ್ ಗ್ಯಾಲಕ್ಸಿ S23! ಫೀಚರ್ಸ್ ನಿರೀಕ್ಷೆ ಏನು?
- 1 hr ago
ChatGPT Effect: AI ಟೂಲ್ಸ್ ಬ್ಯಾನ್ ಮಾಡಲು ಮುಂದಾದ ಬೆಂಗಳೂರಿನ ಈ ಕಾಲೇಜುಗಳು!
- 17 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 18 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
Don't Miss
- News
ರಾಜ್ಯಕ್ಕೆ ಅಮಿತ್ ಶಾ ಆಗಮನ; ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಬಸವರಾಜ ಬೊಮ್ಮಾಯಿ
- Sports
ನಾವು ಆಡುವುದನ್ನು ನೋಡಲು ಜನ ಬಂದಿಲ್ಲ: ಆತನಿಗಾಗಿ ಜನ ಬಂದಿದ್ದಾರೆ ಎಂದ ನ್ಯೂಜಿಲೆಂಡ್ ಕ್ರಿಕೆಟಿಗ
- Lifestyle
ಬೆಳ್ಳಿಯ ಆಭರಣಗಳು ಹೊಳಪಿನಿಂದ ಕೂಡಿರಲು ಈ ಟ್ರಿಕ್ಸ್ ಬಳಸಿ
- Movies
ಮಂಗ್ಲಿ ಹಾಡೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು? ಸ್ಯಾಂಡಲ್ವುಡ್ನಲ್ಲಿ ಕ್ರೇಜ್ ಹೇಗಿದೆ?
- Automobiles
ಟಾಟಾದ ಜನಪ್ರಿಯ ಕಾರುಗಳ ಬೆಲೆ ಏರಿಕೆ: ಘೋಷಣೆ
- Finance
ಹಿಂಡನ್ಬರ್ಗ್ vs ಅದಾನಿ ನಡುವೆ ಎಲ್ಐಸಿ, ಎಸ್ಬಿಐ ಉಳಿತಾಯ ರಿಸ್ಕ್ನಲ್ಲಿದೆಯೇ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಒಪ್ಪೋ ಫೈಂಡ್ X6 ಡಿಸೈನ್ ಬಹಿರಂಗ! ಮಾರುಕಟ್ಟೆಯಲ್ಲಿ ಧೂಳೆಬ್ಬಿಸೋದು ಗ್ಯಾರಂಟಿ!
ಒಪ್ಪೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ಒಪ್ಪೋ ಕಂಪೆನಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಸದ್ಯ ಇದೀಗ ತನ್ನ ಮತ್ತೊಂದು ಹೊಸ ಒಪ್ಪೋ ಫೈಂಡ್ X6 ಸ್ಮಾರ್ಟ್‌ಫೋನ್ ಅನ್ನು ಅನಾವರಣಗೊಳಿಸಲು ಮುಂದಾಗಿದೆ. ಈ ಸ್ಮಾರ್ಟ್‌ಫೋನ್‌ನ ಬಿಡುಗಡೆ ದಿನಾಂಕ ಇನ್ನು ಅಧಿಕೃತವಾಗಿಲ್ಲವಾದರೂ ಇದರ ಡಿಸೈನ್ ಈಗಾಗಲೇ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.

ಹೌದು, ಒಪ್ಪೋ ಕಂಪೆನಿಯ ಒಪ್ಪೋ ಫೈಂಡ್ X6 ಸ್ಮಾರ್ಟ್‌ಫೋನ್ ಡಿಸೈನ್ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಟ್ವಿಟರ್‌ನಲ್ಲಿ ಸೋರಿಕೆಯಾದ ಮಾಹಿತಿಯಂತೆ ಈ ಸ್ಮಾರ್ಟ್‌ಫೋನ್ ಒಪ್ಪೋ ಫೈಂಡ್ X5 ಸರಣಿಗಿಂತ ವಿಭಿನ್ನವಾದ ವಿನ್ಯಾಸವನ್ನು ಹೊಂದಿರಲಿದೆ ಎನ್ನಲಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ಒಪ್ಪೋ ಫೈಂಡ್ X6 ಸ್ಮಾರ್ಟ್‌ಫೋನ್ ಅತ್ಯಾಕರ್ಷಕ ಫೀಚರ್ಸ್‌ಗಳನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ಒಪ್ಪೋ ಫೈಂಡ್ X6 ಫೀಚರ್ಸ್ ಹೇಗಿದೆ?
ಒಪ್ಪೋ ಫೈಂಡ್ X6 ಸ್ಮಾರ್ಟ್‌ಫೋನ್ 6.73 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದರಿಬಹುದು. ಅಲ್ಲದೆ ಈ ಡಿಸ್‌ಪ್ಲೇ ರಚನೆಯ ಅನುಪಾತ 20:9 ರಷ್ಟಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಪಡೆಯುವ ಸಾಧ್ಯತೆಯಿದೆ. ಇದು 120 Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಸೆಸರ್ ಯಾವುದು?
ಒಪ್ಪೋ ಫೈಂಡ್ X6 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಪ್ಲಸ್ ಜನ್ 1SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ v12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯದ ಆಯ್ಕೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.
ಕ್ಯಾಮೆರಾ ಸೆಟ್‌ಅಪ್ ಏನಿದೆ?
ಒಪ್ಪೋ ಫೈಂಡ್ X6 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಇದರ ಸೆಲ್ಫಿ ಕ್ಯಾಮೆರಾ ವಿವರದ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಬ್ಯಾಟರಿ ಮತ್ತು ಇತರೆ
ಒಪ್ಪೋ ಫೈಂಡ್ X6 ಸ್ಮಾರ್ಟ್‌ಫೋನ್ 4700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಗ್ರಾವಿಟಿ ಸೆನ್ಸಾರ್ ಅನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ ಫೈಂಡ್ X6 ಸ್ಮಾರ್ಟ್‌ಫೋನ್ ಬೆಲೆ ವಿವರಗಳು ಇನ್ನು ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನಿಡೋದು ಪಕ್ಕಾ ಆಗಿದೆ. ಬಿಡುಗಡೆ ದಿನಾಂಕ ಬಹಿರಂಗವಾದ ನಂತರ ಈ ಫೋನ್‌ನ ಬೆಲೆ ಬಹಿರಂಗವಾಗಲಿದೆ.
ಇದಲ್ಲದೆ ಒಪ್ಪೋ ಕಂಪೆನಿ ಇತ್ತೀಚಿಗೆ, ಭಾರತದಲ್ಲಿ ಹೊಸ ಒಪ್ಪೋ ರೆನೋ 8 ಪ್ರೊ ಮತ್ತು ರೆನೋ 8 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿವೆ. ಇದಲ್ಲದೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಕೂಡ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ನೀಡಲಿವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470