ದೇಶಿಯ ಮಾರುಕಟ್ಟೆಗೆ ಹೊಸ 5G ಫೋನ್ ಪರಿಚಯಿಸಲು ಸಜ್ಜಾದ ಒಪ್ಪೋ!
ಮೊಬೈಲ್ ಮಾರುಕಟ್ಟೆಯಲ್ಲಿ ಒಪ್ಪೋ ಕಂಪೆನಿ ತನ್ನ ಭಿನ್ನ ಶ್ರೇಣೀಯ ಸ್ಮಾರ್ಟ್‌ಫೋನ್‌ಗಳ ಮೂಲಕ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಒಪ್ಪೋ ಸಂಸ್ಥೆಯು ಇದೀಗ ತನ್ನ K ಸರಣಿಯಲ್ಲಿ 5G ಫೋನ್‌ವೊಂದನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ. ಅದುವೇ ಒಪ್ಪೋ K10 5G ಸ್ಮಾರ್ಟ್‌ಫೋನ್.

ಹೌದು, ಒಪ್ಪೋ ಒಪ್ಪೋ K10 5G ಸ್ಮಾರ್ಟ್‌ಫೋನ್ ಅನ್ನು ಇದೇ ಜೂನ್ 8ರಂದು ಅಧಿಕೃತವಾಗಿ ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಈ ಫೋನ್ ಖರೀದಿಗೆ ಲಭ್ಯವಾಗಲಿದ್ದು, ಬ್ಲ್ಯಾಕ್ ಮತ್ತು ಬ್ಲೂ ಬಣ್ಣಗಳ ಆಯ್ಕೆಯನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ K10 5G ಸ್ಮಾರ್ಟ್‌ಫೋನ್ 1,080x1920 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಒಳಗೊಂಡಿರಲಿದೆ.
ಪ್ರೊಸೆಸರ್ ಸಾಮರ್ಥ್ಯ ಯಾವುದು?
ಒಪ್ಪೋ K10 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಪಡೆದಿರಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ನಲ್ಲಿ ಜೊತೆಗೆ ಕಲರ್‌ಓಎಸ್ 12.1 ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8 GB + 128 GB ಇಂಟರ್ ಸ್ಟೋರೇಜ್ ಹೊಂದಿರಲಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಒಪ್ಪೋ K10 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದರೊಂದಿಗೆ 8 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒಪ್ಪೋ K10 5G ಸ್ಮಾರ್ಟ್‌ಫೋನ್ 33W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದಲ್ಲದೆ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿರಲಿದೆ.
ಒಪ್ಪೋ K10 ಫೀಚರ್ಸ್:
ಒಪ್ಪೋ K10 ಸ್ಮಾರ್ಟ್‌ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.59 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಕಲರ್ ಒಎಸ್ 11.1 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಹೊಂದಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಅದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಪಡೆದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.


Click it and Unblock the Notifications