Home
ಸುದ್ದಿಜಾಲ

ಬಿಡುಗಡೆಗೆ ರೆಡಿಯಾಗಿದೆ ಒಪ್ಪೋ K11 5G ಸ್ಮಾರ್ಟ್‌ಫೋನ್‌! ಏನೆಲ್ಲಾ ಫೀಚರ್ಸ್‌ ನಿರೀಕ್ಷೆ?

ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಒಪ್ಪೋ ಕಂಪೆನಿ ಬಿನ್ನ ಮಾದರಿಯ ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಇದೀಗ ತನ್ನ ಹೊಸ ಒಪ್ಪೋ K11 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಇದೇ ಜುಲೈ 25 ರಂದು ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ಎಂದು ಹೇಳಲಾಗಿದೆ.

ಹೌದು, ಒಪ್ಪೋ K11 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧವಾಗಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆಗೂ ಮುನ್ನವೇ ಹಲವು ಆನ್‌ಲೈನ್‌ ವೆಬ್‌ಸೈಟ್‌ಗಳಲ್ಲಿ ಫೀಚರ್ಸ್‌ ವಿವರಗಳು ಬಹಿರಂಗವಾಗಿದೆ. ಈ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ಹಲವು ನಿರೀಕ್ಷೆಯನ್ನು ಹುಟ್ಟುಹಾಕಿದೆ. ಹಾಗಾದ್ರೆ ಒಪ್ಪೋ K11 5G ಸ್ಮಾರ್ಟ್‌ಫೋನ್‌ ಅಲ್ಲಿ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಡುಗಡೆಗೆ ರೆಡಿಯಾಗಿದೆ ಒಪ್ಪೋ K11 5G ಸ್ಮಾರ್ಟ್‌ಫೋನ್‌! ಏನೆಲ್ಲಾ ನಿರೀಕ್ಷೆ?

ಒಪ್ಪೋ K11 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಒಪ್ಪೋ K11 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 93.4% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಲಿದೆ. ಜೊತೆಗೆ 1100 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌, 1.07 ಶತಕೋಟಿ ಕಲರ್ಸ್‌ ಮತ್ತು 2,160 ಹೈ-ಫ್ರೀಕ್ವೆನ್ಸಿ ನೀಡಲಿದೆ ಎನ್ನಲಾಗಿದೆ. ಇದರ ಡಿಮ್ಮಿಂಗ್‌ ಸಾಮರ್ಥ್ಯದ ಕೂಡ ಅತ್ಯುತ್ತಮವಾಗಿರಲಿದೆ ಎಂದು ವರದಿಯಾಗಿದೆ.

ಒಪ್ಪೋ K11 5G ಪ್ರೊಸೆಸರ್‌ ಯಾವುದು?
ಒಪ್ಪೋ K11 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 782G SoC ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇದು ಆಂಡ್ರಾಯ್ಡ್‌ 13 ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ 12GB RAM ಮತ್ತು 512GB ಇಂಟರ್‌ ಸ್ಟೋರೇಜ್‌ನಲ್ಲಿ ಬರುವ ನಿರೀಕ್ಷೆಯಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಆದರೆ ಈ ಫೋನ್‌ 8GB ವರ್ಚುವಲ್ RAM ಬೆಂಬಲದೊಂದಿಗೆ ಆನ್‌ಬೋರ್ಡ್ ಮೆಮೊರಿಯನ್ನು 20GB ವರೆಗೆ ವಿಸ್ತರಿಸುವುದಕ್ಕೆ ಅವಕಾಶ ನೀಡಲಿದೆ.

ಒಪ್ಪೋ K11 5G ಕ್ಯಾಮೆರಾ ವಿಶೇಷತೆ
ಒಪ್ಪೋ K11 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿರಬಹುದು. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಇರಲಿದೆ ಎನ್ನಲಾಗಿದೆ. ಜೊತೆಗೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇರಲಿದೆ ಎನ್ನಲಾಗಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಡಿಜಿಟಲ್‌ ಜೂಮ್‌, ಆಟೋ ಫ್ಲ್ಯಾಶ್‌, ಫೇಸ್‌ರ ಡಿಟೆಕ್ಷನ್‌, ಟಚ್‌ ದಿ ಪೋಕಸ್‌ ಅನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಒಪ್ಪೋ K11 5G ಬ್ಯಾಟರಿ ಬ್ಯಾಕ್‌ಅಪ್‌ ನಿರೀಕ್ಷೆ?
ಒಪ್ಪೋ K11 5G ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 80W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ.

ಒಪ್ಪೋ K11 5G ಬೆಲೆ ಮತ್ತು ಲಭ್ಯತೆ
ಒಪ್ಪೋ K11 5G ಸ್ಮಾರ್ಟ್‌ಫೋನ್‌ ಇದೇ ಜುಲೈ 25 ರಂದು ಚೀನಾದಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಸುಮಾರು CNY 2,000 (ಅಂದಾಜು 22,900ರೂ) ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಗ್ಲೇಸಿಯರ್ ಬ್ಲೂ ಮತ್ತು ಮೂನ್ ಶ್ಯಾಡೋ ಗ್ರೇ ಕಲರ್‌ ಆಯ್ಕೆಗಳಲ್ಲಿ ದೊರೆಯಲಿದೆ ಎನ್ನಲಾಗಿದೆ. ಆದರೆ ಇದು ಭಾರತಕ್ಕೆ ಎಂಟ್ರಿ ನೀಡುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

Best Mobiles in India

English summary
Oppo K11 5G Specifications revealed Ahead of July 25 Debut: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+