ದೇಶಿಯ ಮಾರುಕಟ್ಟೆಗೆ ಒಪ್ಪೋ K10 5G ಸ್ಮಾರ್ಟ್‌ಫೋನ್‌ ಎಂಟ್ರಿ!

|

ಒಪ್ಪೋ ಕಂಪೆನಿ ಭಾರತದ ಮಾರುಕಟ್ಟೆಯಲ್ಲಿ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ K ಸರಣಿಯಲ್ಲಿ ಹೊಸ ಒಪ್ಪೋ K10 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ 8 GB RAM ಅನ್ನು ಒಳಗೊಂಡಿದೆ. ಜೊತೆಗೆ 33W ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ.

ದೇಶಿಯ ಮಾರುಕಟ್ಟೆಗೆ ಒಪ್ಪೋ K10 5G ಸ್ಮಾರ್ಟ್‌ಫೋನ್‌ ಎಂಟ್ರಿ!

ಹೌದು, ಒಪ್ಪೋ ಕಂಪೆನಿ ಭಾರತದಲ್ಲಿ ಹೊಸ ಒಪ್ಪೋ K10 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಬೆಂಬಲಿಸುವ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಪ್ರೈಮರಿ ಕ್ಯಾಮೆರಾ ವನ್ನು ಹೊಂದಿದೆ. ಇನ್ನು ಈ ಫೋನ್‌ ಬ್ಲ್ಯಾಕ್ ಕಾರ್ಬನ್ ಮತ್ತು ಬ್ಲೂ ಫ್ಲೇಮ್ ಕಲರ್‌ ಆಯ್ಕೆಗಳಲ್ಲಿ ಲಭ್ಯ ಇದೆ. ಹಾಗಾದರೇ ಒಪ್ಪೋ K10 5G ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ K10 5G ಸ್ಮಾರ್ಟ್‌ಫೋನ್‌ 1,080 x 1920 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಒಳಗೊಂಡಿದೆ.

ಪ್ರೊಸೆಸರ್‌ ಸಾಮರ್ಥ್ಯ ಯಾವುದು?
ಒಪ್ಪೋ K10 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ನಲ್ಲಿ ಜೊತೆಗೆ ಕಲರ್‌ಓಎಸ್‌ 12.1 ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8 GB + 128 GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡದೆ.

ಕ್ಯಾಮೆರಾ ಸೆನ್ಸಾರ್ ವಿಶೇಷ
ಒಪ್ಪೋ K10 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದರೊಂದಿಗೆ 8 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾ ವನ್ನು ಸಹ ಒಳಗೊಂಡಿದೆ.

ದೇಶಿಯ ಮಾರುಕಟ್ಟೆಗೆ ಒಪ್ಪೋ K10 5G ಸ್ಮಾರ್ಟ್‌ಫೋನ್‌ ಎಂಟ್ರಿ!

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಒಪ್ಪೋ K10 5G ಸ್ಮಾರ್ಟ್‌ಫೋನ್‌ 33 W ವೇಗದ ಚಾರ್ಜಿಂಗ್‌ಗೆ ಬೆಂಬಲಿಸುವ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಲ್ಲದೆ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಒಪ್ಪೋ K10 5G ಕೇವಲ ಒಂದು ವೇರಿಯಂಟ್‌ ಆಯ್ಕೆ ಪಡೆದಿದ್ದು, ಅದು 8 GB + 128 GB ಆಗಿದೆ. ಇನ್ನು ಭಾರತದಲ್ಲಿ ಈ ಫೋನಿನ ಬೆಲೆ 17,499 ರೂ. ಆಗಿದೆ. ಇನ್ನು ಈ ಫೋನ್ ಇದೇ ಜೂನ್ 15 ರಿಂದ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಖರೀದಿಗೆ ಲಭ್ಯವಿರುತ್ತದೆ. ಒಪ್ಪೋ K10 5G ಮಿಡ್ನೈಟ್ ಬ್ಲ್ಯಾಕ್ ಮತ್ತು ಓಷನ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ.

Best Mobiles in India

English summary
Oppo K10 5G With Dimensity 810 SoC Launched: Price in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X